ಹಾಸನ | ರಾಜ್ಯ ಸರ್ಕಾರ 9 ಹೊಸ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯುವಂತೆ ಎಸ್‌ಎಫ್‌ಐ ಪ್ರತಿಭಟನೆ

Date:

Advertisements

ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ, ಹಾಸನ ವಿವಿಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಆಗ್ರಹಿಸಿ ಹಾಸನ ಜಿಲ್ಲಾ ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲಿಸಿದರು.

ನಗರದ ಗಂಧದಕೋಠಿ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಆರ್‌ಸಿ ರಸ್ತೆ, ಬಿಎಂ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದರು. ಇದೇ ವೇಳೆ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್ ಮಾತನಾಡಿ, “ರಾಜ್ಯದಲ್ಲಿ 9 ಹೊಸ ವಿಶ್ವವಿದ್ಯಾಲಯಗಳನ್ನು  ಮುಚ್ಚಲು ರಾಜ್ಯ ಸರ್ಕಾರದ ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದೆ. ಸರ್ಕಾರದ ಈ ನಡೆ ವಿದ್ಯಾರ್ಥಿ ವಿರೋಧಿ ನಡೆಯಾಗಿದೆ”‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಸ್ಥಾಪನೆಗೊಂಡಿರುವ ವಿಶ್ವವಿದ್ಯಾಲಯಗಳು ಮುಚ್ಚುವುದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ, ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ, ಅಷ್ಟೇ ಅಲ್ಲದೆ ಪ್ರಾದೇಶಿಕವಾಗಿ ಅಯಾ ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಮಾರಕವಾಗಬಹುದು. ಹಾಗಾಗಿ ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ತೀರ್ಮಾನವನ್ನು ರದ್ದುಪಡಿಸಿ ಯಥಾಸ್ಥಿತಿಯಲ್ಲಿ ವಿವಿಗಳನ್ನು ಮುಂದುವರೆಸಬೇಕು” ಎಂದು ಒತ್ತಾಯಿಸಿದರು.

Advertisements
ಹಾಸನ ವಿವಿ ಮುಚ್ಚದಂತೆ ಎಸ್‌ಎಫ್‌ಐ ಆಗ್ರಹಿಸಿ ಮನವಿ
ಹಾಸನ ವಿವಿ ಮುಚ್ಚದಂತೆ ಆಗ್ರಹಿಸಿ ಎಸ್‌ಎಫ್‌ಐನಿಂದ ಜಿಲ್ಲಾಡಳಿತಕ್ಕೆ ಮನವಿ

“2023ರಲ್ಲಿ ಅಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ ‌9 ಹೊಸ ವಿಶ್ವ ವಿದ್ಯಾಲಯಗನ್ನು ಪ್ರಾರಂಭ ಮಾಡಿತ್ತು. ಆದರೆ ಅಂದಿನ ಸರ್ಕಾರ ಅಗತ್ಯ ಅನುದಾನ ಹಾಗೂ ವಿಶ್ವವಿದ್ಯಾಲಯ ಸ್ಥಾಪಿಸಲು ಬೇಕಾದ ಸೌಲಭ್ಯಗಳನ್ನು ಒದಗಿಸದೇ ಏಕಾಏಕಿ ವಿವಿಗಳನ್ನು ಪ್ರಾರಂಭಿಸಿತ್ತು. ನಂತರ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್‌ ಸರ್ಕಾರವೂ ಕೂಡ ಕಳೆದ ಎರಡು ವರ್ಷದಿಂದ ಯಾವುದೇ ಅನುದಾನ ನೀಡಲಿಲ್ಲ. ಇಂತಹ ಸಂಕಷ್ಟಮಯ ಪರಿಸ್ಥಿತಿಯಲ್ಲಿಯೂ ಕೂಡ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ಯಾವುದೇ ರೀತಿಯಲ್ಲಿ ಸಮರ್ಥನೀಯವಲ್ಲ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ವಿಶ್ವವಿದ್ಯಾಲಯದ ಉಳಿವಿಗಾಗಿ ರಾಜ್ಯವ್ಯಾಪಿ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಉಪನ್ಯಾಸಕ ಡಾ. ಮಹೇಶ್ ಮಾತನಾಡಿ, “ಸರ್ಕಾರ ಮುಚ್ಚಲು ಹೊರಟಿರುವ ಈ ವಿವಿಗಳಿಗೆ ಪೂರ್ಣಕಾಲಿಕ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ನೇಮಕ, ಗ್ರಾಂಥಾಲಯ, ಪ್ರಯೋಗಾಲಯ, ಹಾಸ್ಟೆಲ್, ಅನುದಾನ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಸರ್ಕಾರ ಒದಗಿಸಬೇಕಿತ್ತು. ಈ ಸೌಕರ್ಯಗಳನ್ನು ಒದಗಿಸದಿರುವ ಸ್ಥಿತಿಯಲ್ಲಿಯೂ ಹಲವು ಪ್ರಮುಖ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಉನ್ನತ ಶಿಕ್ಷಣ ಪಡೆಯಲು ವಿವಿಧ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಮುನ್ನಡೆಯುತ್ತಿವೆ”‌ ಎಂದು ಹೇಳಿದರು.‌

