ಹಾಸನ ದುರಂತ | ಮೃತರು, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

Advertisements

ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ತೀವ್ರ ನಿಗಾವಹಿಸಿದ್ದಾರೆ.

ಮೃತರ ಕುಟುಂಬಗಳ ಜತೆಗೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆಯನ್ನು ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೆ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.

ಈ ಸುದ್ದಿ ಓದಿದ್ದೀರಾ? ಹಾಸನ ದುರಂತ | ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಂದನ್ ಮೃತ್ಯು: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜತೆಗೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಮೃತರ ಕುಟುಂಬದವರ ಜತೆಗೂ ಮಾತನಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X