ಹಾಸನ | ಕಾಡಾನೆಗಳ ಬಗ್ಗೆ ಎಚ್ಚರಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ

Date:

ಕಾಡಾನೆಗಳಿವೆ ಎಂದು ಎಚ್ಚರಿಕೆ ನೀಡಿದ ಇಟಿಎಫ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ರಸ್ತೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯಲ್ಲಿ ಡಿಸೆಂಬರ್ 15ರವರೆಗೆ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮತ್ತು ಕಾಡಾನೆಗಳ ಸ್ಥಳಾಂತರ ಕಾರ್ಯಾಚರಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಕಾಡಾನೆಗಳಿವೆ ರಸ್ತೆಯಲ್ಲಿ ಓಡಾಡಬೇಡಿ ಎಂದು ಸ್ಥಳೀಯರನ್ನು ಅರಣ್ಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ. ಇದಕ್ಕೆ ಕೋಪಗೊಂಡ ಗ್ರಾಮಸ್ಥರು ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಆರ್‌ಆರ್‌ಟಿ ಹಾಗೂ ಇಟಿಎಫ್ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಅರಣ್ಯ ಇಲಾಖೆಯ ಜೀಪಿನ ಚಕ್ರದ ಗಾಳಿ ತೆಗೆಯಲೂ ಜನರು ಮುಂದಾಗಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನೊಂದೆಡೆ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹಿಂಡಾನೆಗಳು ಪರೇಡ್ ನಡೆಸಿದ ಘಟನೆ ನಡೆಯಿತು. ಗುಂಪು ಗುಂಪಾಗಿ ಕಾಫಿ ತೋಟದಿಂದ ತೋಟಕ್ಕೆ 35ಕ್ಕೂ ಹೆಚ್ಚು ಆನೆಗಳು ಅಲೆದಾಡುತ್ತಿರುವುದು ಕಂಡುಬಂದಿದೆ. ಇದರಲ್ಲಿ ಮರಿಯಾನೆಗಳೇ ಹೆಚ್ಚಾಗಿರುವುದು ಕಂಡುಬಂದಿದೆ. ಆದ್ದರಿಂದ ಈ ಪ್ರದೇಶದ ಸುತ್ತ-ಮುತ್ತ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...