ಹಾಸನ | ಧಾರಾಕಾರ ಮಳೆ; ಕುಂಬರಡಿ-ಹಾರ್ಲೆ ಎಸ್ಟೇಟ್‌ ನಡುವೆ ಭೂಕುಸಿತ

Date:

ಹಾಸನ ಜಿಲ್ಲೆಯಲ್ಲಿ ಎರಡು ದಿನ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದ್ದು, ಮಂಗಳವಾರ ಬೆಳಿಗ್ಗೆ ಸಕಲೇಶಪುರ ತಾಲೂಕಿನ ಕುಂಬರಡಿ-ಹಾರ್ಲೆ ಎಸ್ಟೇಟ್‌ ನಡುವೆ ಭೂಕುಸಿತ ಸಂಭವಿಸಿದೆ.

- Advertisement -

ಸಕಲೇಶಪುರದ ಹಾರ್ಲೆ ಎಸ್ಟೇಟ್ ಮೂಲಕ ನಡಹಳ್ಳಿಗಾಗಿ ದೊಡ್ಡತಪ್ಪಲೆ ಬಳಿ ರಾಷ್ಟ್ರೀಯ ಹೆದ್ದಾರಿ(ಹಾಸನ -ಮಂಗಳೂರು)ಗೆ ಸಂಪರ್ಕ ಕಲ್ಪಿಸುವ ನಡಹಳ್ಳಿ ರಸ್ತೆಯು ಹಾರ್ಲೆ ಎಸ್ಟೇಟ್ ಬಳಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಈ ಮಣ್ಣು ಕುಸಿತ ಆಗಿರುವ ಸ್ಥಳದ ಪಕ್ಕದಲ್ಲೇ ಎತ್ತಿನಹೊಳೆ ಪೈಪಪ್‌ಲೈನ್ ಹಾದು ಹೋಗಿದ್ದು, ಅದೇ ಕಾರಣದಿಂದ ಭೂಮಿ ಸಡಿಲಗೊಂಡು ಭೂಕುಸಿತ ಸಂಭವಿಸಿದೆ” ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭದ್ರಾ ಜಲಾಶಯದಿಂದ ನೀರು ಹರಿವು; ಇಮ್ಮಡಿಯಾದ ರೈತರ ಸಂತಸ

ರಸ್ತೆ ಕುಸಿದು ಸುಮಾರು 500 ಅಡಿಗಳವರೆಗೂ ಮಣ್ಣು ಕೊಚ್ಚಿಹೋಗಿರುವುದಲ್ಲದೆ ಎಸ್ಟೇಟ್ ಒಳಗಿರುವ ಕೆರೆ-ಕಟ್ಟೆಯೂ ಒಡೆದು ಹೋಗಿದೆ. ಮತ್ತೊಂದೆಡೆ ಹೆದ್ದಾರಿಯೂ ಕುಸಿದಿದ್ದು, ಸೋಮವಾರ ಸಂಚಾರ ಅಸ್ತವ್ಯಸ್ತವಾಗಿತ್ತು. ಸಕಲೇಶಪುರ ಕಡೆಯಿಂದ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಬದಲಿ ರಸ್ತೆಯು ದೊಡ್ಡ ಪ್ರಮಾಣದಲ್ಲಿ ಕುಸಿದಿದೆ. ಇದರಿಂದ ಹಲವು ಗ್ರಾಮಗಳ ನಡುವಿನ ಸಂಪರ್ಕವೂ ಕಡಿತವಾಗಿದೆ. ಸುದ್ದಿ ತಿಳಿದ ಕೂಡಲೇ ತಾಲೂಕು ಉಪ ವಿಭಾಗಧಿಕಾರಿ ಡಾ. ಶ್ರುತಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...