ಹಾಸನ | ಶಿಕ್ಷಕರು ಶಾಲಾ ಶೌಚಾಲಯಗಳ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕು; ಶಾಸಕ ಸಿಮೆಂಟ್ ಮಂಜು

Date:

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹಾನಬಾಳು ಹೋಬಳಿ ಕೇಂದ್ರದಲ್ಲಿರುವ ಪದವಿ ಪೂರ್ವ ಕಾಲೇಜು ಹಾಗೂ ಪ್ರಾಥಮಿಕ ಶಾಲೆ (ಕೆಪಿಎಸ್) ಆವರಣದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಗ್ರಾಮ ಪಂಚಾಯತಿ ಅನುದಾನದಲ್ಲಿ ನಿರ್ಮಿಸಲಾದ ನೂತನ ಶೌಚಾಲಯವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಶಿಕ್ಷಕರ ಪ್ರಮುಖ ಹೊಣೆಗಾರಿಕೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

- Advertisement -

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಶಾಲೆಗಳಲ್ಲಿ ಮೂಲಸೌಕರ್ಯಗಳು ಅತ್ಯಂತ ಅವಶ್ಯಕ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿರುವ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಲಾಗಿದೆ.  ನಾಗರಿಕ ಸಮಾಜದಲ್ಲಿ ಗಂಡು–ಹೆಣ್ಣು ಎಂಬ ಲಿಂಗ ತಾರತಮ್ಯ ಇರಬಾರದು. ಪುರುಷ ಪ್ರಧಾನ ಸಮಾಜದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ದೇಶದ ಅಭಿವೃದ್ಧಿಯಲ್ಲಿ ಹೆಣ್ಣು ಮಕ್ಕಳ ಪಾತ್ರವೂ ಬಹುಮುಖ್ಯವಾಗಿದೆ. ಹಿಂದೆ ಮನೆಯ ಜೀವನಕ್ಕೆ ಸೀಮಿತವಾಗಿದ್ದ ಹೆಣ್ಣು ಮಕ್ಕಳು ಇಂದು ಚಂದ್ರಯಾನ ಯೋಜನೆಯಂತಹ ಮಹತ್ವದ ವಿಜ್ಞಾನ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಆದ್ದರಿಂದ ಹೆಣ್ಣು ಮಕ್ಕಳು ತಮ್ಮಲ್ಲಿರುವ ಕೀಳರಿಮೆಯನ್ನು ತೊರೆದು, ತಾವು ಯಾವುದೇ ಕೆಲಸ ಮಾಡಬಲ್ಲೆವು ಎಂಬ ದೃಢ ನಿಶ್ಚಯ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನೂ ಓದಿದ್ದೀರಾ?ಹಾಸನ | ರಸ್ತೆ ಅಪಘಾತ; ಯಸಳೂರು ಪೋಲಿಸ್ ಪೇದೆ ಪ್ರತಾಪ್ ನಿಧನ

ಗ್ರಾಮ ಪಂಚಾಯಿತಿಯಿಂದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲೆಗಳ ಸುತ್ತುಗೋಡೆ, ಆಟದ ಮೈದಾನ, ಶೌಚಾಲಯ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಹಾನಬಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕೆ.ಆರ್. ಉಪಾಧ್ಯಕ್ಷೆ ಶೈಲಾ ರುದ್ರೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಮೋಹನ್ ಕುಮಾರ್ ಅಚ್ಚರಡಿ, ಯೋಗರಾಜು, ಸುರೇಶ್, ಎಸ್.ಡಿ.ಎಂ.ಸಿ ಅಧ್ಯಕ್ಷ ಅಣ್ಣು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ್, ಗೌರವಾಧ್ಯಕ್ಷ ಭಾಸ್ಕರ್ ಹಾನಬಾಳು, ಮುಖಂಡರಾದ ಕ್ಯಾಮನಹಳ್ಳಿ ರಾಜಕುಮಾರ್, ಅಗ್ನಿ ಸೋಮಶೇಖರ್, ಅವರೆಕಾಡು ಪೃಥ್ವಿ, ಸುಬ್ಬಣ್ಣ ಸೇರಿದಂತೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...