ಹಾಸನ ದುರಂತ | ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಂದನ್ ಮೃತ್ಯು: ಸಾವಿನ ಸಂಖ್ಯೆ 10ಕ್ಕೆ ಏರಿಕೆ

Date:

Advertisements

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್‌ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ದುರಂತದಲ್ಲಿ ಗಾಯಗೊಂಡು ಹಿಮ್ಸ್‌ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಂದನ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.

ಶನಿವಾರ ಹಾಸನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಸಚಿವರು, “ಘಟನೆಯಲ್ಲಿ ಈವರೆಗೆ ಒಂಬತ್ತು ಜನ ಮೃತಪಟ್ಟಿದ್ದಾರೆ. ಸುಮಾರು 20 ಜನ ಇನ್ನೂ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ” ಎಂದು ತಿಳಿಸಿದ್ದರು. ಶನಿವಾರ ಸಂಜೆಯ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಚಂದನ್ ಎಂಬ ಯುವಕ ಮೃತಪಟ್ಟಿದ್ದಾನೆ.

ಇದನ್ನು ಓದಿದ್ದೀರಾ? ಹಾಸನ ದುರಂತ | ಟ್ರಕ್‌ ಚಾಲಕ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುವ ಯತ್ನ ಮಾಡಲಾಗಿತ್ತು: ಸಚಿವ ಕೃಷ್ಣ ಬೈರೇಗೌಡ

ಘಟನೆಯಲ್ಲಿ ಗಾಯಗೊಂಡಿರುವ ಇನ್ನೂ 19 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳ ಪೈಕಿ ಕೆಲವರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿರುವುದಾಗಿ ಹಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರಿಗೆ ಈಗಾಗಲೇ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಿಸಲಾಗಿದ್ದರೆ, ಗಾಯಾಳುಗಳಿಗೆ ತಲಾ 50,000₹ ಪರಿಹಾರ ಘೋಷಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X