ಹಾಸನ | ವಿಪಕ್ಷದವರು ಏನೇ ಮಾಡಿದರು ಮುಖ್ಯಮಂತ್ರಿಯನ್ನು ಕುಂದಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಮುಖಂಡರು

Date:

ವಿಪಕ್ಷದ ರಾಜಕೀಯ ನಾಯಕರು ಹಗರಣಗಳ ನೆಪದಲ್ಲಿ ಏನೇ ಮಾಡಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕುಂದಿಸಲು ಸಾಧ್ಯವಿಲ್ಲ ಎಂದು ಹಾಸನ ಜಿಲ್ಲಾ ಘಟಕದ ಕಾಂಗ್ರೆಸ್ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ.

- Advertisement -

ಹಾಸನ ಜಿಲ್ಲಾ ಕಾಂಗ್ರೆಸ್ ಘಟಕದ ಮುಖಂಡರ ನೇತೃತ್ವದಲ್ಲಿ ಪತ್ರಿಕಾ ಹೇಳಿಕೆ ನೀಡಿ, ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ದೇವಪ್ಪ ಮಲ್ಲಿಗೇವಾಳು ಮಾತನಾಡಿ, “ರಾಜ್ಯದ ಸಿಎಂ ಸಿದ್ದರಾಮಯ್ಯನವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಜನಪರ ಕೆಲಸ ಹಾಗೂ ಒಳ್ಳೆಯ ಆಡಳಿತವನ್ನು ಮಾಡುತ್ತಿದ್ದಾರೆ. ಬಿಜೆಪಿಯವರು ಒಬ್ಬ ಹಿಂದುಳಿದ ನಾಯಕ ಸಿಎಂ ಆಗಿದ್ದಾರೆಂದು ಸಹಿಸದೆ ಇಲ್ಲಸಲ್ಲದ ಆರೋಪ ಮಾಡಿ ರಾಜಿನಾಮೆ ಕೇಳುತ್ತಿದ್ದಾರೆ. ಐದು ಗ್ಯಾರಂಟಿಗಳನ್ನು ಜಾರಿಮಾಡಿ ಪ್ರತಿಯೊಂದು ಜಾತಿ ಜನಾಂಗವನ್ನು ಅಭಿವೃದ್ಧಿ ಮಾಡುತ್ತ 40 ವರ್ಷದ ರಾಜಕಾರಣದಲ್ಲಿ ಕಪ್ಪುಚುಕ್ಕೆ ಇಲ್ಲದಂತೆ ರಾಜಕಾರಣ ಮಾಡುತ್ತಿದ್ದಾರೆ” ಎಂದು ವಿರೋಧ ಪಕ್ಷದ ನಾಯಕರ ಮೇಲೆ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಮೈಸೂರು | ಆರೋಗ್ಯ ರಕ್ಷಣೆಯ ನಾವೀನ್ಯತೆಗೆ ಅಂತರ ಶಿಕ್ಷಣ ವಿಧಾನ ಅತ್ಯಗತ್ಯ: ಡಾ ಅನಿಮೇಶ್ ಆಚಾರ್ಜಿ

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರ ಮೇಲೂ ಬೆಂಗಳೂರಿನ ಗಂಗೇನನಳ್ಳಿ, ಡಿನೋಟಿಫಿಕೇಷನ್ ಕೇಸ್ ಇದೆ. ವಿರೋಧ ಪಕ್ಷದ ನಾಯಕ ಆ‌ರ್ ಅಶೋಕ್ ಅವರ ಮೇಲೂ ಕೂಡ ಭೂಹಗರಣಗಳಿವೆ. ಆದರೂ ವಿರೋಧ ಪಕ್ಷದ ರಾಜಕಾರಣಿಗಳು ಸಿಎಂ ಯಾವಾಗ ರಾಜೀನಾಮೆ ಸಲ್ಲಿಸುವವರೆಂದು ಪ್ರಶ್ನಿಸುವುದು ಖಂಡನೀಯ” ಎಂದು ಜಿಲ್ಲಾ ವಕ್ತಾರ ರಾಮಚಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...