ಹಾಸನ | ತಡೆಯಾಜ್ಞೆ‌ ಜಾಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಮುಂದಾದ ಅಧಿಕಾರಿಗಳು; ರೈತರ ಆಕ್ರೋಶ

Date:

ಹಾಸನದ ವಿಮಾನ ನಿಲ್ದಾಣ ಕಾಮಗಾರಿಗೆ ಸಂಬಂಧಿಸಿದಂತೆ ನ್ಯಾಯಾಲಯದ ತಡೆಯಾಜ್ಞೆಯಿರುವ ಜಾಗದಲ್ಲಿ ಕೆಐಎಡಿಬಿ ಅಧಿಕಾರಿಗಳು ಏಕಾಏಕಿ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿ ರೈತರು ಅಧಿಕಾರಿಗಳೊಂದಿಗೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ್ದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ಪರಿಸ್ಥಿತಿ ಆವರಿಸಿತ್ತು.

- Advertisement -

ವಿಮಾನ ನಿಲ್ದಾಣ ಕಾಮಗಾರಿ ವ್ಯಾಪ್ತಿಯಲ್ಲಿ ಬರುವ ಬೂವನಹಳ್ಳಿಯ ಸರ್ವೆ ನಂಬರ್ 44/48,‌ 44/56ರಲ್ಲಿ ಭೂಮಾಲೀಕರು ಹಾಗೂ ಕೆಐಎಡಿಬಿ ಅಧಿಕಾರಿಗಳ ನಡುವೆ ಪರಿಹಾರದ ವಿಚಾರದಲ್ಲಿ ಗೊಂದಲವಿತ್ತು. ನಿಗಧಿತ ಸ್ಥಳದಲ್ಲಿ ಕಾಮಗಾರಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಆದರೂ ಕ್ಯಾರೆ ಎನ್ನದ ಅಧಿಕಾರಿಗಳು ಶನಿವಾರ ಬೆಳ್ಳಂ ಬೆಳಿಗ್ಗೆಯೇ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಮುಂದಾಗಿರುವುದರಿಂದ ರೈತರು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶಾಸಕ ಸ್ವರೂಪ್ ಪ್ರಕಾಶ್ ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದು, ರೈತರು ಹಾಗೂ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದರು. ಈ ವೇಳೆ ಕಾಮಗಾರಿ ನಿಲ್ಲಿಸಲು ಸಾಧ್ಯವಿಲ್ಲವೆಂದ ವಿಶೇಷ ಭೂ ಸ್ವಾಧೀನಾಧಿಕಾರಿ ವೆಂಕಟರಾಜು ಮಾತಿಗೆ ಕೆರಳಿದ ರೈತರು ಸ್ಥಳದಲ್ಲಿ ಕೆಲಸ ಮಾಡುತ್ತಿದ್ದವರ ವಿರುದ್ಧ ಗಲಾಟೆ ಆರಂಭಿಸಿದರು. ಈ ವೇಳೆ ಎಚ್ಚೆತ್ತ ಅಧಿಕಾರಿಗಳು ಜನವರಿ 22ರ ಬುಧವಾರ ರೈತರ ಸಭೆ ನಡೆಸಿ ರೈತರೊಂದಿಗೆ ಮಾತುಕತೆ ನಡೆಸಿ, ಇರುವ ಸಮಸ್ಯೆ ಇತ್ಯರ್ಥಪಡಿಸಿ ನಂತರ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು. ಇದರಿಂದಾಗಿ ಪರಿಸ್ಥಿತಿ ಸದ್ಯ ತಿಳಿಗೊಂಡಿದೆ. ಈ ವೇಳೆ ಶಾಸಕರು ಕೂಡ ಮಾಧ್ಯಮದೊಂದಿಗೆ ಮಾತನಾಡಿ ಕಾಮಗಾರಿ ಬಗ್ಗೆ ತಿಳಿಸಿದರು. ನಂತರ ರೈತರು ಕೂಡ ತಮ್ಮ ನಿರ್ಧಾರವನ್ನು ಮಾಧ್ಯಮದೊಂದಿಗೆ ಹಂಚಿಕಂಡರು.

