ಹಾಸನ | ಎಸ್‌ಎಫ್‌ಐ ಹೋರಾಟಕ್ಕೆ ಮಣಿದ ಅಧಿಕಾರಿಗಳು; ಹಾಸ್ಟೆಲ್‌ ವಾರ್ಡನ್‌ ಚಂದ್ರಕಲಾ ವರ್ಗಾವಣೆ

Date:

ಎಸ್‌ಎಫ್ಐ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳ ಹೋರಾಟಕ್ಕೆ ಮಣಿದ ಅಧಿಕಾರಿಗಳು, ಹಾಸನ ಜಿಲ್ಲೆಯ ಹೊಳೆನರಸೀಪುರ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಾರ್ಡನ್‌ ಚಂದ್ರಕಲಾ ಅವರನ್ನು ಕೆಲಸದಿಂದ ತೆಗೆದಿದ್ದು, ಬೇರೆಡೆಗೆ ವರ್ಗಾಯಿಸಿದ್ದಾರೆ.

- Advertisement -

ಸದರಿ ವಸತಿ ನಿಲಯ ಅವ್ಯವಸ್ಥೆಯಿಂದ ಕೂಡಿದ್ದು, ಮೂಲಸೌಕರ್ಯಗಳ ಮರೀಚಿಕೆಯಾಗಿದೆ. ಅಲ್ಲದೆ ಹಾಸ್ಟೆಲ್ ವಾರ್ಡನ್‌ ಕರ್ತವ್ಯದಲ್ಲಿ ಲೋಪದೋಷ ಕಂಡುಬಂದಿರುವುದಾಗಿ ಆರೋಪಗಳು ಕಂಡುಬಂದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿದ್ಯಾರ್ಥಿಗಳ ಸಮಸ್ಯೆಯ ವಿಚಾರ ಕುರಿತು ಹಲವು ಸಂಘಟನೆಯವರು ಹೋರಾಟ ನಡೆಸಿದ್ದರಲ್ಲದೆ, ಪತ್ರಿಕಾಗೋಷ್ಠಿ ಕೂಡ ನಡೆಸಿದ್ದರು. ಅಲ್ಲದೇ, ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಕೂಡ ಸಲ್ಲಿಸಿದ್ದರು.

ಅಲ್ಲದೇ, ಈ ಬಗ್ಗೆ ಈ ದಿನ.ಕಾಮ್‌ ಸೆಪ್ಟೆಂಬರ್‌ 10ರಂದು ಹಾಸನ | ವಸತಿ ನಿಲಯದ ಅವ್ಯವಸ್ಥೆ ಪ್ರಶ್ನಿಸಿದರೆ ಹಾಸ್ಟೆಲ್ ವಾರ್ಡನ್‌ನಿಂದ ಬೆದರಿಕೆ: ವಿದ್ಯಾರ್ಥಿನಿಯರ ಆರೋಪ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿ ಕರ್ತವ್ಯಲೋಪ ಎಸಗಿದ್ದ ವಾರ್ಡನ್‌ ಚಂದ್ರಕಲಾ ಅವರನ್ನು ಕೆಲಸದಿಂದ ತೆಗೆಯಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದೂದ್ ಪೀರ್ ಈ ದಿನ.ಕಾಮ್ ಜೊತೆ ಮಾತನಾಡಿ, “ಹೊಳೆನರಸೀಪುರದ ಮೆಟ್ರಿಕ್ ಪೂರ್ವ ಬಾಲಕಿಯ ವಸತಿನಿಲಯದಲ್ಲಿ ವಾರ್ಡನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಚಂದ್ರಕಲಾ ಅವರನ್ನು ಕೆಲಸದಿಂದ ತೆಗೆದಿದ್ದು, ಆ ಜಾಗಕ್ಕೆ ಚಂದ್ರಿಕಾ ಅವರನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಹೊಸ ಹಾಸ್ಟೆಲ್ ಕಟ್ಟಡ ನಿರ್ಮಿಸಿಕೊಡುವಂತೆ ಸಂಬಂಧಿಸಿದವರಿಗೆ ಮನವಿ ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್, ಪೃಥ್ವಿ, ಸಿಪಿಐಎಂನ ಮುಖಂಡ ಧರ್ಮೇಶ್, ಕರ್ನಾಟಕ ಪ್ರಾಂತ ರೈತ ಸಂಘದ ನವೀನ್, ಹಾಗೂ ಮಾದಿಗ ದಂಡೋರ ಸಮಿತಿ ವಿಜಯ್ ಕುಮಾರ್ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಹಾಸ್ಟೆಲ್‌ಗೆ ಭೇಟಿ ನೀಡಿ, ವಿದ್ಯಾರ್ಥಿನಿಯರ ಸಮಸ್ಯೆಯನ್ನು ಆಲಿಸಿದ್ದರು. ನಂತರ ಈ ದಿನ.ಕಾಮ್ ಕೂಡ ಈ ಬಗ್ಗೆ ಸುದ್ದಿ ಮಾಡಿ ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಗಮನಕ್ಕೆ ತಂದಿತ್ತು.

