ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ತಹಶೀಲ್ದಾರರ ಭ್ರಷ್ಟಾಚಾರ ವಿರೋಧಿಸಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ರೈತ ನಾಯಕರು ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಸಿಐಟಿಯು, ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ ನೇತೃತ್ವದಲ್ಲಿ ಕಳೆದ 13 ದಿನಗಳಿಂದ ಆಹೋರಾತ್ರಿ ಧರಣಿ ನಡೆಯುತ್ತಿತ್ತು. ಇಂದು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಜಟಾಪಟಿಯಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೋಲಾರ | ಮಕ್ಕಳು ಬೆಳೆಯುವುದನ್ನು ನೋಡುವುದೇ ಚಂದ: ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್ ಆರ್ ನವೀನ್ ಕುಮಾರ್, ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆಯ ಎಚ್ ಎಸ್ ಮಂಜುನಾಥ್, ಹಿರಿಯ ದಲಿತ ಮುಖಂಡರಾದ ಎಚ್ ಕೆ ಸಂದೇಶ್, ವಾಸುದೇವ ಕಲ್ಕೆರೆ, ರೈತ ಮುಖಂಡರಾದ ರವಿಗೌಡಯ್ಯ, ಚಂದ್ರಹಾಸ್, ಶಂಕರಣ್ಣರವರು ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.