ಹಾಸನ | ಬಿಜೆಪಿ ತೊರೆದ ನಾರ್ವೆ ಸೋಮಶೇಖರ್‌; ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲ

Date:

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ವಂಚಿತ ನಾರ್ವೆ ಸೋಮಶೇಖರ್‌ ಅವರು ಕೇಸರಿ ಪಕ್ಷ ತೊರೆದಿದ್ದು, ಜೆಡಿಎಸ್‌ಅನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಹಾಸನದ ಅಶೋಕ ಹೋಟೆಲ್‌ನಲ್ಲಿ ಜೆಡಿಎಸ್‌ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಅವರು ಸಂಜೆ ಹೊಳೆನರಸೀಪುರ ವಿಧಾನಸಭಾ ವ್ಯಾಪ್ತಿಯ ಗನ್ನಿಕಡದ ನಿವಾಸದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದರು. ಆದರೆ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ವಿದ್ಯುಕ್ತವಾಗಿ ಪಕ್ಷಕ್ಕೆ ಸೇರ್ಪಡೆಯಾಗಬೇಕೆಂದು ಬೆಂಬಲಿಗರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಹಾಸನ, ಸಕಲೇಶಪುರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಲು ನಾರ್ವೆ ಸೋಮಶೇಖರ್‌ ನಿರ್ಧರಿಸಿದ್ದಾರೆ. ಹಾಸನ ಶಾಸಕ ಪ್ರೀತಂ ಗೌಡ ಅವರನ್ನು ಈ ಬಾರಿ ಸೋಲಿಸಲೇಬೇಕು ಎಂದು ಹಠಕ್ಕೆ ಬಿದ್ದಿರುವ ಎಚ್‌.ಡಿ ರೇವಣ್ಣ ಹಾಗೂ ಅವರ ಕುಟುಂಬಕ್ಕೆ ಬಲ ಬಂದಂತಾಗಿದ್ದು, ಸ್ವರೂಪ್‌ ಪ್ರಕಾಶ್‌ ಅವರಿಗೆ ವಿಶ್ವಾಸ ಬಂದಂತಾಗಿದೆ.

ಈ ಸುದ್ದಿ ಓದಿದ್ದೀರಾ? ಶ್ರವಣಬೆಳಗೊಳ | ಹುಟ್ಟೂರಿನ ಋಣ ತೀರಿಸಲು ಎಂದೂ ಸಾಧ್ಯವಿಲ್ಲ: ಶಾಸಕ ಬಾಲಕೃಷ್ಣ

ಕಳೆದ ಚುನಾವಣೆಯಲ್ಲಿ ಸಕಲೇಶಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾರ್ವೆ ಸೋಮಶೇಖರ್‌ ಅವರು ಕೆಲವೇ ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಈ ಬಾರಿ ಬಿಜೆಪಿಯಿಂದ ಟಿಕೆಟ್‌ ಲಭಿಸುತ್ತದೆ ಎಂಬ ವಿಶ್ವಾಸದಿಂದ ಇದ್ದ ನಾರ್ವೆ ಸೋಮಶೇಖರ್ ಅವರನ್ನು ಬಿಜೆಪಿ ವರಿಷ್ಠರು ಒಪ್ಪಲಿಲ್ಲ. ತಮ್ಮದೇ ರಾಜಕೀಯ ಲೆಕ್ಕಾಚಾರದಲ್ಲಿದ್ದ ಪ್ರೀತಂ ಗೌಡ ಅವರು ಸಿಮೆಂಟ್‌ ಮಂಜು ಅವರಿಗೆ ಟಿಕೆಟ್‌ ಕೊಡಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಈ ಬಾರಿ ಇಬ್ಬರನ್ನು ಸೋಲಿಸಬೇಕು ಎಂಬ ಕಾರಣದಿಂದ ನಾರ್ವೆ ಸೋಮಶೇಖರ್‌ ಜೆಡಿಎಸ್‌ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...