ಹಾಸನ ಜಿಲ್ಲೆಯ ಬೇಲೂರು ನಗರದ ದೇವಸ್ಥಾನದ ರಸ್ತೆಯ ತಾಲೂಕು ಸಾರ್ವಜನಿಕರ ಸರ್ಕಾರಿ ಆಸ್ಪತ್ರೆ ಮುಂಭಾಗದ ರಸ್ತೆ ಕುಸಿದು ಬಿದ್ದಿದ್ದು, ಸ್ಥಳಕ್ಕೆ ಪುರಸಭಾ ಅಧ್ಯಕ್ಷ ಎ ಆರ್ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುವ ದೇವಸ್ಥಾನದ ರಸ್ತೆಯಲ್ಲಿ ದಿಢೀರ್ ರಸ್ತೆ ಕುಸಿತದಿಂದಾಗಿ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ.
ಸರ್ಕಾರಿ ಆಸ್ಪತ್ರೆ ಮುಂಭಾಗ ರಸ್ಥೆ ಕುಸಿದಿದೆ. ಹಾಗಾಗಿ ನಿತ್ಯ ರೋಗಿಗಳನ್ನು ಒಯ್ಯುವ ಆ್ಯಂಬುಲೆನ್ಸ್ ಮತ್ತು ಆಟೋರಿಕ್ಷಾಗಳು ಈ ರಸ್ತೆಯಲ್ಲಿ ಸಂಚರಿಸಲು ಅನಾನುಕೂಲ ಎದುರಿಸುವಂತಾಗಿದೆ. ರಸ್ತೆಯಲ್ಲಿ ಬೃಹತ್ ಗಾತ್ರದ ಗುಂಡಿ ಬಿದ್ದಿರುವ ಸ್ಥಳಕ್ಕೆ ಭೇಟಿ ನೀಡಿದ ಪುರಸಭಾ ಅಧ್ಯಕ್ಷ ಎ ಆರ್ ಅಶೋಕ್ ಸಂಬಂಧಪಟ್ಟ ಎಂಜಿನಿಯರ್‌ಗಳನ್ನು ಸ್ಥಳಕ್ಕೆ ಆಗಮಿಸುವಂತೆ ದೂರವಾಣಿ ಮೂಲಕ ಕರೆ ಮಾಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿದ್ದೀರಾ? ಬೆಂಗಳೂರು | ಟ್ಯಾಂಕರ್ ನೀರು ದಂಧೆ ತಪ್ಪಿಸಲು ಸಂಚಾರಿ ಕಾವೇರಿ ಯೋಜನೆ ಜಾರಿ: ಡಿಸಿಎಂ ಡಿ ಕೆ ಶಿವಕುಮಾರ್
ಶೀಘ್ರದಲ್ಲಿಯೇ ಗುಂಡಿಯನ್ನು ಮುಚ್ಚಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ದುರಸ್ತಿ ಮಾಡಿಸಲಾಗುವುದು ಎಂದು ಪುರಸಭಾ ಅಧ್ಯಕ್ಷ ಎಆರ್ ಅಶೋಕ್ ಹೇಳಿದರು.
ಇದೇ ಸಂದರ್ಭದಲ್ಲಿ ಪುರಸಭಾ ಆರೋಗ್ಯ ಅಧಿಕಾರಿ ಲೋಹಿತ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದ್ದರು.