ಹಾಸನ | 1.5 ಲಕ್ಷ ರೂ. ಮೌಲ್ಯದ ಟೊಮೆಟೊ ಕಳವು

Date:

ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. 100 ರೂ. ಕೊಟ್ಟು ಟೊಮೆಟೊ ಖರೀದಿಸಲು ಸಾದ್ಯವಾಗದಿರುವವರು ಹುಣಸೆಹಣ್ಣು ಬಳಸಿ ಅಡುಗೆ ಮಾಡುತ್ತಿದ್ದಾರೆ. ಟೊಮೆಟೊ ಬೆಳೆದಿರುವ ರೈತರು ತಮ್ಮ ಜಮೀನುಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಇದೆಲ್ಲದರ ನಡುವೆ, ಲಕ್ಷಾಂತರ ರೂಪಾಯಿ ಮೌಲ್ಯದ ಟೊಮೆಟೊ ಕಳ್ಳತನವಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲುಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಗೋಣಿ ಸೋಮನಹಳ್ಳಿಯಲ್ಲಿ ರೈತ ಧರಣಿ ಎಂಬಾತ ಬೆಳೆದಿದ್ದ ಟೊಮೆಟೊ ಕಳ್ಳತನವಾಗಿದೆ. ಧರಣಿ ಅವರು ಟೊಮೆಟೊ ಬೆಳೆ ಬೆಳೆದಿದ್ದರು. ಉತ್ತಮ ಇಳುವರಿಯೂ ಬಂದಿತ್ತು. ಈಗಾಗಲೇ ಒಮ್ಮೆ ಕಟಾವು ಮಾಡಿ, ಮಾರಾಟವನ್ನೂ ಮಾಡಿದ್ದರು. ಹಾಕಿದ್ದ ಬಂಡವಾಳದ ಜೊತೆಗೆ ಲಾಭವೂ ದೊರೆಯುತ್ತಿದೆ ಎಂಬ ಸಂತೋಷದಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆದರೆ, ಅವರ ಸಂತೋಷಕ್ಕೆ ಕಳ್ಳಲು ತಣ್ಣೀರು ಎರೆಚಿದ್ದಾರೆ. ಮಂಗಳವಾರ ರಾತ್ರಿ ಅವರ ತೋಟಕ್ಕೆ ನುಗ್ಗಿದ ಕಳ್ಳರು ಟೊಮೆಟೊವನ್ನು ಕದ್ದು ಹೊತ್ತೊಯ್ದಿದ್ದಾರೆ. ಸುಮಾರು 1.5 ಲಕ್ಷ ರೂ. ಮೌಲ್ಯದ ಟೊಮೆಟೊ ಕಳುವಾಗಿದೆ ಎಂದು ರೈತ ಧರಣಿ ಹೇಳಿದ್ದಾರೆ. ಹಳೇಬೀಡು ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದಾರೆ.

ಜುಲೈ 4ರ ಮಂಗಳವಾರವಷ್ಟೇ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಗ್ರಾಮದ ಸಂತೆಯಲ್ಲಿ ಟೊಮೆಟೊ ಮಾರಾಟಕ್ಕೆ ಮಳಿಗೆ ಹಾಕಿದ್ದ ರೈತರೊಬ್ಬರು ತಮ್ಮ ಮಳಿಗೆಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದರು. “ಹಾವೇರಿಯಲ್ಲಿ ಟೊಮೆಟೊ ಬೆಲೆ ಕೆ.ಜಿಗೆ 130 ರೂ. ಇದೆ. ಹೀಗಾಗಿ, ಟೊಮೆಟೊ ಕಳ್ಳರ ಹಾವಳಿ ಹೆಚ್ಚಾಗಿದೆ. ಅದಕ್ಕಾಗಿ, ಸಿಸಿ ಕ್ಯಾಮೆರಾ ಹಾಕಿದ್ದೇನೆ” ಎಂದು ರೈತ ಮಲ್ಲಪ್ಪ ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...