ಹಾಸನ | ರಸ್ತೆ ಅಪಘಾತ: ಮೊಪೆಡ್ ಸವಾರ ಸಾವು

Date:

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಅಪ್ಪಾಚಿ ಬೈಕ್, ಟಿವಿಎಸ್ ಎಕ್ಸ್‌ಎಲ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

- Advertisement -

ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮದ ಶಂಕರೇಗೌಡ ಮೃತಪಟ್ಟವರು. ಅವರ ಪತ್ನಿ ಜ್ಯೋತಿ ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಶಂಕರೇಗೌಡ ಅವರು ಅ.11ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ತಮ್ಮ ಟಿವಿಎಸ್ ಎಕ್ಸ್‌ಎಲ್ ಬೈಕ್‌ನಲ್ಲಿ ಪತ್ನಿಯೊಂದಿಗೆ ಕಂಚೇನಹಳ್ಳಿ ಗ್ರಾಮಕ್ಕೆ ಸಂಬಂಧಿಕರ ಮನೆಗೆ ಹಬ್ಬದ ನಿಮಿತ್ತ ತೆರಳಿದ್ದರು. ಅಲ್ಲಿ ಊಟ ಮುಗಿಸಿಕೊಂಡು, ಮತ್ತೊಬ್ಬ ಸಂಬಂಧಿಕರ ಮನೆಗೆ ಹೋಗಲು ಅಂಗರಳ್ಳಿ ಕಡೆಗೆ ಪ್ರಯಾಣಿಸುತ್ತಿದ್ದರು.

ಮಧ್ಯಾಹ್ನ 12 ಗಂಟೆ ಸುಮಾ-ರಿಗೆ ಕಂಚೇನಹಳ್ಳಿ?ಬೋರನಹಳ್ಳಿ ಮಾರ್ಗದಲ್ಲಿ ಬರುವಾಗ ಅಪ್ಪಾಚಿ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತವನ್ನು ಕಂಡ ಕಂಚೇನಹಳ್ಳಿ ಗ್ರಾಮದ ರಮೇಶ ಅವರು ಗಾಯಾಳುಗಳನ್ನು ಅರಕಲಗೂಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ-‘ರೆ, ಶಂಕರೇಗೌಡ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಅಪಘಾತಕ್ಕೆ ಕಾರಣವಾದ ಅಪ್ಪಾಚಿ ಬೈಕ್ ಸವಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮೃತರ ಸಂಬಂಧಿ ಕುಮಾರ ಅವರು ನೀಡಿದ ದೂರಿನ ಮೇರೆಗೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಸ ಹಾಕಿದರೆ ₹50 ಸಾವಿರ ದಂಡ: ಮಹಾನಗರ ಪಾಲಿಕೆ ಎಚ್ಚರಿಕೆ

ನಗರ ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ಕಸದ ರಾಶಿ ಹಾಗೂ ಕಟ್ಟಡ ಭಗ್ನಾವಶೇಷಗಳನ್ನು...

ಬಾಗಲಕೋಟೆ | ಸಮಾಜದ ಪ್ರಗತಿಗೆ ಪತ್ರಕರ್ತರ ಮಾರ್ಗದರ್ಶನ ಅಗತ್ಯ: ಅಶೋಕ ನಾರಾಯಣಿ

ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ, ಜನರಲ್ಲಿ ಜಾಗೃತಿ ಮೂಡಿಸಿ ಅಭಿವೃದ್ಧಿಯ ಹಾದಿಗೆ ದಿಕ್ಸೂಚಿಯಾಗುವ...

ರಾಯಚೂರು | ಒಪೆಕ್ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯದ ಆರೋಪ: ಗಾಯಗೊಂಡ ಮಹಿಳೆಯ ತಲೆಯಲ್ಲಿ ಹುಳುಗಳು ಪತ್ತೆ

ರಸ್ತೆ ಅಪಘಾತದಲ್ಲಿ ಗಾಯಗೊಂಡು ನಗರದ ಒಪೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ...

ರಾಯಚೂರು | ನ್ಯಾಯಾಲಯದ ಆದೇಶದಂತೆ ಪರಿಹಾರ ಪಾವತಿಸದ ಕೆಕೆಆರ್‌ಟಿಸಿ ಬಸ್ ಜಪ್ತಿ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ ನ್ಯಾಯಾಲಯ ಆದೇಶಿಸಿದ ಪರಿಹಾರವನ್ನು ಪಾವತಿಸದ ಹಿನ್ನೆಲೆಯಲ್ಲಿ...