ಹಾಸನ | ಜಾತಿ-ಆದಾಯ ದೃಢೀಕರಣ ನೀಡಲು ಕಂಬ ಸುತ್ತಿಸಿದ ಸಮಿತಿ; ₹2 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

Date:

ಹಾಸನ ಜಿಲ್ಲಾ ಜಾತಿ ಮತ್ತು ಆದಾಯ ದೃಢೀಕರಣ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಕಾನೂನುಬಾಹಿರವಾಗಿ ವರ್ತಿಸಿದ್ದಕ್ಕಾಗಿ ಹೈಕೋರ್ಟ್ ₹2 ಲಕ್ಷ ದಂಡವನ್ನು ವಿಧಿಸಿದೆ.

- Advertisement -

ಸರ್ಕಾರಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಯೊಬ್ಬರ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ದೃಢೀಕರಿಸಲು ಒಂದು ವರ್ಷದವರೆಗೆ ಕಾಯಿಸಿದ್ದು, ಕಾನೂನಿಗೆ ವಿರುದ್ಧವಾಗಿ ದೃಢೀಕರಣ ನೀಡಲು ನಿರಾಕರಿಸಿರುವುದು ಮತ್ತು ಕೋರ್ಟ್‌ನ ಹಸ್ತಕ್ಷೇಪದ ನಂತರವೇ ಅವುಗಳನ್ನು ಅನುಮೋದಿಸಿದಕ್ಕಾಗಿ ಹೈಕೋರ್ಟ್‌ ದಂಡ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೋರ್ಟ್ ತನ್ನ ಆದೇಶದಲ್ಲಿ, “ಸಮಿತಿಯ ಸದಸ್ಯರು ಕಾನೂನನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದಾರೆ. ಇದರ ಪರಿಣಾಮವಾಗಿ ಅರ್ಜಿದಾರರು ಅನಗತ್ಯ ಮೊಕದ್ದಮೆಗೆ ಒಳಗಾಗಿ 12 ತಿಂಗಳುಗಳ ಉದ್ಯೋಗದ ನಷ್ಟವನ್ನು ಅನುಭವಿಸಿದ್ದಾರೆ. ಆದ್ದರಿಂದ, ಸಮಿತಿಯವರಿಗೆ ದಂಡ ವಿಧಿಸಬೇಕು” ಎಂದು ತಿಳಿಸಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮುತ್ತುಲಕ್ಷ್ಮಿ ಬಿ ಎನ್ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಅಂಗೀಕರಿಸುವಾಗ ಈ ಆದೇಶ ನೀಡಿದ್ದಾರೆ.

ಕಾನೂನಿನ ಉಲ್ಲಂಘನೆ ಮತ್ತು ಸಮಿತಿಯ ಟಿಪ್ಪಣಿ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮುತ್ತುಲಕ್ಷ್ಮಿ ಬಿ ಎನ್ ಎಂಬುವವರು 2023ರ ಜನವರಿಯಲ್ಲಿ ಕ್ಯಾಟಗರಿ 3ಎ ಅಡಿಯಲ್ಲಿ ಸಹಾಯಕ ಸಾರ್ವಜನಿಕ ಪ್ರಾಸಿಕ್ಯೂಟರ್ ಹುದ್ದೆಗೆ ಆಯ್ಕೆಯಾಗಿದ್ದರು. ಆದರೆ, 2023ರ ಮೇ ವೇಳೆ ಸರ್ಕಾರಿ ಪೋರ್ಟಲ್‌ನಲ್ಲಿ ತಮ್ಮ ಮೂಲ ಪ್ರಮಾಣಪತ್ರಗಳ ಚಿತ್ರಗಳನ್ನು ಅಪ್‌ಲೋಡ್ ಮಾಡಲು ಸೂಚಿಸಲಾಗಿತ್ತು. ಆದರೂ, ಸಮಿತಿಯು ದೃಢೀಕರಣ ನೀಡಲು ನಿರಾಕರಿಸಿತು.

