ಹಾಸನ | ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು, ಆರೋಪ: ಡಿಎಚ್‌ಒ ಡಾ. ಅನಿಲ್ ಕುಮಾರ್ ದಿಢೀರ್‌ ಭೇಟಿ

Date:

ಕಳೆದ ನಾಲ್ಕು ದಿನಗಳ ಹಿಂದೆ ಆಲೂರು ತಾಲೂಕು ಆಸ್ಪತ್ರೆಗೆ ಹೃದಯಾಘಾತದಿಂದ ಬಂದ ರೋಗಿಯೊಬ್ಬರು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾರೆಂಬ ಆರೋಪಗಳು ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಹಾಸನ ಡಿಎಚ್‌ಒ ಡಾ. ಅನಿಲ್ ಕುಮಾರ್ ಬೆಳ್ಳಂ ಬೆಳಿಗ್ಗೆ ದಿಢೀರ್‌ ಭೇಟಿ ನೀಡಿ, ಅಲ್ಲಿನ ವೈದ್ಯ ಸಿಬ್ಬಂದಿಯ ನಿರ್ಲಕ್ಷ್ಯ ಆರೋಪಗಳ ಬಗ್ಗೆ ತೀವ್ರ ಪರಿಶೀಲನೆ ನಡೆಸಿದರು.

- Advertisement -

ಆಸ್ಪತ್ರೆಯ ಪ್ರತಿಯೊಂದು ವಿಭಾಗವನ್ನು ಖುದ್ದು ಪರಿಶೀಲಿಸಿದ ಡಾ. ಅನಿಲ್ ಕುಮಾರ್ ಅವರು ರೋಗಿಗಳೊಂದಿಗೆ ಮಾತನಾಡಿ, ದೂರುಗಳನ್ನು ಆಲಿಸಿದರು. ಆಸ್ಪತ್ರೆಯಲ್ಲಿ ಔಷಧ ಸರಬರಾಜು, ಚಿಕಿತ್ಸಾ ಸೌಲಭ್ಯಗಳು, ಸ್ವಚ್ಛತೆ ಮತ್ತು ಸಿಬ್ಬಂದಿಯ ಕೆಲಸದ ಸಮರ್ಥತೆಯ ಬಗ್ಗೆ ವಿವರವಾದ ವಿಚಾರಣೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ರೋಗಿಗಳ ಆರೋಗ್ಯವೇ ನಮ್ಮ ಮೊದಲ ಆದ್ಯತೆ. ಯಾವುದೇ ನಿರ್ಲಕ್ಷ್ಯವನ್ನು ಅನುಮತಿಸುವುದಿಲ್ಲ” ಎಂದು ಹೇಳಿದರು.

ಆರೋಪಗಳ ಹಿನ್ನೆಲೆ

ಕಳೆದ ಬುಧವಾರ ಆಲೂರು ತಾಲೂಕು ಆಸ್ಪತ್ರೆಗೆ ಬಂದ 52 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತವೆಂದು ದಾಖಲಾಗಿದ್ದರು. ಆದರೆ, ವೈದ್ಯರು ಸೂಕ್ತ ಚಿಕಿತ್ಸೆ ನೀಡದೆ, ಸಮಯಕ್ಕೆ ಸರಿಯಾಗಿ ಔಷಧ ನೀಡದೆ ಮತ್ತು ಸೂಕ್ತ ಯಂತ್ರಸಾಧನಗಳನ್ನು ಬಳಸಿ ಚಿಕಿತ್ಸೆ ನೀಡದ ಕಾರಣ ಅವರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ರೋಗಿಯ ಕುಟುಂಬಸ್ಥರು ಹಾಸನ ಜಿಲ್ಲಾ ಆರೋಗ್ಯ ಇಲಾಖೆಗೆ ದೂರು ನೀಡಿದ್ದು, ಇದು ಸಾರ್ವಜನಿಕ ಚರ್ಚೆಗೆ ಒಳಗಾಗಿತ್ತು. ಈ ಘಟನೆಯ ಹಿನ್ನೆಲೆಯಲ್ಲಿ ಡಾ. ಅನಿಲ್ ಕುಮಾರ್ ಅವರು ಆಲೂರು ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ.

