ಹಾಸನದಲ್ಲಿ ಹಾಡಹಗಲೇ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ.
ಚೈಲ್ಡ್ ರವಿ (45) ಹತ್ಯೆಯಾದ ಕುಖ್ಯಾತ ರೌಡಿಶೀಟರ್. ಕುಡಿಯುವ ನೀರು ತರಲೆಂದು ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ರವಿಯನ್ನು ಹಿಂದಿನ ವಾಹನದಿಂದ ಢಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ತಪ್ಪಿಸಿಕೊಳ್ಳಲು ಅವಕಾಶವೇ ಸಿಗದಂತೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ದಾಳಿ ನಡೆಸಿದ ಪರಿಣಾಮ ರವಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಹಿಮ್ಸ್ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ; ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ
ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದನು. 2 ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದ ಎನ್ನಲಾಗಿದೆ.