ಸರ್ವೋಚ್ಚ ನ್ಯಾಯಾಲಯದ ಕಾನೂನಿನ ನಿರ್ದೇಶನದಂತೆ, ಸಮಿತಿಯು ಅಂತಿಮವಾಗಿ “ಅರ್ಜಿದಾರರ ಪತಿಯ ಆದಾಯವು ಮಿತಿಯನ್ನು ಮೀರಿದ್ದರೂ, ಕೋರ್ಟ್‌ನ ನಿರ್ದೇಶನದ ಆಧಾರದ ಮೇಲೆ ಮಾತ್ರ ಮಾನ್ಯತಾ ಪ್ರಮಾಣಪತ್ರವನ್ನು ನೀಡಲಾಗಿದೆ” ಎನ್ನುವ ಟಿಪ್ಪಣಿಯೊಂದಿಗೆ ಪ್ರಮಾಣಪತ್ರವನ್ನು ಜಾರಿಗೊಳಿಸಿತ್ತು.

ಸಮಿತಿಯ ಈ ಟಿಪ್ಪಣಿಯನ್ನು, “ಸರ್ವೋಚ್ಚ ನ್ಯಾಯಾಲಯದಿಂದ ಸ್ಥಾಪಿತವಾದ ಕಾನೂನಿನ ಅಜ್ಞಾನ ಮಾತ್ರವಲ್ಲದೇ, ಉದ್ಧಟತನದಿಂದ ನ್ಯಾಯಾಲಯಕ್ಕೆ ಅವಮಾನ ಎಸಗಿದೆ. ಮುತುಲಕ್ಷ್ಮಿ ಅವರ ಅರ್ಜಿಯನ್ನು ಅಂಗೀಕರಿಸುವಾಗ, ಸಮಿತಿಯ ಸದಸ್ಯರು ಉದ್ದೇಶಪೂರ್ವಕವಾಗಿ ಕಾನೂನನ್ನು ನಿರ್ಲಕ್ಷಿಸಿದ್ದಾರೆ” ಎಂದು ತೀರ್ಪು ನೀಡಿದರು.

“ಸಮಿತಿಯ ಕಾನೂನುಬಾಹಿರ ಕೃತ್ಯದಿಂದಾಗಿ ಮುತ್ತುಲಕ್ಷ್ಮಿಯವರು ಅನಗತ್ಯ ಮೊಕದ್ದಮೆಗೆ ಒಳಗಾಗಿ 12 ತಿಂಗಳುಗಳ ಕಾಲ ಉದ್ಯೋಗದ ನಷ್ಟವನ್ನು ಅನುಭವಿಸಿದ್ದಾರೆ. ಆದ್ದರಿಂದ ಆ ಈ ವೇಳೆ ಆಯ್ಕೆಯಾಗಿದ್ದ ಇತರೆ ಅಭ್ಯರ್ಥಿಗಳು ಜೂನ್ 2024ರಲ್ಲಿ ಸೇವೆಗೆ ಸೇರಿದ್ದಾರೆ. ಇದೀಗ ಉದ್ಯೋಗನಷ್ಟ ಅನುಭವಿಸಿರುವ ಮುತ್ತುಲಕ್ಷ್ಮಿಯವರಿಗೆ ಆಗಿನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ವೈಯಕ್ತಿಕ ಖರ್ಚಿನಿಂದ ₹2 ಲಕ್ಷ ದಂಡವನ್ನು ಪಾವತಿಸಬೇಕು” ಎಂದು ಕೋರ್ಟ್ ಆದೇಶಿಸಿದೆ.

ಹೈಕೋರ್ಟ್‌ನ ಈ ತೀರ್ಪು, ಕಾನೂನಿನ ಉಲ್ಲಂಘನೆ ಮತ್ತು ಅಧಿಕಾರದ ದುರುಪಯೋಗವನ್ನು ತಡೆಯಲು ಸರ್ಕಾರಿ ಸಮಿತಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕೆಂಬ ಸಂದೇಶವನ್ನು ಸಾರುತ್ತದೆ. ಈ ಘಟನೆಯಿಂದಾಗಿ, ಜಾತಿ ಮತ್ತು ಆದಾಯ ದೃಢೀಕರಣ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಕಾನೂನಿನ ಪಾಲನೆಯ ಮಹತ್ವವನ್ನು ಒತ್ತಿಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...