ಹಾಸನ | ಆರು ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂಬ ಆದೇಶ ಬಂದಿಲ್ಲ: ಪ್ರಜ್ವಲ್ ರೇವಣ್ಣ

Date:

2019ರ ಲೋಕಸಭಾ ಚುನಾವಣೆ ವಳೆ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಸಂಸತ್‌ ಸದಸ್ಯತ್ವವನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ. ಈ ನಡುವೆ ಅವರು ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲುವಂತಿಲ್ಲ ಎಂದೂ ಕೋರ್ಟ್‌ ಆದೇಶಿಸಿದೆ ಎಂಬ ವದಂತಿಯೂ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಜ್ವಲ್‌ ರೇವಣ್ಣ, “ಆರು ವರ್ಷ ಚುನಾವಣೆಗೆ ಸ್ಪರ್ಧಿಸಬಾರದೆಂದು ಕೋರ್ಟ್‌ ಎಲ್ಲಿ ಆದೇಶಿಸಿದೆ. ಸದಸ್ಯತ್ವವನ್ನು ಅಸಿಂಧುಗೊಳಿಸಲಾಗಿದೆ ಅಷ್ಟೇ” ಎಂದು ಹೇಳಿದ್ದಾರೆ.

- Advertisement -

“ಹಲವು ವಿಚಾರಗಳ ಅಡಿಯಲ್ಲಿ ನನ್ನ ವಿರುದ್ಧ ದೂರು ದಾಖಲಾಗಿವೆ. ಕಳೆದ ಒಂದೂವರೆ ವರ್ಷಗಳಿಂದ ಕೋರ್ಟ್‌ಗೆ ಹಾಜರಾಗುತ್ತಲೇ ಇದ್ದೇನೆ. ಯಾವ ವಿಚಾರದಲ್ಲಿ ತೀರ್ಪು ಬಂದಿದೆ ಎಂಬುದನ್ನು ಅರಿತುಕೊಳ್ಳಬೇಕು. ವಕೀಲರೊಂದಿಗೆ ಚರ್ಚಿಸಿ, ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಕಾನೂನು ಹೋರಾಟ ಮಾಡಲು ಯೋಜಿಸಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

“ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಆದೇಶದಲ್ಲಿ ಹೇಳಲಾಗಿಲ್ಲ. ಸದಸ್ಯತ್ವವನ್ನಷ್ಟೇ ಅಸಿಂಧುಗೊಳಿಸಲಾಗಿದೆ” ಎಂದು ಅವರು ವಿವರಿಸಿದ್ದಾರೆ.

ಸಂಸದ ಪ್ರಜ್ವಲ್‌ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಅವರ ಸಂಸತ್ ಸದಸ್ಯತ್ವವನ್ನು ಅಸಿಂಧುಗೊಳಿಸಬೇಕು ಎಂದು ಆಗ ಬಿಜೆಪಿಯಲ್ಲಿದ್ದ ಎ ಮಂಜು (ಈಗ ಜೆಡಿಎಸ್‌ ಶಾಸಕ) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಪ್ರಜ್ವಲ್ ರೇವಣ್ಣ ಸದಸ್ಯತ್ವವನ್ನು ಅಸಿಂಧುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...