ಹಾಸನ | ಪ್ಯಾರಾ ಮಿಲಿಟರಿ ಪಥಸಂಚಲನದ ವೇಳೆ ಹೂವು ಎರಚಿದ ಜನ

Date:

Advertisements
  • ಕ್ಷೇತ್ರದ ಜನರಲ್ಲಿ ವಿಶ್ವಾಸ ಮೂಡಿಸಲು ಪಥಸಂಚಲನ
  • ಪ್ಯಾರಾ ಮಿಲಿಟರಿ ಜೊತೆ ಪೊಲೀಸ್‌, ಗೃಹರಕ್ಷಕ ಸಿಬ್ಬಂದಿ ಭಾಗಿ

ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ ಆಗಿದೆ. ಚುನಾವಣೆಗಳ ಸಮಯದಲ್ಲಿ ನಡೆಯುವ ಗಲಾಟೆಗಳ ಬಗ್ಗೆ ಜನರ ಆತಂಕ ದೂರ ಮಾಡಿ, ಶಾಂತಿಯುತ ಮತದಾನಕ್ಕಾಗಿ ಪ್ಯಾರಾ ಮಿಲಿಟರಿ ಪಡೆ, ಪೊಲೀಸರು ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಸಕಲೇಶಪುರ ಪಟ್ಟಣದಲ್ಲಿ ಗುರುವಾರ ಪಥಸಂಚಲನ ನಡೆಸಿದರು.

ತಲಾ 48 ಮಂದಿಯನ್ನು ಹೊಂದಿರುವ ಮೂರು ಪ್ಯಾರಾ ಮಿಲಿಟರಿ ಪಡೆಗಳು ಈಗಾಗಲೇ ಪಟ್ಟಣಕ್ಕೆ ಬಂದಿವೆ. ಇದೇ ತಂಡದೊಂದಿಗೆ ಕೆಎಸ್‌ಆರ್‌ಪಿ, ಡಿಆರ್, ಸಿವಿಲ್ ಪೊಲೀಸರು ಸಹ ಗುರುವಾರ ನಗರದಲ್ಲಿ ಪಥ ಸಂಚಲನ ಮಾಡಿದ್ದಾರೆ.

ನೂರಾರು ಭದ್ರತಾ ಸಿಬ್ಬಂದಿ ಸಶಸ್ತ್ರಗಳೊಂದಿಗೆ ಪ್ರಮುಖ ಬೀದಿಯಲ್ಲಿ ಸಂಚರಿಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಿಂದ ಆರಂಭವಾದ ಪಥ ಸಂಚಲನವು ಚಂಪಕನಗರ ವೃತ್ತ, ಹೊಸ ಬಸ್ ನಿಲ್ದಾಣ, ಅಜಾದ್ ರಸ್ತೆ, ಅಶೋಕ್ ರಸ್ತೆ ಮೂಲಕ ಕುಶಾಲನಗರದವರೆಗೂ ನಡೆಯಿತು‌.

Advertisements
ಸಕಲೇಶಪುರ 01

ಬಿ ಎಂ ರಸ್ತೆಯ ಹಳೆ ಬಸ್ ನಿಲ್ದಾಣ ಸಮೀಪ ರಸ್ತೆಯಲ್ಲಿ ಜನರು ಭದ್ರತ ಸಿಬ್ಬಂದಿ ಮೇಲೆ ಹೂವು ಹಾಕಿ ಸ್ವಾಗತಿಸಿದರು. ಕೆಲವರು ಅವರಿಗೆ ಗೌರವ ಪೂರ್ವಕವಾಗಿ ಕೈ ಮುಗಿದರೆ, ಮಕ್ಕಳು ಕೈಕುಲುಕಿ ಸ್ವಾಗತಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ತಪ್ಪಿದ ಟಿಕೆಟ್‌; ಬಿಕ್ಕಿಬಿಕ್ಕಿ ಅತ್ತ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ

ಪಥಸಂಚಲನದಲ್ಲಿ ಸಕಲೇಶಪುರ ಉಪವಿಭಾಗಾಧಿಕಾರಿ ಅನ್ಮೋಲ್ ಜೈನ್, ಸಹಾಯಕ ಪೊಲೀಸ್ ಅಧೀಕ್ಷಕ ಎಚ್ ಎನ್ ಮಿಥುನ್ ರೈ, ವೃತ್ತ ನಿರೀಕ್ಷಕರಾದ ಚೈತನ್ಯ, ಪಿ ಕೆ ರಾಜು, ಪಿಎಸ್ಐ ಗಳಾದ ಬಸವರಾಜ್, ನವೀನ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X