ಹಾಸನ | ರಾಜ್ಯ ಮಟ್ಟದ ಆಲೂಗೆಡ್ಡೆ ಮೇಳ ಆಯೋಜನೆ; ಸಂಸದ ಶ್ರೇಯಸ್ ಪಟೇಲ್ 

Date:

ಹಾಸನ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದ ಆಲೂಗಡ್ಡೆ, ವಿವಿಧ ರೋಗಗಳಿಂದ ನಶಿಸುತ್ತಿರುವ ಹಿನ್ನೆಲೆಯಲ್ಲಿ, ಆಲೂಗೆಡ್ಡೆ ಬೆಳೆಗೆ ಪುನಶ್ಚೇತನ ನೀಡುವ ಉದ್ದೇಶದಿಂದ ರಾಜ್ಯ ಮಟ್ಟದ ಆಲೂಗೆಡ್ಡೆ ಮೇಳ ಆಯೋಜಿಸಲಾಗುತ್ತಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ರಾಜ್ಯಮಟ್ಟದ ಆಲೂಗೆಡ್ಡೆ ಮೇಳದ ಪೋಸ್ಟರ್ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ ಪಟೇಲ್ ಬಿಡುಗಡೆಗೊಳಿಸಿದರು.

- Advertisement -

 ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ವಿವಿಧ ಇಲಾಖೆಗಳು, ಸಂಸ್ಥೆಗಳು, ಜಿಲ್ಲೆ ರೈತರು, ರೈತ ಉತ್ಪಾದಕ ಸಂಸ್ಥೆಗಳು, ಎಪಿಎಂಸಿ ವರ್ತಕರ ಸಂಘ, ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ಕೇಂದ್ರೀಯ ಆಲೂಗೆಡ್ಡೆ ಸಂಶೋಧನಾ ಕೇಂದ್ರ ಸಿಮ್ಲಾ ಇವರ ಸಹಭಾಗಿತ್ವದಲ್ಲಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಪಕ್ಕದಲ್ಲಿ ಜ.೨೬ ಮತ್ತು ೨೭ ರಂದು ರಾಜ್ಯ ಮಟ್ಟದ ಆಲೂಗೆಡ್ಡೆ ಮೇಳವನ್ನು ಏರ್ಪಡಿಸಲಾಗುತ್ತಿದೆ. ಆಲೂಗಡ್ಡೆ ಬೆಳೆ ಎಂದರೆ ಹಾಸನ ಎನ್ನುವಷ್ಟು ಜಿಲ್ಲೆ ಪ್ರಸಿದ್ಧವಾಗಿತ್ತು. ಕಳೆದ ೧೫ ವರ್ಷಗಳ ಹಿಂದೆ ಜಿಲ್ಲೆಯಲ್ಲಿ ೪೦ ರಿಂದ ೫೦ ಸಾವಿರ ಹೆಕ್ಟೇರ್‌ಗಳಲ್ಲಿ ಆಲೂಗಡ್ಡೆ ಬೆಳೆ ಬೆಳೆಯಲಾಗುತ್ತಿತ್ತು. ಅಂಗಮಾರಿ ರೋಗ ಸೇರಿದಂತೆ ವಿವಿಧ ರೋಗಗಳಿಂದ, ಆಲೂಗಡ್ಡೆ ಬೆಳೆಯ ಪ್ರದೇಶ ೪ ರಿಂದ ೫ ಸಾವಿರ ಹೆಕ್ಟೇರ್‌ಗೆ ಇಳಿದಿದೆ. ಉತ್ತಮ ಗುಣಮಟ್ಟದ ಬಿತ್ತನೆ ಬೀಜದ ಕೊರತೆ, ಹೆಚ್ಚಿದ ಉತ್ಪಾದನಾ ವೆಚ್ಚ, ಮುಂಗಾರು ಹಂಗಾಮಿನಲ್ಲಿ ಕೊಳೆರೋಗ ಮತ್ತು ಅಂಗಮಾರಿ ರೋಗದ ಹಾವಳಿ ಕಾರಣ ರೈತರು ವರ್ಷದಿಂದ ವರ್ಷಕ್ಕೆ ಆಲೂಗಡ್ಡೆ ಬಿತ್ತನೆ ಕೈಬಿಡುತ್ತಿರುವ ಸ್ಥಿತಿ ಉಂಟಾಗಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮೇಳದಲ್ಲಿ ಆಲೂಗಡ್ಡೆ ಬೆಳೆಯ ಹೊಸ ತಳಿಗಳ ಪರಿಚಯ, ಸುಧಾರಿತ ಸಸಿ ಸಂಸ್ಕರಣೆ, ಔಷಧಿ ಬಳಕೆ ವಿಧಾನ, ಯಾಂತ್ರೀಕರಣದ ಬಳಕೆ, ಬೀಜ ಉತ್ಪಾದನೆ ಕುರಿತ ಮಾಹಿತಿ ನೀಡಲಾಗುವುದು. ಆಲೂಗಡ್ಡೆ ಬೀಜ ಉತ್ಪಾದಿಸುವ ರೈತರು, ಸಂಸ್ಥೆಗಳು, ಸಂಶೋಧನಾ ಕೇಂದ್ರಗಳ ತಜ್ಞರು, ಔಷಧಿ ಹಾಗೂ ಬೀಜ ಕಂಪನಿಗಳು ಭಾಗವಹಿಸಲಿದ್ದು, ಆಲೂಗಡ್ಡೆ ಸಂಸ್ಕರಣ ಕೈಗಾರಿಕೆಗಳು ಮತ್ತು ರೈತರ ನಡುವೆ ಸಂಪರ್ಕ ಬೆಳೆಸುವ ಉದ್ದೇಶವಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದು, ಹೆಚ್ಚು ಜನರ ಪಾಲ್ಗೊಳ್ಳುವ ನಿರೀಕ್ಷೆ ಇದೆ. ವಿಜ್ಞಾನಿಗಳು, ಅನುಭವೀ ರೈತರು ಹಾಗೂ ತಜ್ಞರಿಂದ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು, ಬಿತ್ತನೆ ವಿಧಾನ, ಬೀಜೋಪಚಾರ, ರೋಗ ನಿಯಂತ್ರಣ ಸೇರಿದಂತೆ ಆಲೂಗಡ್ಡೆ ಬೆಳೆಯ ಸಂಪೂರ್ಣ ಮಾಹಿತಿಯನ್ನು ರೈತರಿಗೆ ನೀಡಲಾಗುವುದು ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಶಾಸಕ ಹೆಚ್.ಡಿ ರೇವಣ್ಣನಿಗೆ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ ಶಿವಲಿಂಗೇಗೌಡ ತಿರುಗೇಟು

