ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ, ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ ಹಾಗೂ ಸಹಾಯಕ ಪರಿಸರ ಎಂಜಿನಿಯರ್ ಕೆ ಆರ್ ವೆಂಕಟೇಶ್ ₹10.50 ಲಕ್ಷದ ಟೆಂಡರ್ ಬಿಲ್ ನೀಡಲು ₹1.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರೆಂದು ಗುತ್ತಿಗೆದಾರರೊಬ್ಬರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.
ಈ ಸುದ್ದಿ ಓದಿದ್ದೀರಾ?: ಹಾಸನ | ಚಲಿಸುತ್ತಿದ್ದ ವೇಳೆ ಹೊತ್ತಿ ಉರಿದ ಖಾಸಗಿ ಬಸ್; ಪ್ರಯಾಣಿಕರು ಪಾರು
ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳೂ ಕೂಡ ಹಣದ ಸಹಿತ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ಅಧಿಕಾರಿಗಳ ಸೆರೆಯಾಗಿದ್ದಾರೆ.
