ಹಾಸನ | ಎಐಯುಟಿಯುಸಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನಾ ಧರಣಿ

Date:

Advertisements

ಕಟ್ಟಕಡೆಯ ಜನರನ್ನೂ ಆರೋಗ್ಯವಂತರನ್ನಾಗಿಡಲು ಆಶಾ ಕಾರ್ಯಕರ್ತೆಯರು ಹಗಲು-ರಾತ್ರಿ ಶ್ರಮಿಸುತ್ತಿದ್ದು, ನಮ್ಮ ನ್ಯಾಯಯುತ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ಸಾವಿರಾರು ಜನ ಆಶಾ ಕಾರ್ಯಕರ್ತೆಯರು ಎಐಯುಟಿಯುಸಿ ನೇತೃತ್ವದಲ್ಲಿ ಹಾಸನ ಡಿಸಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು.

ಇದೆ ವೇಳೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷ ಜಿ. ಹನುಮೇಶ್ ಮಾತನಾಡಿ, “ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ. ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯಾವುದೇ ಆರೋಗ್ಯ ಸಂಬಂಧಿತ ಬೇಡಿಕೆಗಳಿಗೆ ಆಶಾ ಮೊದಲ ಕರೆ ಕೇಂದ್ರವಾಗಿದೆ. ಜನತೆಯ ಮತ್ತು ಸರ್ಕಾರದ ನಿರೀಕ್ಷೆಯಂತೆ ಆಶಾ ತನ್ನ ಸೇವೆಯಿಂದ ಕಟ್ಟಕಡೆಯ ಜನರನ್ನೂ ಆರೋಗ್ಯವಂತರನ್ನಾಗಿಡಲು ಹಗಲು-ರಾತ್ರಿ ಶ್ರಮಿಸುತ್ತಿರುವರು. ಇವರ ಸೇವೆಗೆ ಸಮುದಾಯದಿಂದ ಸಿಗುವ ಗೌರವಾದರಗಳು ಸಂತಸ ನೀಡಿವೆಯಾದರೂ, ಸೇವೆ ಪಡೆದುಕೊಳ್ಳುವ ನಮ್ಮ ಸರ್ಕಾರಗಳು ಇವರ ಸೇವೆಗೆ ತಕ್ಕ ಪ್ರತಿಫಲ ನೀಡದೆ ನಿರಾಸೆಯಲ್ಲಿರುವಂತೆ ಮಾಡಿವೆ” ಎಂದರು.

ಏಪ್ರಿಲ್ 2025ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.10,000 ಗಳ ಗೌರವಧನವನ್ನು ನೀಡಲಾಗುವುದು. ಅದನ್ನು ಹೊರತುಪಡಿಸಿ, ಕಾಂಪೋನೆಂಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್‌ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, ರೂ. 10,000 ಗ್ಯಾರಂಟಿಯಾಗಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು. ಈ ಕುರಿತು ಕೂಡಲೇ ಸರ್ಕಾರದಿಂದ ಆದೇಶಿಸಬೇಕು ಎಂದು ಒತ್ತಾಯಿಸಿದರು.
ಈ ವರ್ಷದ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಳ ಮಾಡಲಾಗುವುದು” ಎಂದರು.

