ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

Date:

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ, ಬೇಲೂರು ಭಾಗದಿಂದ ಚಿಕ್ಕಮಗಳೂರಿಗೆ ತೆರಳಬೇಕಿರುವ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ ಬಸ್ ಗಳಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ.

- Advertisement -

ಸರ್ಕಾರಿ ಬಸ್‌ಗಳು ಫುಲ್ ರಶ್ ಆಗಿ ಬರುವುದರಿಂದ ವಿದ್ಯಾರ್ಥಿಗಳಿಗೆ ಬಸ್ ಗಳನ್ನು ನಿಲ್ಲಿಸದೇ ಸಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ-ಕಾಲೇಜು, ಪರೀಕ್ಷಾ ಕೇಂದ್ರಗಳಿಗೆ ತೆರಳಲಾಗದೇ ಸಮಸ್ಯೆ ಎದುರಿಸುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪರೀಕ್ಷೆ ಸಂದರ್ಭದಲ್ಲಿಯೂ ಈ ರೀತಿ ಸಮಸ್ಯೆಯಾಗುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ. ಇಂದು ಪರೀಕ್ಷೆ ನಿಗದಿಯಾಗಿದೆ. ನಾಲ್ಕು ದಿನಗಳ ಹಿಂದೆಯೇ ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ಮನವಿ ಮಾಡಿದ್ದೆವು ಆದಾಗ್ಯೂ ಸಂಬಂಧಪಟ್ಟ ಅಧಿಕಾರಿಗಳು ಬಸ್ ಬಿಟ್ಟಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ ವಿದ್ಯಾರ್ಥಿಗಳು.

ಬಸ್‌ಗಳಿಲ್ಲದೇ ಪರದಾಡಿದ ವಿದ್ಯಾರ್ಥಿಗಳು ನೇರವಾಗಿ ಬೇಲೂರು ಬಸ್ ನಿಲ್ದಾಣಕ್ಕೆ ಆಗಮಿಸಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಸಾರಿಗೆ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...