ಹಾಸನ | ಮಕ್ಕಳು, ಮಹಿಳೆಯರ ನಾಪತ್ತೆ ಪ್ರಕರಣ: 51 ಮಂದಿ ಪತ್ತೆ; ಮಾನವ ಕಳ್ಳಸಾಗಾಣಿಕೆ ಶಂಕೆ

Date:

ಮಲೆನಾಡು, ಅರೆ ಮಲೆನಾಡು, ಶಿಲ್ಪಕಲೆಗಳ ನಾಡೂ ಆಗಿರುವ ಹಾಸನ ಜಿಲ್ಲೆ, ಇತ್ತೀಚೆಗೆ ಹಲವಾರು ರೀತಿಯ ದೌರ್ಜನ್ಯ, ದಬ್ಬಾಳಿಕೆ, ನಾಪತ್ತೆ, ಜೀತ ಪದ್ದತಿಗಳಂತ ಪ್ರಕರಣಗಳಿಂದ ಸುದ್ದಿಯಾಗುತ್ತಿದೆ. ಕೆಲವು ತಿಂಗಳ ಹಿಂದೆಯಷ್ಟೇ ಹಾಸನ ಹೊರವಲಯದಲ್ಲಿದ್ದ ಕಂಪನಿಯೊಂದರಲ್ಲಿ ದೂರದ ಊರುಗಳಿಂದ ಕಾರ್ಮಿಕರನ್ನು ಕರೆತಂದು ಜೀತದಾಳುಗಳಂತೆ ದುಡಿಸಿಕೊಳ್ಳಲಾಗುತ್ತಿದೆ ಎಂದು ವರದಿಯಾಗಿತ್ತು. ಅಲ್ಲಿದ್ದ ಕಾರ್ಮಿಕರನ್ನು ರಕ್ಷಿಸಲಾಗಿತ್ತು.

- Advertisement -

ಇದೀಗ, ಅಂತಹದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಮಕ್ಕಳು ಸೇರಿದಂತೆ 169 ಮಂದಿ ನಾಪತ್ತೆಯಾಗಿದ್ದ ಪ್ರಕರಣದ ಬೆನ್ನತ್ತಿರುವ ಪೊಲೀಸರು, 51 ಮಂದಿಯನ್ನು ರಕ್ಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ 12 ವರ್ಷಗಳಲ್ಲಿ (2011ರಿಂದ 2023) 169 ಮಂದಿ ಕಾಣೆಯಾಗಿದ್ದರು. ಜಿಲ್ಲಾ ವರಿಷ್ಠಾಧಿಕಾರಿ ಹರಿರಾಂ ಶಂಕರ್ ನೇತೃತ್ವದಲ್ಲಿ ಕೆಲವು ಪ್ರಕರಣಗಳನ್ನು ಭೇದಿಸಲಾಗಿದ್ದು, 21 ಮಂದಿ ಮಕ್ಕಳು, 30 ಮಂದಿ ಮಹಿಳೆಯರು ಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಅವರಲ್ಲಿ ಕೆಲವರು ಉತ್ತಮ ಜೀವನ ರೂಪಿಸಿಕೊಂಡಿದ್ದಾರೆ. ಅವರನ್ನು ಬಿಟ್ಟು, ಅಭದ್ರ ಸ್ಥಿತಿಯಲ್ಲಿದ್ದ ಸಂತ್ರಸ್ತರನ್ನು ಪೊಲೀಸರು ರಕ್ಷಿಸಿದ್ದಾರೆ. ಅಲ್ಲದೆ, ಓರ್ವ ಮಹಿಳೆ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ರಕ್ಷಿಸಲಾದ ಮಹಿಳೆಯರಲ್ಲಿ ಕೆಲವರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಒಬ್ಬರಲ್ಲಿ ಎಚ್‌ಐವಿ ಸೋಂಕು ದೃಢಪಟ್ಟಿದೆ. ಅವರ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದಿವೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಸಾಹಿತಿ ಹಾಗೂ ಮಹಿಳಾ ಜಾಗೃತ ದಳದ ರೂಪಾ ಹಾಸನ ಅವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹಾಸನ ಜಿಲ್ಲೆಯಲ್ಲಿ ಕಳೆದುಹೋಗಿರುವ ಮೊಬೈಲಲ್‌ಗಳ ಪತ್ತೆಗೆ ಇತ್ತೀಚೆಗೆ ಮೊಬೈಲ್ ‌ಆ್ಯಪ್‌ ಬಿಡುಗಡೆಯಾಗಿತ್ತು. ಆ ವೇಳೆ, ನಾಪತ್ತೆಯಾಗಿರುವ ಮಕ್ಕಳು, ಮಹಿಳೆಯರ ಹುಡುಕಾಟಕ್ಕೂ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೆವು. ಪೊಲೀಸರು ತಂಡ ರಚಿಸಿಕೊಂಡು ಪತ್ತೆ ಕಾರ್ಯ ಆರಂಭಿಸಿದ್ದರು. ಒಂದು ತಿಂಗಳ ಕಾರ್ಯಾಚರಣೆಯಲ್ಲಿ 51 ಮಂದಿ ಪತ್ತೆಯಾಗಿದ್ದಾರೆ. ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಕಾರ್ಯಾಚರಣೆಯನ್ನು ಮುಂದುವರೆಸುವುದಾಗಿ ಪೊಲೀಸರು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ನಾಪತ್ತೆ ಪ್ರಕರಣಗಳು
ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆಗಳ ವ್ಯಾಪ್ತಿಯಿಂದ ಕಾಣೆಯಾದವರು ಮತ್ತು ಪತ್ತೆಯಾಗಿರುವವರ ಅಂಕಿಅಂಶ