Advertisements

“ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.1000 ಹೆಚ್ಚಿಸಿದಂತೆ 42,000 ಆಶಾ ಕಾರ್ಯಕರ್ತೆಯರಿಗೆ ರೂ.1000 ಹೆಚ್ಚಳ ಮಾಡಬೇಕು. ಆದರೆ ಈ ಬಜೆಟ್ ನಲ್ಲಿ ಕೇವಲ 15,004 ಆಶಾಗಳಿಗೆ ಕಡಿಮೆ ಇದ್ದ ತಂಡ ಆಧಾರಿತ ಪ್ರೋತ್ಸಾಹಧನ ರೂ.1400 ಮಾತ್ರ ನೀಡಲಾಗಿದೆ. ಕೆಲವು ಬಹುದಿನಗಳ ಬೇಡಿಕೆಗಳ ಬಗ್ಗೆ ಸೂಕ್ತಕ್ರಮ ಕೈಗೊಳ್ಳಲು ಮಾನ್ಯ ಮುಖ್ಯಮಂತ್ರಿಗಳು ನಿರ್ದೇಶಿಸಿರುತ್ತಾರೆ. ಈ ತೀರ್ಮಾನಗಳನ್ನು ಆರೋಗ್ಯ ಇಲಾಖೆಯ ಮಾನ್ಯ ಆಯುಕ್ತರು ಸರ್ಕಾರದ ಪರವಾಗಿ ಪ್ರತಿಭಟನಾ ಸ್ಥಳ ಫ್ರೀಡಂ ಪಾರ್ಕ್ಗೆ ಆಗಮಿಸಿ ಸಾವಿರಾರು ಆಶಾಗಳ ಮುಂದೆ ಬಂದು ಘೋಷಣೆ ಮಾಡಿದರು. ನಂತರ ಹೋರಾಟ ಹಿಂತೆಗೆದುಕೊಳ್ಳಲಾಯಿತು. ಮಾಧ್ಯಮಗಳಲ್ಲೂ ಕೂಡ ಅಧಿಕೃತವಾಗಿ ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿರುತ್ತಾರೆ. ಆಡಳಿತ ಪಕ್ಷದ ಹಲವಾರು ಸಚಿವರುಗಳು, ಶಾಸಕರು ಈ ಬಗ್ಗೆ ಪೋಸ್ಟಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಆದರೆ ನೋವಿನ ವಿಷಯವೆಂದರೆ ಇಲ್ಲಿಯವರಗೆ 7 ತಿಂಗಳು ಕಳೆದರೂ ಈ ಕುರಿತು ಸ್ಪಷ್ಟ ಆದೇಶ ಹೊರಬಿದ್ದಿಲ್ಲ ಎಂದು ಬೇಸರವ್ಯಕ್ತಪಡಿಸಿದರು. ಆಶಾಗಳಲ್ಲಿಯೇ ಒಬ್ಬರನ್ನು ಕಳೆದ 10 ವರ್ಷಗಳಿಂದ 20 ಆಶಾಗಳಿಗೆ ಒಬ್ಬರಂತೆ ಸುಮರು 2000 ಸುಗಮಕಾರರಾಗಿ ಕೆಲಸಕ್ಕೆ ಪಡೆದುಕೊಂಡು ಧಿಡೀರನೆ ತೆಗೆದು ಹಾಕಿರುವರು. 60 ವರ್ಷ ವಯಸ್ಸಿನ ಆಶಾ ಕಾರ್ಯಕರ್ತೆಯರಿಗೆ ಧಿಡೀರನೆ ತೆಗೆದು ನಿವೃತ್ತಿ ಮಾಡಿರುತ್ತಾರೆ. 17 ವರ್ಷದಿಂದ ಸೇವೆ ಮಾಡಿದ ಈ ಆಶಾಗೆ ಯಾವುದೇ ಪರಿಹಾರ ನೀಡದೆ ಬೀದಿಗೆ ತಳ್ಳಿರುವರು” ಎಂದು ಆರೋಪಿಸಿದರು.