ರೈತರು ಕೋರ್ಟ್ ತಡೆಯಾಜ್ಞೆ ಪ್ರತಿಯನ್ನು ನೀಡಿದರೂ ಕೂಡ ಸೌಜನ್ಯಕ್ಕಾದರೂ ತಮ್ಮ ವಾಹನದಿಂದ ಇಳಿಯದೆ ವಾಹನದಲ್ಲಿಯೇ ಕುಳಿತು ಕಾಮಗಾರಿ ನಿಲ್ಲಿಸಬೇಡಿ ಮುಂದುವರೆಸಿ ಏನು ಮಾಡುತ್ತಾರೋ ಮಾಡಿಕೊಳ್ಳಲಿ ಎಂದು ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿ ವೆಂಕಟರಾಜು ಉಡಾಫೆಯಿಂದ ಮಾತನಾಡಿದರು. ಉಡಾಫೆ ವರ್ತನೆ ರೈತರ ತೀವ್ರ ಆಕ್ರೋಶಕ್ಕೆ ಕಾರಣವಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಸತಿ, ನಿವೇಶನ ರಹಿತರು ʼವಸತಿ, ನಿವೇಶನ ಪಡೆಯಲು ಜಾಗೃತಿ ಸಭೆʼ

100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ: “ಕಾಮಗಾರಿ ಆರಂಭಿಸುವ ಮೊದಲೇ 100ಕ್ಕೂ ಅಧಿಕ ಮಂದಿ ಪೊಲೀಸರನ್ನು ಭದ್ರತೆಗಾಗಿ ಕೆಐಎಡಿಬಿ ಅಧಿಕಾರಿಗಳು ಕರೆಸಿಕೊಂಡಿದ್ದರು. ವಿಮಾನ ನಿಲ್ದಾಣ ಕಾಮಗಾರಿಯ ಸದುದ್ದೇಶಕ್ಕಾಗಿ ಜಾಗ ನೀಡಿದ್ದೇವೆ. ನಮಗೂ ವಿಮಾನ ನಿಲ್ದಾಣ ಕಾಮಗಾರಿ ಬೇಗ ಪೂರ್ಣಗೊಳ್ಳಬೇಕೆಂಬ ಆಶಯವಿದೆ. ಆದರೆ ಅಧಿಕಾರಿಗಳು ಪೊಲೀಸರನ್ನು ಮುಂದಿಟ್ಟುಕೊಂಡು ರೈತರಿಗೆ ಪರಿಹಾರ ನೀಡದೆ ಬೆದರಿಸುವ ತಂತ್ರ ಅನುಸರಿಸುತ್ತಿದ್ದಾರೆ. ಇದು ರೈತ ಸಮೂಹದ ಮೇಲೆ ಸರ್ಕಾರಗಳು, ಜನಪ್ರತಿನಿಧಿಗಳು ಇಟ್ಟಿರುವ ಗೌರವಕ್ಕೆ ಹಿಡಿದ ಕೈಗನ್ನಡಿಯಾಗಿದೆ” ಎಂದು ರೈತರು ಆಕ್ರೋಶ ಹೊರಹಾಕಿದರು.

ಕಣ್ಮುಚ್ಚಿ ಕುಳಿತ ಕೆಪಿಟಿಸಿಎಲ್ ಅಧಿಕಾರಿಗಳು: ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ 220 ಕೆವಿ ವಿದ್ಯುತ್ ಮಾರ್ಗದ ಅಡಿಯಲ್ಲಿ ಕೆಐಎಡಿಬಿ ಅಧಿಕಾರಿಗಳು ಬೃಹತ್ ಯಂತ್ರಗಳನ್ನು ಬಳಸಿ ಕಾಮಗಾರಿ ನಡೆಸುತ್ತಿದ್ದರೂ ಕೂಡ ನಮಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ಕೆಪಿಟಿಸಿಎಲ್ ಅಧಿಕಾರಿಗಳು ವರ್ತಿಸಿದ್ದು, ಅವರ ಕಾರ್ಯದಕ್ಷತೆಯನ್ನು ಸಾರ್ವಜನಿಕರು ಪ್ರಶ್ನಿಸುವಂತೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...