ಹಾಸನ | ಮೈತ್ರಿ ಸಿ.ಎಂ ಬಗ್ಗೆ ಹಿರಿಯ ನಾಯಕರು ತೀರ್ಮಾನಿಸುತ್ತಾರೆ; ನಿಖಿಲ್ ಕುಮಾರಸ್ವಾಮಿ

Date:

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಪರೋಕ್ಷ ವಿರೋಧ ಹಾಗೂ 2028ಕ್ಕೆ ಎಚ್.ಡಿ. ಕುಮಾರಸ್ವಾಮಿ  ರಾಜ್ಯದ ಸಿಎಂ ಎಂಬ ಜೆಡಿಎಸ್ ನಾಯಕರ ಹೇಳಿಕೆಗೆ ಟಾಂಗ್ ನೀಡಿರುವ ಮಾಜಿ ಶಾಸಕ ಬಿಜೆಪಿಯ ಪ್ರೀತಂಗೌಡರಿಗೆ, ಜೆಡಿಎಸ್ ಯುವ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಾಲ್ಲೂಕಿನ ಕೆಲಗಳಲೆ ಗ್ರಾಮಕ್ಕೆ ಭೇಟಿ ನೀಡಿದ್ದರು.

- Advertisement -

ಜೆಡಿಎಸ್ ನಾಯಕತ್ವ ವಹಿಸಿರುವುದು ಕುಮಾರಣ್ಣ. ದೇವೇಗೌಡರ ಮಾರ್ಗದರ್ಶನ, ರೇವಣ್ಣ ಅವರ ರಾಜಕೀಯ ಶಕ್ತಿ ಬಹಳ ಪ್ರಬಲವಾಗಿದೆ. ಇವತ್ತಿಗೂ ಹಿಂದೆ ಕುಮಾರಣ್ಣ ನೀಡಿದ ಉತ್ತಮ ಆಡಳಿತವನ್ನು ನಾಡಿನ ಜನ ನೆನೆಯುತ್ತಿದ್ದಾರೆ. ಈ ಸರ್ಕಾರದ ದುರಾಡಳಿತ, ಕೆಲವೊಂದು ನಡವಳಿಕೆ ನೋಡಿ ಜನರು ಬೇಸತ್ತಿದ್ದಾರೆ ಎಂಬುದನ್ನು ನಾನು ರಾಜ್ಯ ಪ್ರವಾಸ ಮಾಡಿದ ಸಂದರ್ಭದಲ್ಲಿ ಕಂಡಿದ್ದೇನೆ. ಈ ವೇಳೆಯಲ್ಲಿ ಕುಮಾರಣ್ಣ ಅವರಂತಹ ನಾಯಕ ರಾಜ್ಯದ ಚುಕ್ಕಾಣಿ ಹಿಡಿಯಬೇಕೆಂಬ ಆಸೆ, ಪ್ರಸ್ತಾಪ ಗಟ್ಟಿಯಾಗಿದೆ ಎಂದರು. 2028ಕ್ಕೆ ಕುಮಾರಣ್ಣನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ, ಇದು ಕಾರ್ಯ ಕರ್ತರ ಅಪೇಕ್ಷೆ ಅಲ್ಲ, ಜನರ ಭಾವನೆ ಕೂಡ ಅದೇ ಆಗಿದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ನಮ್ಮದು ಪ್ರಾದೇಶಿಕ ಪಕ್ಷ ಕಳೆದ ಲೋಕಸಭಾ ಚುನಾವಣೆಯಲ್ಲಿ ನಾವು ಅವರು ಜೊತೆ ಒಂದಾಗಿದ್ದೇವೆ. ರಾಜ್ಯದ ಹಿತ ದೃಷ್ಟಿಯಿಂದ ಒಂದಾಗಿದ್ದೇವೆ, ಇದಕ್ಕೆ ರಾಜ್ಯದ ಜನತೆಯೂ ಪೂರಕವಾಗಿ ಸಹಿ ಹಾಕಿ 19 ಜನ ಸಂಸದರನ್ನು ಗೆಲ್ಲಿಸಿ ಕೊಟ್ಟಿದ್ದಾರೆ. ಕುಮಾರಣ್ಣ ಮುಂದೆ ಸಿಎಂ ಆಗ್ತಾರೋ, ಆಗಬೇಕೋ, ರಾಜ್ಯ ರಾಜಕಾರಣಕ್ಕೆ ಯಾವಾಗ ಬರಬೇಕು ಎಂಬುದನ್ನು ಬಿಜೆಪಿ ರಾಷ್ಟ್ರೀಯ ರಾಷ್ಟ್ರೀಯ ನಾಯಕರು ಕಾಲ ಬಂದಾಗ ಕುಳಿತು ಚರ್ಚೆ ಮಾಡಿ ನಿರ್ಣಯ ತೆಗೆದು ಕೊಳ್ಳುತ್ತಾರೆ. ಬಿಜೆಪಿ ರಾಷ್ಟ್ರೀಯ ಪಕ್ಷ, ಶಿಸ್ತು ಪಾಲನಾ ಕಮಿಟಿ ಇರುತ್ತೆ, ನಮ್ಮಲ್ಲೂ ಇದೆ. ಆ ಕಮಿಟಿ ಯಾರು ಪಕ್ಷಕ್ಕೆ ಆಶಿಸ್ತು ತೋರುತ್ತಿದ್ದಾರೆ. ಅಂಥವರ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಬೀದಿಯಲ್ಲಿ ನಿಂತು, ಬೀದಿ ರಂಪಾಟ ಮಾಡಿಕೊಂಡು ಎರಡೂ ಪಕ್ಷದ ಕಾರ್ಯಕರ್ತರು, ನಾಯಕರು ಗೌರವ ಕಳೆದುಕೊಂಡು ಮಾತನಾಡಬೇಡಿ ಎಂದು ಅವರ ಪಕ್ಷದವರು ತಿದ್ದಿ ಬುದ್ದಿ ಹೇಳ್ತಾರೆ ಅಂತ ನಂಬಿದ್ದೇನೆ, ಕಾದು ನೋಡೋಣ ಎಂದು ತಿಳಿಸಿದರು.

ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡರ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕೆ ಹೇಳಿಕೆ ಹಾಗೂ ಚಾಮುಂಡೇಶ್ವರಿಯಿಂದ ಸಾ.ರಾ.ಮಹೇಶ್ ಸ್ಪರ್ಧೆ ವಿಚಾ ರದ ಬಗ್ಗೆ ಇವತ್ತಿನ ಕಾಲಘಟ್ಟದಲ್ಲಿ ಆ ಚರ್ಚೆ ಅಪ್ರಸ್ತುತ. ಚಾಮುಂಡೇಶ್ವರಿ ಕ್ಷೇತ್ರ ಎಚ್.ಡಿ.ದೇವೇಗೌಡರು, ಎಚ್ .ಡಿ.ಕುಮಾರಸ್ವಾಮಿ ಅವರ ಅಭಿಮಾನಿಗಳು ಇರುವ ಕ್ಷೇತ್ರ, ನಮ್ಮನ್ನು ಪ್ರೀತಿಸುವ ದೊಡ್ಡವರ್ಗ ಆ ಕ್ಷೇತ್ರದಲ್ಲಿದೆ. ಕೆಲವು ಕಾರಣಕ್ಕೆ ಅಲ್ಲಿನ ಕಾರ್ಯಕರ್ತರಲ್ಲಿ ಸ್ವಲ್ಪ ಇರುಸು ಮುರುಸು ಆಗಿರುವುದು ಸತ್ಯ, ಮಾಧ್ಯಮದ ಮುಂದೆ ಮಾತನಾಡಿದರೆ ಇತ್ಯರ್ಥ ಆಗಲ್ಲ, ಬಗೆ ಹಾಯಲು ಕಾಲ ಬರಬೇಕು, ಕಾಲ ನಿರ್ಣಯ ಮಾಡುತ್ತೆ ಎಂದು  ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ವಿಷ ಸೇವಿಸಿ ವ್ಯಕ್ತಿ ಸಾವು

ಈ ವೇಳೆ ವರಿಷ್ಠರು ಕಾರ್ಯಕರ್ತರ ಗೌರವ ಕಾಪಾಡುವ ಹಾಗೂ ಕ್ಷೇತ್ರ ಉಳಿಸಿಕೊಳ್ಳಲು ಆಯಾ ಸಂದರ್ಭಕ್ಕೆ ಒಳ್ಳೆಯ ತೀರ್ಮಾನ ತೆಗೆದು ಕೊಳ್ಳುತ್ತಾರೆಂದು ನಂಬಿದ್ದೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...