ಮೀನು ತಿಂದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿದೆ.
ರವಿಕುಮಾರ್ (46), ಪುಟ್ಟಮ್ಮ 50) ಮೃತ ದುರ್ದೈವಿಗಳು. ಬಸವಹಳ್ಳಿ ಗ್ರಾಮದ ರವಿಕುಮಾರ್, ಕೆ ಆರ್ ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ ಸಾವನ್ನಪ್ಪಿದ್ದಾರೆ. ನೀರಿಲ್ಲದೆ ಬತ್ತಿ ಹೋಗಿದ್ದ ಕೆರೆಯ ಕೆಸರಿನಲ್ಲಿದ್ದ ಮೀನನ್ನು ಗ್ರಾಮಸ್ಥರು ಹಿಡಿದಿದ್ದರು. ಆ ಮೀನುಗಳಿಂದ ಅಡುಗೆ ಮಾಡಿ ಊಟ ಮಾಡಿದ್ದ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ತ್ಯಾಜ್ಯ ವಿಲೇವಾರಿ ಘಟಕದಲ್ಲಿನ ಆಕಸ್ಮಿಕ ಬೆಂಕಿ
ಊಟ ಮಾಡಿದ ನಂತರ ಹದಿನೈದಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರು ಅರಕಲಗೂಡು ಹಾಗೂ ಹಾಸನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ನಡೆದಿರುವ ಗ್ರಾಮಕ್ಕೆ ಜಿಲ್ಲಾಧಿಕಾರಿ ಸಿ ಸತ್ಯಭಾಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.