ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಶನಿವಾರದಂದು ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ವಿದ್ಯುತ್ ಸ್ಪರ್ಶದಿಂದ ಲೈನ್ ಮ್ಯಾನ್ ವರುಣ್ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವರುಣ್ ಕುಟುಂಬಸ್ಥರಿಗೆ ಸಂಸದ ಶ್ರೇಯಸ್ ಪಟೇಲ್ ಸಾಂತ್ವನ ಹೇಳಿದ್ದಾರೆ.
ಅಮ್ಮಗೋಡನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ವರುಣ್, ಮೊಸಳೆಹೊಸಹಳ್ಳಿ ರೈಲ್ವೆ ನಿಲ್ದಾಣದ ಬಳಿ ವಿದ್ಯುತ್ ಕಂಬವೇರಿ ಲೈನ್ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
“ವರುಣ್ ಅವರ ಅಗಲಿಕೆಯಿಂದ ತೀವ್ರ ದುಃಖವಾಗಿದೆ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ವರುಣ್ ಅವರ ಕುಟುಂಬಸ್ಥರ ಜೊತೆಗೆ ನಾವು ಸದಾ ಇರುತ್ತೇವೆ. ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸುವ ಕೆಲಸ ಮಾಡಲಾಗುವುದು. ಈ ಸಂಬಂಧ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.
ಈ ದುರ್ಘಟನೆಗೆ ನಿಖರ ಕಾರಣ ಏನೆಂಬುದು ತನಿಖೆಯಿಂದ ತಿಳಿಯಬೇಕಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಹಾಸನ | 21 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