“ಈಗಾಗಲೇ ಈ ವಿವಿಯಲ್ಲಿ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳು, ನೂರಾರು ಬೋಧಕ ಮತ್ತು ಬೋಧಕೇತರ ವರ್ಗ ಮತ್ತು ಈ ವಿವಿಗಳಿಗೆ ಸೇರ್ಪಡೆಯಾಗಿರುವ ನೂರಾರು ಪದವಿ ಕಾಲೇಜುಗಳು ಮತ್ತು ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣವನ್ನು ಕೇವಲ ಲಾಭದ ದೃಷ್ಟಿಯಲ್ಲಿ ನೋಡದೆ ಮಾನವ ಸಂಪನ್ಮೂಲ ಅಭಿವೃದ್ಧಿಯ ದೃಷ್ಟಿಯಿಂದ ಈ ಎಲ್ಲ ವಿಶ್ವವಿದ್ಯಾಲಯಗಳಿಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ವಿವಿಗಳನ್ನು ಉಳಿಸಬೇಕಾಗಿದೆ” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ರಾಷ್ಟ್ರೀಯ ಹೆದ್ದಾರಿ 75ರ ಹಲವು ಕಾಮಗಾರಿ ಸ್ಥಳ ಪರಿಶೀಲಿಸಿದ ಸಂಸದ ಶ್ರೇಯಸ್ ಎಂ ಪಟೇಲ್

“ವಿಶ್ವ ವಿದ್ಯಾಲಯಗಳನ್ನು ಬಲಿಷ್ಠಪಡಿಸುವ ಬದಲು ಮುಚ್ಚುವ ತೀರ್ಮಾನವು ಆಯಾ ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ವಂಚಿಸುವುದಾಗಿದೆ. ಹಾಗಾಗಿ ಸಚಿವ ಸಂಪುಟದ ಉಪಸಮಿತಿ ತೆಗೆದುಕೊಂಡಿರುವ ನಿರ್ಧಾರವನ್ನು ಸರ್ಕಾರ ಯಾವುದೇ ಕಾರಣ ನೀಡದೆ ಕೂಡಲೇ ಹಿಂಪಡೆಯಬೇಕು. ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಾಗೂ ಬೌದ್ದಿಕ ಸ್ವಾವಲಂಬನೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವಿವಿಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಂಡು ಬಲಪಡಿಸಬೇಕು.‌ ವಿಶ್ವ ವಿದ್ಯಾಲಯಗಳಿಗೆ ಉಪನ್ಯಾಸಕರನ್ನು ನೇಮಕಾತಿ ಮಾಡಬೇಕು ಹಾಗೂ ಅನುದಾನವನ್ನು ನೀಡುವ ಮೂಲಕ ವಿಶ್ವ ವಿದ್ಯಾಲಯಗಳನ್ನು ಬಲಪಡಿಸಬೇಕು. ಸಂಪುಟ ಉಪಸಮಿತಿಯ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಕೂಡಲೇ ಹಿಂಪಡೆಯಬೇಕು” ಎಂದು ಮನವಿ ಮಾಡಿದರು.  

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್‌ ಹಾಸನ್‌,  ಸಹ ಕಾರ್ಯದರ್ಶಿ ವಿವೇಕ್, ರಾಜ್ಯ ಉಪಾಧ್ಯಕ್ಷ  ಬಸವರಾಜ ಗುಳೆದಾಳ್, ಡಿವೈಎಫ್‌ಐ, ಎಂ ಜಿ ಪೃಥ್ವಿ, ಮುಖಂಡರಾದ ಜಯಲಕ್ಷ್ಮಿ, ಸೌಮ್ಯ, ಧರ್ಮ, ಉಪನ್ಯಾಸಕರಾದ ಡಾ. ಮಹೇಶ್, ಡಾ. ಲೋಕೇಶ್ ಸೇರಿದಂತೆ ಇತತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X