ಹಾಸನ | ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ತೀರ್ಪುಗಾರರಾಗಿ ಪ್ರಸನ್ನ ಕುಮಾರ್‌ ಆಯ್ಕೆ

Date:

Advertisements

ನವದೆಹಲಿಯಲ್ಲಿ ನಡೆಯಲಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಹಾಸನ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ)ನ ಸಹಾಯಕ ಕಾರ್ಯದರ್ಶಿ ಹಾಗೂ ಅಥ್ಲೆಟಿಕ್ಸ್ ತರಬೇತಿದಾರ ಪ್ರಸನ್ನ ಕುಮಾ‌ರ್ ಎಸ್‌ ಎಲ್‌ ಅವರು ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ.

ಜಗತ್ತಿನಲ್ಲಿ ಒಲಂಪಿಕ್ ನಂತರ ಅತಿ ದೊಡ್ಡ ಕ್ರೀಡಾಕೂಟವೆಂದು ಪರಿಗಣಿಸಲ್ಪಡುವ ಈ ಸ್ಪರ್ಧೆ ಸೆಪ್ಟೆಂಬ‌ರ್ 25ರಿಂದ ಅಕ್ಟೋಬರ್ 5ರವರೆಗೆ ನಡೆಯಲಿದೆ. ಪ್ಯಾರಾ ಕಮಿಟಿ ಆಫ್ ಇಂಡಿಯಾ ಆಯೋಜಿಸುತ್ತಿರುವ ಈ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ 110ಕ್ಕೂ ಹೆಚ್ಚು ದೇಶಗಳ 1700 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.

ಅಂತಾರಾಷ್ಟ್ರೀಯ ತೀರ್ಪುಗಾರರ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರಸನ್ನಕುಮಾ‌ರ್ ಹಾಸನದಿಂದ ಆಯ್ಕೆಯಾದ ಏಕೈಕ ತೀರ್ಪುಗಾರರಾಗಿದ್ದಾರೆ. ಅವರ ಸಾಧನೆಯಿಂದ ಹಾಸನ ಜಿಲ್ಲೆಗೆ ಹೆಮ್ಮೆ ತಂದಿದೆ.

ಇದನ್ನೂ ಓದಿ: ಹಾಸನ | ಸಹಕಾರ ಸಂಘಗಳ ಸ್ಥಾಪನೆಯಿಂದ ಆರ್ಥಿಕ ಬಲವರ್ಧನೆ ಸಾಧ್ಯ: ಶಾಸಕ ಸ್ವರೂಪ್ ಪ್ರಕಾಶ್

ಮುಂದಿನ ದಿನಗಳಲ್ಲಿ ಪ್ರಸನ್ನಕುಮಾ‌ರ್ ಅವರು ಒಲಂಪಿಕ್ಸ್‌ನಲ್ಲೂ ತೀರ್ಪುಗಾರರಾಗಿ ಆಯ್ಕೆಯಾಗಲೆಂದು ಹಾಸನ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್, ಜಿಲ್ಲಾ ಕ್ರೀಡಾಂಗಣದ ತರಬೇತಿದಾರರು, ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶುಭ ಹಾರೈಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

Download Eedina App Android / iOS

X