ಹಾಸನ | ಭ್ರಷ್ಟಾಚಾರದ ಅಡ್ಡೆಯಾಗಿದೆ ತಾಲೂಕು ಕಚೇರಿ; ಸ್ಥಳೀಯರ ಆರೋಪ

Date:

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಲಂಚ ಕೊಡಲಿಲ್ಲವೆಂದರೆ, ಒಂದೆರಡು ದಿನ ಆಗುವ ಕೆಲಸಗಳಿಗೆ ತಿಂಗಳಾದ್ಯಂತ ಕಚೇರಿಗೆ ಅಲೆಸುತ್ತಾರೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -

ಕಚೇರಿಯಲ್ಲಿ ಸಾರ್ವಜನಿಕರಿಗೆ ಸರಿಯಾದ ವ್ಯವಸ್ಥೆಗಳಿಲ್ಲ. ಮೂಲ ಸೌಕರ್ಯಗಳಿಲ್ಲ. ಕಚೇರಿಗೆ ಬರುವ ಮಂದಿಗೆ ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸುವುದಿಲ್ಲ. ಹಳ್ಳಿಗಳಿಂದ ರೈತರು, ಕೂಲಿ ಕಾರ್ಮಿಕರು ತಮ್ಮ ಕೆಲಸಗಳನ್ನು ಬಿಟ್ಟು ಬಂದು, ದಿನವಿಡೀ ಕಚೇರಿಯಲ್ಲಿ ಕಾದು ಕುಳಿತರೂ, ಕೆಲಸಗಳಾಗುವುದಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಕಚೇರಿಯಲ್ಲಿ ವಿಶೇಷ ಚೇತನರು ಬಂದರೂ ಅವರಿಗೆ ಆಧ್ಯತೆ ನೀಡದೆ, ಸರತಿ ಸಾಲಿನಲ್ಲಿ ನಿಲ್ಲಿಸುತ್ತಾರೆ. ಮೆಟ್ಟಿಲುಗಳನ್ನು ಏರಲು ಆಗದೇ ಇರುವವರಿಗೆ ಪರ್ಯಾಯ ವ್ಯವಸ್ಥೆ (ಲಿಫ್ಟ್‌) ಇಲ್ಲ. ಸಮಯ ಆಗದಿದ್ದರೂ ರೆಕಾರ್ಡ್ ರೂಮ್ ಬಾಗಿಲನ್ನು ಮುಚ್ಚುತ್ತಾರೆ” ಎಂದು ತಾಲೂಕಿನ ನಿವಾಸಿ ಪ್ರಭಾಕರ್ ಆರೋಪಿಸಿದ್ದಾರೆ.

“ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಬರುವುದಿಲ್ಲ. ಬಡ ಜನರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ” ಎಂದು ಅವರು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು...

ಧಾರವಾಡ | ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ: ಡಾ. ರಾಘವೇಂದ್ರ ಪಾಟೀಲ

"ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ. ಭಾರತದ ಸಂವಿಧಾನ...

ಹಾವೇರಿ | ಬೆಟಗೇರಿ ಕೃಷ್ಣಶರ್ಮ, ವಿ.ಕೃ. ಗೋಕಾಕರು ಕನ್ನಡ ವಿವೇಕ ಕಟ್ಟಿದವರು: ಕವಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ

ಬೆಟಗೇರಿ ಕೃಷ್ಣಶರ್ಮ ಮತ್ತು ವಿ.ಕೃ. ಗೋಕಾಕರು ತಮ್ಮ ಬರವಣಿಗೆಯಲ್ಲಿ ನೆಲದ ಸಂವೇದನೆಗಳ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...