ಹಾಸನ | ವಕ್ಫ್ ತಿದ್ದುಪಡಿ ಮಸೂದೆ ಪ್ರತಿ ಹರಿದು ಎಸ್‌ಡಿಪಿಐ ಪ್ರತಿಭಟನೆ

Date:

ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋಧಿಸಿ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಹಾಸನ ಜಿಲ್ಲಾ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ನೇತೃತ್ವದಲ್ಲಿ ನಗರದ ಹೇಮಾವತಿ ವೃತ್ತದಲ್ಲಿ ವಕ್ಫ್‌ ತಿದ್ದುಪಡಿ ಬಿಲ್ ಪ್ರತಿಯನ್ನು ಹರಿಯುವ ಮುಖಾಂತರ ಪ್ರತಿಭಟನೆ ನಡೆಸಿದರು.  

- Advertisement -

“ಈ ಮಸೂದೆ ಸಂವಿಧಾನ ಬಾಹಿರವಾಗಿದೆ. ಜಿಲ್ಲಾಧಿಕಾರಿಗಳಿಗೆ ನ್ಯಾಯಾಂಗ ಅಧಿಕಾರ ನೀಡುವುದು ಸಂಪೂರ್ಣವಾಗಿ ಅನ್ಯಾಯಕರ ಮತ್ತು ಸಂವಿಧಾನ ವಿರೋಧಿಯಾಗಿದೆ” ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಭಾರತದ ಮುಸ್ಲಿಂ ಸಮುದಾಯದ ಸಂವಿಧಾನಿಕ ಹಕ್ಕುಗಳು ಮತ್ತು ವಕ್ಫ್ ಆಸ್ತಿಗಳನ್ನು ರಕ್ಷಿಸುವ ಬಗ್ಗೆ ಅಲ್ಲ. ಮೋದಿ ಸರ್ಕಾರ ಈ ಮಸೂದೆಯ ಮೂಲಕ ವಕ್ಫ್ ಬೋರ್ಡ್‌ ಮೇಲೆ ಹಿಂದುತ್ವದ ಆದರ್ಶಗಳನ್ನು ಬಲತ್ಕಾರವಾಗಿ ಹೇರಲು ಯತ್ನಿಸುತ್ತಿದೆ. ಇದು ಧಾರ್ಮಿಕ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಗೆ ವಿರುದ್ಧವಾದದ್ದು, ಈ ಮಸೂದೆಯನ್ನು ಹಿಂದಕ್ಕೆ ತೆಗೆದುಕೊಳ್ಳದಿದ್ದರೆ ದೇಶಾದ್ಯಂತ ಸಿಎಎ, ಎನ್‌ಆರ್‌ಸಿ ಮಾದರಿಯಲ್ಲಿ ಪ್ರತಿಭಟನೆಗಳು ನಡೆಯಲಿವೆ” ಎಂದು ಒಕ್ಕೂಟ ಸರ್ಕಾರಕ್ಕೆ ಎಸ್‌ಡಿಪಿಐ ಸಂಘಟನೆ ಎಚ್ಚರಿಕೆ ನೀಡಿದೆ.

“ತಿದ್ದುಪಡಿಯ ಹಿಂದಿನ ಅಸಲಿ ಉದ್ದೇಶ, ವಕ್ಫ್ ಕಾಯ್ದೆಯ ಅನುಷ್ಠಾನವನ್ನು ಬಿಜೆಪಿ ತನ್ನ ಬಹುಮತದ ಬಲದಿಂದ ದುರುಪಯೋಗಪಡಿಸಿಕೊಂಡು ದೇಶವನ್ನು ಕೇಸರಿ ಬಣ್ಣದಿಂದ ಮುಚ್ಚಲು ಪ್ರಯತ್ನಿಸುತ್ತಿದೆ. ಈ ಮಸೂದೆ ಮುಸ್ಲಿಂ ಸಮುದಾಯದ ಹಕ್ಕುಗಳ ಮೇಲೆ ನೇರ ದಾಳಿ ಮಾಡುವ ಮೂಲಕ ವಕ್ಫ್ ಸಂಸ್ಥೆಗಳ ಶಕ್ತಿಯನ್ನು ಕುಂದಿಸುತ್ತದೆ” ಎಂದು ಆರೋಪಿಸಿದರು.

    “ಈಗಿನ ಕಾನೂನುಗಳು ಹಿಂದೂ ಧಾರ್ಮಿಕ ಆಸ್ತಿಗಳನ್ನು ಹಿಂದೂ ಅಲ್ಲದವರಿಂದ ನಿರ್ವಹಿಸುವಂತಾಗಲು ನಿರ್ಬಂಧಿಸುತ್ತವೆ. ಆದರೆ ಹೊಸ ವಕ್ಫ್ ಮಸೂದೆಯಡಿ ವಕ್ಫ್ ಬೋರ್ಡ್ ಆಡಳಿತವನ್ನು ಕಬಳಿಸಲು ಮಾಡಿದ ಸಂಚು” ಎಂದು ಸಂಘಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ಇದನ್ನೂ ಓದಿದ್ದೀರಾ?ಹಾಸನ l ವಲಸೆ ಕಾರ್ಮಿಕರಿದ್ದ ವಾಹನ ಪಲ್ಟಿ; ನಾಲ್ವರಿಗೆ ಗಂಭೀರ ಗಾಯ

    ಈ ವೇಳೆ ಹಾಸನ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಶಜೀಲ್ ಅಹ್ಮದ್ ಎಸ್‌ಡಿಪಿಐ ಮುಖಂಡ ಫೈರೋಜ್ ಪಾಶ, ಸಫಿರ್, ಆಟೋ ಇರ್ಫಾನ್, ತನ್ವಿರ್, ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಸೈಯ್ಯದ್ ಅನ್ಸರ್, ಅಪ್ಸರ್‌ ಪಾಷ, ಜಮೀಲ್ ಬೇಗ್ ಸೇರಿದಂತೆ ಇತರರು ಇದ್ದರು.

    WhatsApp Image 2025 11 17 at 3.21.38 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

    ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

    ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

    ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

    ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

    ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...