ಪ್ರಜ್ವಲ್ ಲೈಂಗಿಕ ಹಗರಣ | ಮಹಿಳೆಯರ ಘನತೆ ಕುಗ್ಗಿಸುತ್ತಿರುವ ಮೀಮ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ದೂರು

Date:

Advertisements

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ, ಮಹಿಳೆಯರ ಘನತೆಗೆ ಕುಂದುಂಟಾಗುವಂತಹ ವೀಡಿಯೋಗಳು, ಮೀಮ್ಸ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ. ಈ ವಿಡಿಯೋಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು, ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಪೊಲೀಸರಿಗೆ ದೂರು ನೀಡಲಾಗಿದೆ.

ಹಾಸನ ಜಿಲ್ಲೆ ಕರ್ನಾಟಕ ಪ್ರಾಂತ ರೈತ ಸಂಘ, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಹಾಗೂ ಭಾರತ ವಿದ್ಯಾರ್ಥಿ ಫೆಡರೇಷನ್ ಸಂಘಟನೆಯ ಮುಖಂಡರು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ.

ಈ ದೂರಿನಲ್ಲಿ, “ಹಾಸನ ಜಿಲ್ಲೆಯಲ್ಲಿನ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣವು ಪೆನ್‌ಡ್ರೈವ್‌ಗಳ ಮೂಲಕ ಬಹಿರಂಗವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಈ ವಿಷಯವನ್ನು ಬಳಸಿಕೊಂಡು ಕಿಡಿಗೇಡಿಗಳು ವ್ಯಂಗ್ಯದ ವಿಡಿಯೋಗಳನ್ನು (ಮೀಮ್ಸ್‌ಗಳನ್ನು) ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ವಿಡಿಯೋಗಳು ಲೈಂಗಿಕ ಹಗರಣವನ್ನು ಗೌಣ ಮಾಡಿ, ಅತ್ಯಚಾರದಂತಹ ಅಪರಾಧವನ್ನು ಹಾಸ್ಯದ ಸರಕಾಗಿ ಬದಲಾಯಿಸುತ್ತಿವೆ” ಎಂದು ತಿಳಿಸಿದ್ದಾರೆ.

