ಹಾಸನ | ಕೆ.ಎಸ್.ಆರ್.ಟಿ.ಸಿ ದಲಿತ ನೌಕರ; ಬರ್ಬರ ಹತ್ಯೆ ಖಂಡಿಸಿ ಪ್ರತಿಭಟನೆ 

Date:

ಹಾಸನ ಜಿಲ್ಲೆಯ ಆಲೂರು ತಾಲ್ಲೂಕು ರಾಜನಹಳ್ಳಿಯಲ್ಲಿ ಪ. ಜಾತಿಗೆ ಸೇರಿದ ವ್ಯಕ್ತಿಯನ್ನು ಬರ್ಬರ ಹತ್ಯೆ ಖಂಡಿಸಿ, ಹಾಗೂ ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸಿ, ಹತ್ಯೆಗೈದವರನ್ನು ಶಿಕ್ಷೆಗೆ ಗುರಿಪಡಿಸಿ, ವ್ಯಕ್ತಿಯ ಕುಟುಂಬಕ್ಕೆ ನ್ಯಾಯಕ್ಕಾಗಿ ಸಿಐಟಿಯು,ಡಿಎಚ್ ಎಸ್, ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ಬರ್ಬರವಾಗಿ ಹತ್ಯೆಯಾದ ವ್ಯಕ್ತಿ ವೀರಪ್ಪ (58), ಫೆ. 17ರಂದು ಕೆ.ಎಸ್.ಆರ್.ಟಿ.ಸಿ. ಚಾಲಕರಾಗಿದ್ದರು. ಆರ್.ಡಿ. ವೀರಪ್ಪ ರವರನ್ನು ಅವರ ಜಮೀನಿನಲ್ಲೇ ಹತ್ಯೆಗೈದು ಅತ್ಯಂತ ಬರ್ಬರವಾಗಿ ಪೆಟ್ರೋಲ್ ಹಾಕಿ ಸುಟ್ಟುಹಾಕಿರುವ ಪ್ರಕರಣ ಇಡೀ ಜಿಲ್ಲೆಯನ್ನೆ ಬೆಚ್ಚಿಬೀಳಿಸಿರುವ ಹಾಗೂ ಕಂಡು ಕೇಳಿರದ ಅತ್ಯಂತ ಅಮಾನುಷ ಘಟನೆಯಾಗಿದೆ. ಇಂತಹ ಬರ್ಬರ ಘಟನೆ ನಡೆದು 15 ದಿನಗಳು ಕಳೆಯುತ್ತಾ ಬಂದರೂ ಈ ಪ್ರಕರಣದ ತನಿಖೆ ಅತ್ಯಂತ ನಿಧಾನಗತಿಯಲ್ಲಿದ್ದು, ಹತ್ಯೆಗೈದಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳದಿರುವುದು ಪೊಲೀಸ್ ತನಿಖೆಯ ಮೇಲೆಯೇ ಅ‌ನುಮಾನಗಳನ್ನು ಮೂಡಿಸುತ್ತಿದೆ. ಜೊತೆಗೆ ಇದು ಕೃತ್ಯ ನಡೆಸಿದವರು ಕಾನೂನನ್ನೂ ಕಣ್ಮರೆಸಿ ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಈ ಹತ್ಯೆ ಪ್ರಕರಣ ಮೇಲ್ನೊಟಕ್ಕೆ ಆಸ್ತಿ ವಿವಾದಕ್ಕೆ ದಾಯಾದಿಗಳು ಹತ್ಯೆ ಮಾಡಿರಬಹುದೆಂದು ಕಂಡರೂ ವೀರಪ್ಪರವರನ್ನು ಈ ರೀತಿಯಾಗಿ ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿರುವುದನ್ನು ನೋಡಿದರೆ ಇದೊಂದು ವ್ಯವಸ್ಥಿತ ಪಿತೂರಿಯನ್ನು ರೂಪಿಸಿ ಸಂಚುಮಾಡಿ ಹತ್ಯೆ ಮಾಡಿರುವಂತಿದೆ. ವೀರಪ್ಪ ಅವರ ಹತ್ಯೆಯ ಹಿಂದೆ ಮೇಲ್ಜಾತಿಗೆ ಸೇರಿದ ಹಾಗೂ ಆರ್ಥಿಕ ಮತ್ತು ರಾಜಕೀಯ ಪ್ರಭಾವ ಹೊಂದಿರುವ ಕಾಣದ ಕೈಗಳು ಸೇರಿ ಅತ್ಯಂತ ವ್ಯವಸ್ಥಿಯವಾಗಿ ಸಂಚು ನಡೆಸಿ ಕೃತ್ಯ ನಡೆಸಿರಬಹುದೆಂಬಂತೆ ಅನುಮಾನ ನಮಗಿದೆ.

ಆದ್ದರಿಂದ ಪೊಲೀಸ್ ಇಲಾಖೆಯು ಸಮಗ್ರವಾಗಿ ಎಲ್ಲಾ ಆಯಾಮಗಳಲ್ಲೂ ಅತ್ಯಂತ ತ್ವರಿತಗತಿಯಲ್ಲಿ ತನಿಖೆ ನಡೆಸಬೇಕು. ಮತ್ತು ಸರ್ಕಾರವು ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೂ ಶಿಫಾರಸ್ಸು ಮಾಡುವ ಮೂಲಕ ಹತ್ಯೆಗೈದವರನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಈ ಮೂಲಕ ಆಗ್ರಹ ಪಡಿಸುತ್ತಾ ವೀರಪ್ಪ ಅವರ ಸಾವು ಮತ್ತು ಅವರ ಕುಟುಂಬಕ್ಕೆ ನ್ಯಾಯ‌ ದೊರಕಿಸಬೇಕೆಂದು ಒತ್ತಾಯಿಸಿ‌ ಮನವಿ ಮಾಡುತ್ತೇವೆ. ತನಿಖೆಯನ್ನು ತೀವ್ರಗೊಳಿಸಿ ತಪ್ಪಿತಸ್ಥರನ್ನು ಕೂಡಲೇ ಬಂದಿಸದಿದ್ದಲ್ಲಿ ವೀರಪ್ಪನವರ ಸಾವಿಗೆ ನ್ಯಾಯ ಸಿಗುವವರೆಗೂ ತೀವ್ರವಾದ ಬೃಹತ್ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಈ ಮೂಲಕ ಸಿಐಟಿಯು, ಡಿಎಚ್ ಎಸ್, ಮಾದಿಗ ದಂಡೂರ ಮೀಸಲಾತಿ ಹೋರಾಟ ಸಮಿತಿಯಿಂದ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ಪೆಟ್ರೋಲ್ ಸುರಿದು ಸಾರಿಗೆ ನೌಕರನ ಬರ್ಬರ ಹತ್ಯೆ

ಈ ವೇಳೆ ಧರ್ಮೇಶ್ ಸಿಐಟಿಯು, ಟಿ.ಆರ್ ವಿಜಯ್ ಕುಮಾರ್, ಪೃಥ್ವಿ ಎಂ.ಜಿ, ರಾಜಶೇಖರ್ ಹುಲಿಕಲ್, ನಾರಾಯಣದಾಸ್, ಎಚ್ ಆರ್ ನವೀನ್ ಕುಮಾರ್, ರಾಜು ಗೊರೂರು, ಕೃಷ್ಣದಾಸ್, ಅಂಬುಗ ಮಲ್ಲೇಶ್ ಹಾಗೂ ದಲಿತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...