ಹಾಸನ | ರಾಜ್ಯಮಟ್ಟದ ಸಾಧನೆ; ಭೈರಾಪುರ ಶಾಲೆಯ ಸ್ಕೌಟ್ಸ್ ಗೈಡ್ಸ್ ಮಕ್ಕಳಿಗೆ ಗೌರವ ಸನ್ಮಾನ

Date:

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಭೈರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್‌ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಲೂರು ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿದರು.

- Advertisement -

ಭೈರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂ‌ ಎಲ್ ಎಲಿಜಬೆಥ್ ಮಾರ್ಗದರ್ಶನದ ರತ್ನಮ್ಮ ಬುಲ್‌ಬುಲ್ಸ್ ತಂಡದ ಸ್ಕೌಟ್ಸ್, ಗೈಡ್ಸ್ ಮಕ್ಕಳು 2023-24ನೇ ಸಾಲಿನಲ್ಲಿ ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಪ್ರತಿನಿಧಿಸಿದ್ದರು. ಹಾಗೇಯೇ ಬೆಂಗಳೂರಿನಲ್ಲಿ ನಡೆದ 2023-24ನೇ ಸಾಲಿನ ರಾಜಭವನ ರ‍್ಯಾಲಿಯಲ್ಲಿ ಭಾಗವಹಿಸಿ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್‌ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸದರಿ ಶಾಲೆಯ 3 ರಿಂದ 5ನೇ ತರಗತಿ ಮಕ್ಕಳಾದ ಬಿ ಎಂ ಡಿಂಪನ, ಲಾಸ್ಯ ಎ, ಯುಕ್ತಶ್ರೀ ಬಿ ಎಲ್, ಸ್ಯಾನ್ವಿ, ಮಾನಸ, ಪವಿತ್ರ, ಮಾನ್ವಿತ ಹಾಗೂ ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ಫ್ಲಾಕ್ ಲೀಡರ್ ಎಂ ಎಲ್ ಎಲಿಜಬೆಥ್‌ ಅವರುಗಳನ್ನು ಸನ್ಮಾನಿಸಿ ಗೌರವಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶಿವಗಂಗೋತ್ರಿ ಆವರಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಈ ಸಂದರ್ಭದಲ್ಲಿ ರಂಭಾಪುರಿ ಶಾಖಾ ಹಿರೆಮಠ ಕಾರ್ಜುವಳ್ಳಿಯ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು, ಶಾಸಕ ಸಿಮೆಂಟ್ ಮಂಜು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಕಾರ್ಯದರ್ಶಿ ಕೊಟ್ರೇಶ್ ಎಸ್ ಉಪ್ಪಾರ್, ರಾ.ಕಾ.ಪ.ಧ್ವ.ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ, ತಾಲೂಕು ಅಧ್ಯಕ್ಷ ಟಿ ಕೆ ಕುಮಾರಸ್ವಾಮಿ, ಜೆಡಿಎಸ್ ಮುಖಂಡ ಕೆ ಎಸ್ ಮಂಜೇಗೌಡ, ಅಜಿತ್ ಚಿಕ್ಕಕಣಗಾಲ್ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...