ಪ್ರಕರಣದ ಹಿನ್ನೆಲೆ

ಹಾಸ್ಟೆಲ್‌ನಲ್ಲಿ ತೀರಾ ಕಳಪೆ ಗುಣಮಟ್ಟದ ಆಹಾರವನ್ನು ತರಿಸುವುದು ಮತ್ತು ಸ್ವಚ್ಛತೆ ಇಲ್ಲದಿರುವುದರಿಂದ ಈಗಾಗಲೆ ನಾನಾ ರೋಗಗಳು ಹರಡಿ ವಿದ್ಯಾರ್ಥಿನಿಯರು ಆಸ್ಪತ್ರೆ ಸೇರಿದ್ದಾರೆ. ಸಾಮಾಜಿಕವಾಗಿ ಶೋಷಣೆಗೆ ಒಳಗಾದ ಸಮುದಾಯದಿಂದ ದಲಿತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿನಿಯರು ಇರುವ ಹಾಸ್ಟೆಲ್‌ ಇದಾಗಿದ್ದು, ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ವಾತಾವರಣ ನಿರ್ಮಿಸಲು ಬೇಕಿರುವ ಯಾವುದೇ ಮೂಲಸೌಕರ್ಯಗಳಿಲ್ಲ.

ಈ ಸುದ್ದಿ ಓದಿದ್ದೀರಾ? ಗದಗ | ಸೌಲಭ್ಯಗಳಿಲ್ಲದೆ ಬದುಕುತ್ತಿರುವ ಅಲೆಮಾರಿ ಸಮುದಾಯ: ಇನ್ನೂ ಈಡೇರದ ಜನಪ್ರತಿನಿಧಿಗಳ ಭರವಸೆ

ವಿದ್ಯಾರ್ಥಿಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಯಾರಿಗೆ ದೂರು ಕೊಟ್ಟರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲವೆಂದು ವಾರ್ಡನ್‌ ಉಡಾಫೆ ಉತ್ತರ ನೀಡುತ್ತಿರುವುದಾಗಿ ಆರೋಪ ಕೇಳಿಬಂದಿತ್ತು. ಸಮಸ್ಯೆಗಳನ್ನು ಬಗೆಹರಿಸುವ ಬದಲು ಅವ್ಯವಸ್ಥೆ ಬಗ್ಗೆ ಪ್ರಶ್ನಿಸುವ ವಿದ್ಯಾರ್ಥಿಗಳಿಗೆ ಧಮ್ಮಿ, ಬೆದರಿಕೆಗಳನ್ನು ಹಾಕುತ್ತ ದೌರ್ಜನ್ಯ ಮಾಡುತ್ತಿದ್ದರು ಎನ್ನಲಾಗಿತ್ತು.

ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಖಾಲಿ ಮಾಡಿಕೊಂಡು ಹೋಗಿರೆಂದು ಬೆದರಿಕೆ ಹಾಕುತ್ತಿರುವುದು, ವಿದ್ಯಾರ್ಥಿಗಳಲ್ಲಿ ದ್ವೇಷದ ಕಿಚ್ಚು ಹಚ್ಚಿ ಜಗಳ ತಂದಿಡುತ್ತಿದ್ದು, ಹಾಸ್ಟೆಲ್ ಬಿಟ್ಟು ಹೋಗುವುದಕ್ಕೂ ವಿದ್ಯಾರ್ಥಿಗಳಿಗೆ ತಲಾ ₹5000 ಹಣ ನೀಡುತ್ತೇನೆ. ಇಲ್ಲವೆಂದರೆ ಹಾಗೇ ಹೊರಗೆ ಹಾಕುತ್ತೇನೆಂದು ಬೆದರಿಕೆ ಒಡ್ಡುತ್ತಿದ್ದುದಾಗಿ ಹಾಸ್ಟೆಲ್‌ ವಿದ್ಯಾರ್ಥಿಗಳು ಈ ದಿನ.ಕಾಮ್ ಜೊತೆಗೆ ತಮ್ಮ ನೋವು ತೋಡಿಕೊಂಡಿದ್ದರು.

WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...