ಹಾಸನ | ಅಡುಗೆ ಮಾಡಿಲ್ಲವೆಂದು ಸಿಟ್ಟಾಗಿ ತಾಯಿಯನ್ನೇ ಕೊಂದ ಮಗ

Date:

Advertisements

ಅಡುಗೆ ಮಾಡುವ ವಿಚಾರದಲ್ಲಿ ತಾಯಿ ಮತ್ತು ಮಗನ ನಡುವೆ ಆರಂಭವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದುರ್ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ನಡೆದಿದೆ.

ಆರೋಪಿ ಸಂತೋಷ್(19) ಎಂಬಾತನಿಂದ ತಾಯಿ ಪ್ರೇಮ(45) ಅವರು ಕೊಲೆಯಾಗಿದ್ದಾರೆ.

ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಆತ, ಅಡುಗೆ ಮಾಡದ ವಿಷಯಕ್ಕೆ ತಾಯಿ ಪ್ರೇಮ ಜತೆಗೆ ಜಗಳ ತೆಗೆದಿದ್ದಾನೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಈ ವೇಳೆ ಆಕ್ರೋಶಗೊಂಡ ಸಂತೋಷ್, ತಾಯಿಗೆ ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.

Advertisements

ತೀವ್ರವಾಗಿ ಗಾಯಗೊಂಡಿದ್ದ ಪ್ರೇಮ ಅವರನ್ನು ಕುಟುಂಬಸ್ಥರು ಕೂಡಲೇ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಳೆಹಾನಿಗೆ ಒಳಗಾದ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವಂತೆ ಡಿಸಿ ಸೂಚನೆ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಸಂತೋಷನ ಕೃತ್ಯಕ್ಕೆ ಆಲೂರು ಜನತೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, “ತಾಯಿಯನ್ನು ದೈವವೆಂದು ಪೂಜಿಸುವ ನಾಡಿನಲ್ಲಿ ಮಾತೆಯನ್ನೇ ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲೇಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಜನರಿಗಾಗಿ ‘ಗ್ರಾಮದನಿ’ ಪಾಡ್‌ಕಾಸ್ಟ್‌ ಲೋಕಾರ್ಪಣೆಗೊಳಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಮಹತ್ವದ ವಿಷಯಗಳನ್ನು ಗ್ರಾಮೀಣ ಜನಸಾಮಾನ್ಯರಿಗೆ...

ಹುಬ್ಬಳ್ಳಿ | ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಮೇಲ್ದರ್ಜೆಗೆ 400 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಿದ್ಧ: ಪ್ರಹ್ಲಾದ್ ಜೋಶಿ

ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಹೊಂದಿರುವ ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ...

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದ ನ್ಯಾಯಸಮ್ಮತ ಹೋರಾಟಕ್ಕೆ, ಸಿಕ್ಕ ಜಯ ಎಂದ ಆಯುಕ್ತರು

ಶಿವಮೊಗ್ಗದ ರಾಗಿಗುಡ್ಡದಲ್ಲಿ ಬಹುತೇಕ ಎಲ್ಲಾ ಮನೆ ಅಂಗಡಿಗಳು ಒತ್ತುವರಿ ಮಾಡಿ ಚರಂಡಿಯ...

ಗಾಂಧಿಯನ್ನು ಪೂಜಿಸುವುದಕ್ಕಿಂತ ಅವರ ಆಶಯಗಳನ್ನು ಈಡೇರಿಸುವ ಕೆಲಸ ಮಾಡೋಣ- ಜಿಲ್ಲಾಧಿಕಾರಿ ಡಾ.ಎಂ. ಆರ್ ರವಿ.

ಕೋಲಾರ: ಸ್ವಾಸ್ಥ್ಯಸಮಾಜವನ್ನು ನೆಲೆಗೊಳಿಸಲು ಶ್ರಮಿಸಿದ ಮಹಾತ್ಮ ಗಾಂಧೀಜಿಯನ್ನು ಪೂಜಿಸಿದರೆ ಸಾಲದು, ಅವರ...

Download Eedina App Android / iOS

X