ಹಾಸನ | ವಿಫಲಗೊಂಡ ಬಾವಿಗಳ ಮುಚ್ಚಲು ಕ್ರಮವಹಿಸಿ: ಡಿಸಿ ಲತಾ ಕುಮಾರಿ

Date:

Advertisements

ಹಾಸನ ಜಿಲ್ಲೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ಪಡೆಯಬೇಕು ಜೊತೆಗೆ ವಿಫಲಗೊಂಡ ಬಾವಿಗಳನ್ನು ಮುಚ್ಚಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಂತರ್ಜಲ ಅಭಿವೃದ್ದಿ ಮತ್ತು ಅತಿ ಬಳಕೆ ನಿಯಂತ್ರಣ ಅಧಿನಿಯಮದಡಿ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, “ವಿಫಲ ಕೊಳವೆ ಬಾವಿಗಳಲ್ಲಿ ಚಿಕ್ಕ ಮಕ್ಕಳು ಬಿದ್ದು ಸಾವಿಗೀಡಾಗುವ ಅವಘಡಗಳನ್ನು ತಪ್ಪಿಸಲು ಮುಂಜಾಗ್ರತೆವಹಿಸಿ. ಮಣ್ಣು ಮತ್ತು ಕಲ್ಲುಗಳಿಂದ ಸಂಪೂರ್ಣವಾಗಿ ಮುಚ್ಚಿ ಗಿಡನೆಟ್ಟು ಸುರಕ್ಷಿತವಾಗಿಡಬೇಕು” ಎಂದರು.

“ಸ್ಥಳೀಯ ಪ್ರಾಧಿಕಾರ (ಗ್ರಾಮ ಪಂಚಾಯಿತಿ/ಪಟ್ಟಣ ಪಂಚಾಯಿತಿ, ಪುರಸಭೆ, ನಗರ ಸಭೆ, ಮಹಾನಗರ ಪಾಲಿಕೆಗಳು) ನಿರಾಪೇಕ್ಷಣಾ ಪತ್ರವನ್ನು ನೀಡುವಾಗ 15 ದಿನ ಮುಂಚಿತವಾಗಿ ಅರ್ಜಿ ಪಡೆದು ಸ್ವೀಕೃತಿ ನೀಡಬೇಕು. ಸಾರ್ವಜನಿಕ ಕುಡಿಯುವ ನೀರಿನ ಮೂಲಗಳಿಂದ 500 ಮೀಟರ್ ದೂರ ಇರುವ ಬಗ್ಗೆ ಪಿ.ಡಿ.ಓ ರವರಿಂದ ದೃಡೀಕರಿಸಿಕೊಳ್ಳಬೇಕು. ಮುಚ್ಚಳಿಕೆ ಪತ್ರ ಪಡೆಯಬೇಕು” ಎಂದರು.

Advertisements

“ಸಫಲ/ವಿಫಲ ಕೊಳವೆ ಬಾವಿಗಳ ಬಗ್ಗೆ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ ನೊಂದಾಯಿಸತಕ್ಕದ್ದು, ಪ್ರತಿ ತಿಂಗಳ ಮೊದಲನೆ ತಾರೀಖು ತಿಂಗಳ ಕ್ರೂಢಿಕೃತ ಮಾಹಿತಿಯನ್ನು ತಾಲ್ಲೂಕು ಪಂಚಾಯಿತಿಗೆ ಸಲ್ಲಿಸಬೇಕು. ತಾಲ್ಲೂಕು ಪಂಚಾಯಿತಿಯು ತಾಲ್ಲೂಕಿನ ಮಾಹಿತಿಯನ್ನು ಕಾರ್ಯ ನಿರ್ವಾಹಕ ಅಭಿಯಂತರರು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (ನೋಡಲ್ ಅಧಿಕಾರಿ) ಜಿಲ್ಲಾ ಪಂಚಾಯಿತಿ ಇವರಿಗೆ ಕಳುಹಿಸಬೇಕು. ಅದೇ ರೀತಿ ನಗರ ಸ್ಥಳೀಯ ಪ್ರಾಧಿಕಾರಗಳು ತಿಂಗಳ ಕ್ರೂಡಿಕತ ಮಾಹಿತಿಯನ್ನು ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ ಇವರಿಗೆ ಸಲ್ಲಿಸಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: ಹಾಸನ | ಪೋಲಿಯೊ ಜಾಗೃತಿ ಅಭಿಯಾನದಲ್ಲಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರಾಮಚಂದ್ರ, ಜಿಲ್ಲಾ ಅಂತರ್ಜಲ ಅಭಿವೃದ್ದಿ ಇಲಾಖೆಯ ಹಿರಿಯ ಭೂವಿಜ್ಞಾನಿ ಸುಧಾ ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಕರವೇ ಆಗ್ರಹ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಜನಪ್ರತಿನಿಧಿಗಳು,...

ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಸಾಕ್ಷಿ ದೂರುದಾರ

ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ...

ಶಿವಮೊಗ್ಗ | ಜಾನುವಾರುಗಳ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಶಿವಮೊಗ್ಗ, ಜಾನುವಾರು ಕಳವು ಪ್ರಕರಣದ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ ಕಳಸ ...

ಹಾಸನ | ಸೆಪ್ಟೆಂಬರ್ 1ರಂದು ಅಲ್ಪಸಂಖ್ಯಾತ ಸಮುದಾಯಗಳ ಕುಂದು ಕೊರತೆ ಸಭೆ

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆ.1 ರಂದು 10 ಗಂಟೆಗೆ ಹಾಸನ ಜಿಲ್ಲಾ ಪಂಚಾಯತ್...

Download Eedina App Android / iOS

X