ಹಾಸನ | ಯುವ ಸಬಲೀಕರಣ ಸಂವಾದದಲ್ಲಿ ಶ್ರೇಯಸ್ ಭಾಗಿ

Date:

ನವದೆಹಲಿಯ ಸುಷ್ಮಾ ಸ್ವರಾಜ್ ಭವನದ ಭಾಸ್ಕರ್ ಹಾಲ್‌ನಲ್ಲಿ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ನೇಪಾಳ ಸರ್ಕಾರದ ಯುವ ಸಂಸದರ ಜೊತೆಗಿನ ಯುವ ಸಬಲೀಕರಣ ಸಂವಾದದಲ್ಲಿ ಹಾಸನ ಸಂಸದ ಶ್ರೇಯಸ್ ಎಂ.ಪಟೇಲ್ ಭಾಗಿಯಾಗಿದ್ದರು.

- Advertisement -

ಮುಖ್ಯವಾಗಿ ಭಾರತ ಹಾಗೂ ನೇಪಾಳದ ಯುವ ಶಕ್ತಿಯು ರಾಷ್ಟ್ರ ಅಭಿವೃದ್ಧಿಯಲ್ಲಿ ಯಾವ ರೀತಿ ಪಾತ್ರ ವಹಿಸುತ್ತದೆ. ರಾಜಕಾರಣ, ಶಿಕ್ಷಣ, ತಂತ್ರಜ್ಞಾನ, ಉದ್ಯೋಗ, ಕೃಷಿ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಹೇಗೆ ತೊಡಗಿಸಿಕೊಂಡಿದೆ ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಇದೇ ವೇಳೆ ವಾಣಿಜ್ಯ ಮತ್ತು ಉದ್ಯಮ ಸಚಿವ ಪಿಯೂಶ್ ಗೊಯಲ್ ಅವರನ್ನು ಭೇಟಿಯಾದ ಸಂಸದರು, ಕಾಫಿ ಬೆಳೆಯನ್ನು ಸರ್‌ಫೇಸಿ ಕಾಯ್ದೆಯಿಂದ ಹೊರಗಿಡುವಂತೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸಾವಿರಾರು ಕಾಫಿ ಬೆಳೆಗಾರರಿಗೆ ಕಾಯ್ದೆಯಿಂದ ಅನನುಕೂಲವಾಗುತ್ತಿದೆ. ಬೆಳೆಗಾರರು ಕಿಸಾನ್ ಕ್ರೆಡಿಟ್ ಕಾರ್ಡ್ ಹಾಗೂ ಇತರ ಕೃಷಿ ಸಾಲ ಯೋಜನೆಗಳ ಅಡಿಯಲ್ಲಿ ಸಾಲ ಪಡೆಯುತ್ತಿದ್ದಾರೆ. ಇಂತಹ ಸಾಲಗಳನ್ನು ಸದಾ ಅಗ್ರಿಕಲ್ಚರ್ ಪ್ರಯಾರಿಟಿ ಸೆಕ್ಟರ್ ಲೆಂಡಿಂಗ್ ಅಡಿಯಲ್ಲಿ ವಿಂಗಡಿಸಲಾಗಿದೆ. ಇತ್ತೀಚಿನ ಕೆಲ ವರ್ಷಗಳಿಂದ ಕೆಲ ಬ್ಯಾಂಕುಗಳು ಈ ಸಾಲಗಳನ್ನು ಸರ್‌ಫೇಸಿ ಕಾಯ್ದೆ ೨೦೦೨ರ ಅಡಿಯಲ್ಲಿ ವಸೂಲಾತಿಗೆ ತೆಗೆದುಕೊಳ್ಳುತ್ತಿವೆ. ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಕಾಫಿ ಸಾಲಗಳನ್ನು ಕೃಷಿ ಸಾಲಗಳೆಂದು ಪರಿಗಣಿಸಿ ಸರ್‌ಫೇಸಿ ಕಾಯ್ದೆಯ ಕಾನೂನು ಕ್ರಮದಿಂದ ದೂರವಿಟ್ಟು ಬೆಳೆಗಾರರಿಗೆ ನೆರವಾಗಬೇಕೆಂದು ಕೋರಿದರು.

ಇದನ್ನೂ ಓದಿ: ಹಾಸನ | ಮಹಿಳಾ ಮತ್ತು ಮಕ್ಕಳ ಹಕ್ಕುಗಳಿಗಾಗಿ ಹೋರಾಟ; ಬೃಹತ್ ಸಮಾವೇಶಕ್ಕೆ ಜಾಗೃತಿ ಜಾಥಾ

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ನಿಲ್ದಾಣ ಹಾಗೂ ಹಳಿ ನಿರ್ಮಾಣ ಕಾಮಗಾರಿಗೆ ವೇಗ ನೀಡಬೇಕೆಂದು ಮನವಿ ಮಾಡಿದ ಶ್ರೇಯಸ್, ಜಿಲ್ಲೆಯ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ರೈಲು ನಿಲುಗಡೆಗೆ ಅವಕಾಶ ಮಾಡಿಕೊಡಬೇಕು. ಹೆಚ್ಚುವರಿ ಪ್ಯಾಸೆಂಜರ್ ರೈಲುಗಳ ಓಡಾಟ ವ್ಯವಸ್ಥೆ ಕಲ್ಪಿಸಬೇಕೆಂದು ಎಂದು ವಿನಂತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...