“ಈಗಾಗಲೇ ರಾಜ್ಯದ ಆಶಾಗಳು ಕೋಟ್ಯಂತರ ರೂ.ಗಳ ನಷ್ಟವನ್ನು ಈ ಆನ್ಸೆನ್ ದಾಖಲಾತಿಯಿಂದ ಅನುಭವಿಸುತ್ತಿರುವರು. ಇದರಿಂದ ಕಳೆದುಕೊಳ್ಳುವ ಆತಂಕವನ್ನು ಅನುಭವಿಸುತ್ತಿರುವರು ಎಂದು ತಮ್ಮ ಅಳಲು ತೋಡಿಕೊಂಡರು. ಜನಸಂಖ್ಯೆ ವಿಂಗಡಣೆಯನ್ನು ಈಗಾಗಲೇ ಅಲ್ಲಿಯ ಭೌಗೋಳಿಕರಣಕ್ಕೆ ತಕ್ಕಂತೆ ವಿಂಗಡಿಸಿದ್ದಾರೆ. ಮತ್ತಷ್ಟು ಜನಸಂಖ್ಯೆ ಹೆಚ್ಚಿಸಿದಲ್ಲಿ ಆಶಾಗಳಿಗೆ ಕಾರ್ಯನಿರ್ವಹಿಸಲು ತೊಂದರೆ ಆಗುತ್ತದೆ. 3-4 ಹಳ್ಳಿಗಳು ಬಂದರೆ ಕಾರ್ಯನಿರ್ವಹಿಸಲು ಕಷ್ಟವಾಗುತ್ತದೆ. ಇದರಿಂದ ಆಶಾಗಳಿಗೆ ಆತಂಕ ಸೃಷ್ಟಿಯಾಗಿದೆ. ಮಾನ್ಯ ಮುಖ್ಯಮಂತ್ರಿಗಳು ಕಳೆದ 7 ತಿಂಗಳ ಹಿಂದೆ ತೀರ್ಮಾನಿಸಿ, ಘೋಷಿಸಿದ ಆದೇಶಗಳನ್ನು ಕೂಡಲೇ ಮಾಡಬೇಕೆಂದು ಮತ್ತು ಕೆಳಗಿನ ಹಕ್ಕೊತ್ತಾಯಗಳಿಗೆ ಆಗ್ರಹಿಸಿ, ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿರುತ್ತಾರೆ. ಆ ಹೋರಾಟದ ಉನ್ನತ ಹಂತವಾಗಿ ಆಶಾ ಕಾರ್ಯಕರ್ತೆಯರು 12, 13 ಹಾಗೂ 14ರಂದು ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಪ್ರತಿಭಟನಾ ಧರಣಿ ನಡೆಸಿ ಸರ್ಕಾರ ಮಾತುಕೊಟ್ಟಂತೆ ನಡೆದುಕೊಳ್ಳಬೇಕೆಂದು ಈ ಮೂಲಕ ಆಗ್ರಹಿಸಲು ಮುಂದಾಗಿರುವರು.
ಹಕ್ಕೊತ್ತಾಯಗಳು: ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ರೂ.10 ಸಾವಿರ ಗ್ಯಾರಂಟಿಯನ್ನು ಈ ಏಪ್ರಿಲ್ ಇಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಹಾಸನ | ಜನಾರೋಗ್ಯ ಸ್ವಾತಂತ್ರ್ಯಕ್ಕಾಗಿ ಆ.15ರಂದು ಧರಣಿ ಸತ್ಯಾಗ್ರಹ

“ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು. ತರ್ಕಬದ್ದಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಿ. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು ಎಂದು ಒತ್ತಾಯಿಸಿದರು. ಅವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು. ನಗರ ಆಶಾಗಳಿಗೆ ರೂ. 2000 ಗೌರವಧನ ಹೆಚ್ಚಿಸಬೇಕು ಹಾಗೂ ಜೂನ್-ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆಯರ ಮುಖಂಡರಾದ ಮಮತಾ, ಮೇಘನಾ, ನವೀನಾ, ಪುಷ್ಪಲತಾ, ಕೋಮಲ, ಗೀತಾ, ಲಲಿತಾ, ಮಂಜುಳಾ, ಗೌರಮ್ಮ, ಲಕ್ಷ್ಮಮ್ಮ, ಶಿವಮ್ಮ, ತಾಹೀರಾ, ಕುಮಾರಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X