“ಪತ್ತೆಯಾಗಿರುವವರ ಕುರಿತು ಕೂಲಂಕಷ ತನಿಖೆ ನಡೆಸಬೇಕಾಗಿದೆ. ಸಂತ್ರಸ್ತರಿಗೆ ಆಪ್ತ ಸಮಾಲೋಚನೆ, ಪರಿಹಾರಕ್ಕೆ ಒದಗಿಸಲು ಗಮನ ಹರಿಸಬೇಕು. ಸಂತ್ರಸ್ತ ಮಕ್ಕಳಿಗೆ ಮಕ್ಕಳ ಕಲ್ಯಾಣ ನಿಧಿಯಿಂದ ಶಿಕ್ಷಣದ ವ್ಯವಸ್ಥೆಯಾಗಬೇಕು. ಅದಕ್ಕಾಗಿ, ಮಹಿಳಾ ಜಾಗೃತ ದಳ ನಾನಾ ರೀತಿಯಲ್ಲಿ ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಮಹಿಳಾ ಜಾಗೃತ ದಳದ ಸದಸ್ಯೆ ಮಮತಾ ಶಿವು ಅವರು ಮಾತನಾಡಿ, “ಕಾಣೆಯಾಗಿದ್ದವರು ಪತ್ತೆಯಾಗಿದ್ದಾರೆ. ಆದರೆ, ಆದರೆ, ಸಂತ್ರಸ್ತ ಮಕ್ಕಳು ಮತ್ತು ಮಹಿಳೆಯರ ಕುರಿತು ನಿಖರ ಮಾಹಿತಿಗಳಿಲ್ಲ. ಸಂತ್ರಸ್ತರು ಎಲ್ಲಿದ್ದರು. ಏನು ಮಾಡುತ್ತಿದ್ದರು. ಅವರನ್ನು ಕರೆದೊಯ್ದಿದ್ದರೇ ಅಥವಾ ಅಪಹರಿಸಲಾಗಿತ್ತೆ. ಅಪಹರಿಸಿದ್ದವರು ಯಾರು ಎಂಬ ಇನ್ನೂ ಹಲವಾರು ಮಾಹಿತಿಗಳು ಬಹಿರಂಗವಾಗಬೇಕು. ನಾಪತ್ತೆ ಪ್ರಕರಣದ ಹಿಂದಿರುವವರಿಗೆ ಶಿಕ್ಷೆಯಾಗಬೇಕು” ಎಂದು ಹೇಳಿದ್ದಾರೆ.

“ನಿಖರ ಮಾಹಿತಿಗಳು ಹೊರಬಿದ್ದಲ್ಲಿ, ಇನ್ನೂ ಹೆಚ್ಚಿನ ಸಂತ್ರಸ್ತರನ್ನು ರಕ್ಷಿಸಲು ಸಾಧ್ಯವಾಗುತ್ತದೆ. ಪೊಲೀಸರು ಆ ಪ್ರಯತ್ನದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಈ ದಿನ.ಕಾಮ್‌ ಸಂಪರ್ಕಕ್ಕೆ ಲಭ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...