ಹಾಸನ ಜಿಲ್ಲೆಯ ಆಲೂರು ತಾಲೂಕಿನ ಭೈರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಲೂರು ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿದರು.
ಭೈರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂ ಎಲ್ ಎಲಿಜಬೆಥ್ ಮಾರ್ಗದರ್ಶನದ ರತ್ನಮ್ಮ ಬುಲ್‌ಬುಲ್ಸ್ ತಂಡದ ಸ್ಕೌಟ್ಸ್, ಗೈಡ್ಸ್ ಮಕ್ಕಳು 2023-24ನೇ ಸಾಲಿನಲ್ಲಿ ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಪ್ರತಿನಿಧಿಸಿದ್ದರು. ಹಾಗೇಯೇ ಬೆಂಗಳೂರಿನಲ್ಲಿ ನಡೆದ 2023-24ನೇ ಸಾಲಿನ ರಾಜಭವನ ರ‍್ಯಾಲಿಯಲ್ಲಿ ಭಾಗವಹಿಸಿ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದ್ದರು.
ಸದರಿ ಶಾಲೆಯ 3 ರಿಂದ 5ನೇ ತರಗತಿ ಮಕ್ಕಳಾದ ಬಿ ಎಂ ಡಿಂಪನ, ಲಾಸ್ಯ ಎ, ಯುಕ್ತಶ್ರೀ ಬಿ ಎಲ್, ಸ್ಯಾನ್ವಿ, ಮಾನಸ, ಪವಿತ್ರ, ಮಾನ್ವಿತ ಹಾಗೂ ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ಫ್ಲಾಕ್ ಲೀಡರ್ ಎಂ ಎಲ್ ಎಲಿಜಬೆಥ್ ಅವರುಗಳನ್ನು ಸನ್ಮಾನಿಸಿ ಗೌರವಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶಿವಗಂಗೋತ್ರಿ ಆವರಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ
ಈ ಸಂದರ್ಭದಲ್ಲಿ ರಂಭಾಪುರಿ ಶಾಖಾ ಹಿರೆಮಠ ಕಾರ್ಜುವಳ್ಳಿಯ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು, ಶಾಸಕ ಸಿಮೆಂಟ್ ಮಂಜು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಕಾರ್ಯದರ್ಶಿ ಕೊಟ್ರೇಶ್ ಎಸ್ ಉಪ್ಪಾರ್, ರಾ.ಕಾ.ಪ.ಧ್ವ.ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ, ತಾಲೂಕು ಅಧ್ಯಕ್ಷ ಟಿ ಕೆ ಕುಮಾರಸ್ವಾಮಿ, ಜೆಡಿಎಸ್ ಮುಖಂಡ ಕೆ ಎಸ್ ಮಂಜೇಗೌಡ, ಅಜಿತ್ ಚಿಕ್ಕಕಣಗಾಲ್ ಸೇರಿದಂತೆ ಬಹುತೇಕರು ಇದ್ದರು.
