ಹಾಸನ | ಹೃದಯಾಘಾತದಿಂದ ಓರ್ವ ಸಾವು; ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

Date:

ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಆಲೂರು ಪಟ್ಟಣದಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ.

- Advertisement -

ಆಲೂರಿನ ಪ್ರಕೃತಿ ನಗರ ನಿವಾಸಿ ನವೀದ್ ಶರೀಫ್ (49) ಅವರಿಗೆ ನಿನ್ನೆ ರಾತ್ರಿ ಸುಮಾರು 12 ಗಂಟೆ ವೇಳೆಗೆ ಹೃದಯಾಘಾತದ ಲಕ್ಷಣಗಳು ಕಾಣಿಸಿಕೊಂಡಿದ್ದವು. ತಕ್ಷಣವೇ ಕುಟುಂಬದವರು ಅವರನ್ನು ಚಿಕಿತ್ಸೆಗಾಗಿ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದರೂ, ಆಸ್ಪತ್ರೆಯ ಬಾಗಿಲು ಮುಚ್ಚಿದ್ದ ಕಾರಣ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ. ಆಸ್ಪತ್ರೆಯಲ್ಲಿ ಹಾಜರಿದ್ದ ಸಿಬ್ಬಂದಿಗಳು ಹಾಗೂ ವೈದ್ಯರು ಸಹಾಯಕ್ಕೆ ಮುಂದೆ ಬರದ ಹಿನ್ನೆಲೆ, ಕುಟುಂಬದವರು ಶರೀಫ್ ಅವರನ್ನು ಹಿಂತಿರುಗಿ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಸ್ವಲ್ಪ ಹೊತ್ತಿನಲ್ಲೇ ಅವರು ಮನೆಯಲ್ಲಿ ಪ್ರಾಣಬಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಸ್ಥಳೀಯರು ಮತ್ತು ಶರೀಫ್ ಅವರ ಬಂಧುಗಳು ಆಸ್ಪತ್ರೆಯ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಅವರು ಆಸ್ಪತ್ರೆಯ ಬಾಗಿಲುಗಳನ್ನು ತೆರೆದು ವೈದ್ಯರನ್ನು ರಾತ್ರಿ ಪಾಳಿಯಲ್ಲಿ ಹಾಜರಿರಿಸಲು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: ಹಾಸನ | ಚನ್ನರಾಯಪಟ್ಟಣ ಬಳಿ ಭೀಕರ ಅಪಘಾತ; ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನೆಯ ಕುರಿತು ತನಿಖೆ ಆರಂಭವಾಗಿದ್ದು, ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...