Advertisements

WhatsApp Image 2024 05 04 at 5.28.30 PM 1

“ಈ ಬೆಳವಣಿಗೆಯು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುತ್ತದೆ. ಸಂತ್ರಸ್ತರನ್ನು ಲಘುವಾಗಿ ನೋಡುವುದಲ್ಲದೆ ಹಾಸನ ಜಿಲ್ಲೆಯ ಎಲ್ಲ ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡುವಂತಿವೆ. ಇದು ಸಂತ್ರಸ್ತರಿಗೆ ಎಲ್ಲ ಮಹಿಳೆಯರಿಗೆ ಹಾಗೂ ಕುಟುಂದವರಿಗೆ ಮಾನಸಿಕ ಒತ್ತಡವನ್ನು ಉಂಟು ಮಾಡುತ್ತದೆ. ಮತ್ತು ಸಂತ್ರಸ್ತರು ಮುಂದೆ ಬಂದು ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಲು ಹಿಂಜರಿಯುವಂತೆ ಮಾಡಬಹುದು” ಎಂದು ದೂರುದಾರ ಸಂಘಟನೆಯ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟು ಮಾಡುತ್ತಿರುವ, ಸಂತ್ರಸ್ತ ಮಹಿಳೆಯರಿಗೆ ಭೀತಿ ಹುಟ್ಟಿಸುವ, ಎಲ್ಲ ಮಹಿಳೆಯರ ಘನತೆಗೆ ಧಕ್ಕೆ ತರುವ, ಅತ್ಯಾಚಾರದಂತಹ ಅಪರಾಧವನ್ನು ಗೌಣವಾಗಿ ನೋಡುವ, ಈಗ ನಡೆಯುತ್ತಿರುವ ತನಿಖೆಯ ಗಹನತೆಯನ್ನು ಹಗುರವಾಗಿ ನೋಡುವಂತಹ ಈ ಮೀಮ್ಸ್ ವಿಡಿಯೋಗಳನ್ನು ತಯಾರಿಸಿದವರು ಮತ್ತು ಅವುಗಳನ್ನು ಪ್ರಸಾರ ಮಾಡುತ್ತಿರುವವರ ವಿರುದ್ದ ಐಪಿಸಿ, ಐಟಿ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೇ, ಈ ರೀತಿಯ ಮೀಮ್ಸ್ ವಿಡಿಯೋಗಳನ್ನು ಮಾಡುವುದು ಮತ್ತು ಹಂಚಿಕೊಳ್ಳುವುದನ್ನು ತಡೆಯಲು ಈ ಕೂಡಲೇ ಸಾರ್ವಜನಿಕ ಎಚ್ಚರಿಕೆಯನ್ನು ಮಾಧ್ಯಮಗಳ ಮೂಲಕ ನೀಡಬೇಕು. ಈಗಾಗಲೇ ವಾಟ್ಸಾಪ್ ಮೂಲಕ ಹರಿದಾಡುತ್ತಿರುವ ಲೈಂಗಿಕ ದೌರ್ಜನ್ಯದ ಫೋಟೋ ಮತ್ತು ವಿಡಿಯೋಗಳು ಹಾಗೂ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಂ, ವಾಟ್ಸ್ ಆಪ್ ಮತ್ತಿತರೆ ತಾಣಗಳಲ್ಲಿ ಪ್ರಸಾರವಾಗುತ್ತಿದೆ. ಮಹಿಳೆಯರ ಘನತೆಯನ್ನು ಕುಗ್ಗಿಸುವ ಮತ್ತು ಸಾಮಾಜಿಕ ಸ್ವಾಸ್ಥ್ಯ ಹಾಳುಮಾಡುವ ವಿಡಿಯೋಗಳನ್ನು ಸೈಬರ್ ವಿಭಾಗ ಕೂಡಲೇ ವಶಪಡಿಸಿಕೊಂಡು, ಡಿಲೀಟ್ ಮಾಡಿ, ಕ್ರಮ ಕೈಗೊಳ್ಳಬೇಕು ಮತ್ತು ಹಂಚಿಕೆಯಾಗದಂತೆ ತಡೆಗಟ್ಟಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ದೂರು ನೀಡಿದ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಹಾಸನ ಜಿಲ್ಲಾಧ್ಯಕ್ಷರಾದ ಎಚ್.ಆರ್. ನವೀನ್‌ಕುಮಾರ್, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಹಾಸನ ಜಿಲ್ಲಾಧ್ಯಕ್ಷರಾದ ಎಂ.ಜಿ.ಪೃಥ್ವಿ, ಭಾರತ ವಿದ್ಯಾರ್ಥಿ ಫೆಡರೇಷನ್ ಹಾಸನ ಜಿಲ್ಲಾ ಕಾರ್ಯದರ್ಶಿ ವಿ.ರಮೇಶ್ ಸೇರಿದಂತೆ ಮತ್ತಿತರರಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ ಸಂದರ್ಭದಲ್ಲಿ ಮೀಮ್ಸ್‌ ವಿಡಿಯೋಗಳ ಲಿಂಕ್ ಅನ್ನು ಕೂಡ ದೂರುದಾರರು ನೀಡಿದ್ದಾರೆ.

1. ಹಾಸನದ ಮಹಿಳೆಯರನ್ನು ಮದುವೆಯಾಗಬಾರದು ಎನ್ನುವ ಅರ್ಥದ ವಿಡಿಯೋ ಲಿಂಕ್:

2. ಉನ್ನತ ಟೆಕ್ನಾಲಜಿ ಬಳಸಿ ಇಂಟರ್‌ನೆಟ್‌ನಲ್ಲಿ ಹಂಚಬೇಕು ಎಂದು ಸಲಹೆ ನೀಡುವ ವಿಡಿಯೋ ಲಿಂಕ್:

https://www.facebook.com/share/r/tDCsQJ1r9kmcMHBa/?mibextid=0VwfS7

3. ಹಾಸನಕ್ಕೆ ಹೋಗಿ ಪೆನ್ ಡ್ರೈವ್ ಹುಡುಕಿ ತರೋಣ ಎನ್ನುವ ವಿಡಿಯೋದ ಲಿಂಕ್:

https://www.facebook.com/share/r/sf3M9QdHysagtUrD/?mibextid=0VwfS7

ಇವುಗಳ ಹೊರತಾಗಿಯೂ ಅನೇಕ ಮೀಮ್ಸ್ ವಿಡಿಯೋಗಳು ಬಂದಿರುವ ಸಾಧ್ಯತೆ ಇದ್ದು ಅವುಗಳನ್ನು ಪತ್ತೆ ಮಾಡಬೇಕಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X