ಹಾಸನ | ಅರೇಹಳ್ಳಿಯಲ್ಲಿ ಎಸ್‌ಎಸ್‌ಎಲ್‌ಸಿ ಅಣಕು ಪರೀಕ್ಷೆ

Date:

Advertisements

ಅರೇಹಳ್ಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಪ್ರೌಡಶಾಲಾ ವಿಭಾಗ) ಪರೀಕ್ಷಾ ಕೇಂದ್ರಗಳ ವ್ಯಾಪ್ತಿಗೆ ಸೇರಿರುವ ವಿವಿಧ ಶಾಲೆಯ ಸುಮಾರು 260 ಮಕ್ಕಳಿಗೆ 2024-25ನೇ ಸಾಲಿನ ಮುಖ್ಯ ಪರೀಕ್ಷೆಯ ಮಾದರಿಯಲ್ಲಿಯೇ ಎಸ್‌ಎಸ್‌ಎಲ್‌ಸಿ ಅಣಕು ಪರೀಕ್ಷೆ ನಡೆಸಲಾಯಿತು.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಪಟ್ಟಣದ ವ್ಯಾಪ್ತಿಯ ಶಾಲೆಗಳಲ್ಲಿ ನಡೆಸಿದ ಅಣಕು ಪರೀಕ್ಷೆ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ, “ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆ ಯಾವ ರೀತಿಯಲ್ಲಿ ನಡೆಯುತ್ತದೆಯೋ ಅದೆ ಮಾದರಿಯಲ್ಲಿ ಈ ಪರೀಕ್ಷೆಯು ನಡೆಡಿದ್ದು, ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಹೆಚ್ಚಿಸಿದೆ, ವಿದ್ಯಾರ್ಥಿಗಳು ಮಾನಸಿಕ ಒತ್ತಡವನ್ನು ಮಾಡಿಕೊಳ್ಳದೆ ಆರೋಗ್ಯವನ್ನು ಕಾಪಾಡಿಕೊಳ್ಳುತ್ತ ದಿನನಿತ್ಯ ಸಮಯ ಪಾಲನೆ ಮಾಡಿಕೊಂಡು ಪಠ್ಯಪುಸ್ತಕವನ್ನು ಓದುತ್ತ ಪರೀಕ್ಷೆಯನ್ನು ಎದುರಿಸಬೇಕು” ಎಂದು ಸಲಹೆ ನೀಡಿದರು.

“ಮುಖ್ಯ ಪರೀಕ್ಷೆಗೆ ಇನ್ನು ಕೆಲವೇ ದಿನಗಳು ಉಳಿದಿದ್ದು, ಈಗಲೂ ಸಮಯವಿದೆ. ಚೆನ್ನಾಗಿ ಓದಿ ಉತ್ತಮ ಅಂಕಗಳನ್ನು ಪಡೆಯಬೇಕು. ಈ ಬಾರಿ ತಾಲೂಕಿನ ಎಲ್ಲ ಶಾಲೆಯ ಶಿಕ್ಷಕರು ಹೆಚ್ಚಿನ ಶ್ರಮವಹಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ್ದು, ಶೇ.90ಕ್ಕೂ ಮೇಲ್ಪಟ್ಟು ಉತ್ತಮ ಫಲಿತಾಂಶ ಪಡೆಯಬಹುದೆಂಬ ನಿರೀಕ್ಷೆಯಲ್ಲಿದ್ದೇವೆ. ಈ ಬಾರಿ ಎಲ್ಲ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲಿ ಎಂಬ ಉದ್ದೇಶದಿಂದ ಪಾಸಿಂಗ್ ಮತ್ತು ಸ್ಕೋರಿಂಗ್ ಎಂಬ ಎರಡು ಪ್ಯಾಕೇಜ್ ಮಾಡಿದ್ದು, ಯಾವ ವಿದ್ಯಾರ್ಥಿ ಶಿಕ್ಷಣದಲ್ಲಿ ಹಿನ್ನಡೆ ಇದ್ದಾರೆ ಅವರ ಮೇಲೆ ನಿಗಾವಹಿಸಿ ಅವರಿಂದ ಉತ್ತಮ ಫಲಿತಾಂಶ ಪಡೆಯಲು ಹಾಗೂ ಉತ್ತಮ ಕಲಿಕಾ ಜ್ಞಾನವಿರುವ ವಿದ್ಯಾರ್ಥಿಗಳಿಂದ ಹೆಚ್ಚಿನ ಅಂಕಗಳಿಸಲು ಈ ಪ್ಯಾಕೆಜ್ ಸಹಕಾರಿಯಾಗಲಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಸಾಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷ ಅ ರಾ ಶ್ರೀನಿವಾಸರ ಭಾಷಣ

ಈ ವೇಳೆ ಶಿಕ್ಷಣ ಸಂಯೋಜನಾಧಿಕಾರಿ ಗೋಪಾಲ್, ಜಗದೀಶ್, ಮುಖ್ಯ ಶಿಕ್ಷಕರಾದ ಶಿವಕುಮಾರ್ ಎಸ್ ಎನ್, ಮಂಜುಳಾ, ಶಿಕ್ಷಕರಾದ ಪ್ರಸನ್ನ ಅರಸ್, ಪ್ರವೀಣ್, ನವೀನ್, ಪಾಟೀಲ್ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X