ಜಿಲ್ಲೆಯ ಆಲೂಗಡ್ಡೆ ಉತ್ಪಾದನೆಯಲ್ಲಿ ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗಿತ್ತು. ಆದರೇ ವಿವಿಧ ರೋಗಗಳಿಂದ ರೈತರು ಆಲೂಗಡ್ಡೆ ಬಿತ್ತನೆ ಕಡಿಮೆ ಮಾಡಿ ಮೆಕ್ಕೆಜೋಳದ ಕಡೆಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಮೆಕ್ಕೆಜೋಳಕ್ಕೂ ರೋಗ ಬಾಧೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಮೂಲಕ ಮತ್ತೆ ಆಲೂಗಡ್ಡೆ ಬಿತ್ತನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿದೆ. ಆಲೂಗಡ್ಡೆ ಬೆಳೆಗೆ ರೈತರಿಗೆ ಅರಿವು, ತಾಂತ್ರಿಕ ಜ್ಞಾನ, ಬೀಜೋತ್ಪಾದನೆ ಪ್ರೋತ್ಸಾಹ ಹಾಗೂ ಮೂಲಭೂತ ಸೌಕರ್ಯಗಳ ಅಗತ್ಯವಿದೆ , ವಿಜ್ಞಾನಿಗಳು, ತಂತ್ರಜ್ಞರು, ಅಧಿಕಾರಿಗಳು ಹಾಗೂ ಪ್ರಗತಿಪರ ರೈತರೊಂದಿಗೆ ಸಂವಾದ ಕಾರ್ಯಕ್ರಮಗಳ ಮೂಲಕ ಜಿಲ್ಲೆಯಲ್ಲಿ ಮತ್ತೆ ಆಲೂಗಡ್ಡೆ ಬಿತ್ತನೆ ಚಟುವಟಿಕೆ ಚುರುಕುಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಕೆ. ಲತಾ ಕುಮಾರಿ ತಿಳಿಸಿದರು. ಈ ವೇಳೆ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಯೋಗೇಶ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಿ.ಆರ್ ಪೂರ್ಣಿಮಾ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...