ಡಾ. ಅನಿಲ್ ಕುಮಾರ್ ಅವರು ಆಸ್ಪತ್ರೆಯ ವೈದ್ಯರು, ನರ್ಸ್‌ಗಳು ಮತ್ತು ಇತರ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ, “ಯಾವುದೇ ಸಮಯದಲ್ಲಿ ರೋಗಿಗಳು ಬಂದರೂ ತಕ್ಷಣ ಚಿಕಿತ್ಸೆ ನೀಡಬೇಕು. ನಿರ್ಲಕ್ಷ್ಯದಿಂದ ಯಾರಾದರೂ ರೋಗಿಗಳ ಜೀವಕ್ಕೆ ಆಪತ್ತು ತಂದೊಡ್ಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಎಚ್ಚರಿಸಿದರು.

ಅಲ್ಲದೆ, ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರ ಕೊರತೆಯ ಬಗ್ಗೆ ಗಮನ ಹರಿಸಿ, “ಈಗಾಗಲೇ ಮಕ್ಕಳ ರೋಗ ಚಿಕಿತ್ಸೆ ತಜ್ಞರನ್ನು(ಪೀಡಿಯಾಟ್ರಿಷನ್) ನೇಮಿಸಲಾಗಿದೆ. ಕೂಡಲೇ ಕಾರ್ಯಾರಂಭವಾಗುತ್ತದೆ. ಇದರಿಂದ ಭವಿಷ್ಯದಲ್ಲಿ ಮಕ್ಕಳ ಚಿಕಿತ್ಸೆಗೆ ಯಾವುದೇ ತೊಡಕು ಉಂಟಾಗುವುದಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಾಸನ ಜಿಲ್ಲಾ ಆರೋಗ್ಯ ಇಲಾಖೆಯಡಿ 68 ತಾಲೂಕು ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಇತ್ತೀಚೆಗೆ ಜಿಲ್ಲೆಯಲ್ಲಿ ಹೃದಯಾಘಾತದಿಂದ 21 ಮಂದಿ ಸಾವು ಸಂಭವಿಸಿರುವುದು ಆರೋಗ್ಯ ಸೇವೆಗಳ ಸುಧಾರಣೆಗೆ ಒತ್ತು ನೀಡುತ್ತಿದೆ. ಡಾ. ಅನಿಲ್ ಕುಮಾರ್‌ರ ನೇತೃತ್ವದಲ್ಲಿ STEMI(ST-ಎಲಿವೇಷನ್ ಮೈಯೋಕಾರ್ಡಿಯಲ್ ಇನ್ಫಾರ್ಕ್ಷನ್) ಯೋಜನೆಯಡಿ ತಾಲೂಕು ಆಸ್ಪತ್ರೆಗಳಲ್ಲಿ ತಕ್ಷಣ ಚಿಕಿತ್ಸೆಗೆ ಒತ್ತು ನೀಡಲಾಗುತ್ತಿದ್ದು, ಬೆಂಗಳೂರು ಜಯದೇವ್ ಇನ್‌ಸ್ಟಿಟ್ಯೂಟ್‌ನೊಂದಿಗೆ ಟೆಲಿಮೆಡಿಸಿನ್ ಸೌಲಭ್ಯ ಲಭ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕಬ್ಬು ಬೆಳೆಗಾರರಿಗೆ ನ್ಯಾಯ ಕೊಡಿಸಲು ಸರ್ಕಾರ ಬದ್ಧ: ಸಚಿವ ಎಂಬಿ ಪಾಟೀಲ ಭರವಸೆ

ಅನಿಲ್‌ ಕುಮಾರ್‌ ಭೇಟಿಯಿಂದ ಆಲೂರು ಆಸ್ಪತ್ರೆಯ ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸಿದ್ದು, ರೋಗಿಗಳಿಗೆ ಉತ್ತಮ ಸೇವೆ ನೀಡುವ ಚಟುವಟಿಕೆಗಳನ್ನು ಆರಂಭಿಸಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯಿಂದ ಇಂತಹ ದಿಢೀರ್ ಪರಿಶೀಲನೆಗಳನ್ನು ಮುಂದುವರೆಸಿ, ಸಾರ್ವಜನಿಕ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸುವ ಗುರಿ ಹೊಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...