ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿರುವ ಪ್ರತಿಷ್ಠಿತ ಎಂಸಿಇ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ದರ್ಶನ್ (24) ಮೃತ ಯುವಕ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ತುರುವೇಕೆರೆ ಮೂಲದ ನಂಜುಂಡೇಗೌಡ ಹಾಗೂ ಮಮತಾ ದಂಪತಿಗಳ ಪುತ್ರ. ಆತ ಎಂಸಿಇ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ. ಹಾಸನಾಂಬ ಬ್ಲಾಕ್‌ನ ರೂಂ.ನಂ. ಎಚ್.ಎ.159ರಲ್ಲಿ ಪ್ಲಾಸ್ಟಿಕ್ ವೈರ್‌ನಿಂದ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸುದ್ದಿ ತಿಳಿದಾಗಿನಿಂದ ಹಾಸ್ಟೆಲ್ ಹಾಗೂ ಕಾಲೇಜು ಆವರಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಎಎಸ್‌ಪಿ ವೆಂಕಟೇಶ್ ನಾಯ್ಡು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ: ಹಾಸನ | ಕೀಳರಿಮೆ ಬಿಟ್ಟು ಮೂಲ ಜಾತಿಯನ್ನು ಗೌರವಿಸಿ: ಲೋಕೇಶ್
ಕಾಲೇಜು ಮುಂಭಾಗದಲ್ಲಿ ನೂರಾರು ವಿದ್ಯಾರ್ಥಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.