ಹಾಸನ | ಕೆರೆ ನೀರು ತರಲು ವಿದ್ಯಾರ್ಥಿಗಳನ್ನು ಕಳಿಸಿದ್ದ ಶಾಲೆ ಸಿಬ್ಬಂದಿ; ಕ್ರಮಕ್ಕೆ ಆಗ್ರಹ

Date:

ವಸತಿ ಶಾಲೆಯಲ್ಲಿ ನೀರಿನ ಸಮಸ್ಯೆಯಿದೆ ಎಂದು ಸಮೀಪದ ಕೆರೆಯಿಂದ ನೀರು ತರಲು ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಕಳುಹಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಆಂದೂರು ಗ್ರಾಮದಲ್ಲಿರುವ ಡಾ. ಬಿ.ಆರ್‌ ಅಂಬೇಡ್ಕರ್ ವಸತಿ ಶಾಲೆಯ 20 ವಿದ್ಯಾರ್ಥಿಗಳನ್ನು ಕೆರೆಯಿಂದ ನೀರು ತರಲು ಕಳುಹಿಸಲಾಗಿದೆ. ವಿದ್ಯಾರ್ಥಿಗಳನ್ನು ಕೆರೆಗೆ ಕಳುಹಿಸಿದ್ದ ಪ್ರಾಂಶುಪಾಲರು, ಕಚೇರಿ ಸಹಾಯಕ, ಸೆಕ್ಯುರಿಟಿ ಹಾಗೂ ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರ ಶಶಿಧರ್ ಮೌರ್ಯ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಭಾರೀ ಮಳೆಯಿಂದಾಗಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಈ ವೇಳೆ, ವಸತಿ ಶಾಲೆಯಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿಗಳನ್ನು ಶಾಲೆಯಿಂದ 0.5 ಕಿಮೀ ದೂರದಲ್ಲಿರುವ ಕೆರೆಗೆ ನೀರು ತರಲು ಕಳುಹಿಸಿದ್ದಾರೆ. ಕೆರೆ ಸಂಪೂರ್ಣ ತುಂಬಿದೆ. ಮಾತ್ರವಲ್ಲದೆ, “ನೀರು ತರಲು ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ವಾರ್ಡನ್, ವಿದ್ಯಾರ್ಥಿಗಳನ್ನು ದನಗಳನ್ನು ಓಡಿಸುವ ಹಾಗೆ, ಬೆತ್ತ ಹಿಡಿದು ಓಡಿಸುತ್ತಿದ್ದರು” ಎಂದು ಶಶಿಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮಳೆಯಿಂದಾಗಿ ಕೆರೆಯ ದಡ ಕೂಡ ಪಸಿಯಾಗಿದೆ. ಮಕ್ಕಳು ಕೆರೆ ಬಳಿ ಹೋದಾಗ, ಕಾಲು ಜಾರಿ ಬಿದ್ದು, ಏನಾದರೂ ಅನಾಹುತ ಸಂಭವಿಸಿದರೆ, ಯಾರು ಹೊಣೆ. ವಿದ್ಯಾರ್ಥಿಗಳ ಜೀವಕ್ಕೆ ಅಪಾಯವಾಗುವ ಸಂಭವವನ್ನೂ ಯೋಚಿಸದೆ, ವಿದ್ಯಾರ್ಥಿಗಳನ್ನು ನೀರು ತರಳು ಕಳುಹಿಸಿದ್ದ ಪ್ರಾಂಶುಪಾಲರು, ವಾರ್ಡನ್, ಸೆಕ್ಯುರಿಟಿ, ಶಾಲಾ ಅಟೆಂಡರ್‌ಅನ್ನು ಸೇವೆಯಿಂದ ಅಮಾನತು ಮಾಡಬೇಕು. ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...