ಹಾಸನ | ಅಲೆಮಾರಿ ಸಮುದಾಯದ ಜನರ ಮೇಲೆ ಸವರ್ಣೀಯರ ದೌರ್ಜನ್ಯ; ಪ್ರಕರಣ ದಾಖಲು

Date:

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬೆಟ್ಟದ ಸಾತೇನಹಳ್ಳಿಯಲ್ಲಿ ವಾಸಿಸುತ್ತಿರುವ ಅಲೆಮಾರಿ ಸುಡುಗಾಡುಸಿದ್ದ ಸಮುದಾಯದ ಕುಟುಂಬಗಳ ಮೇಲೆ ಸವರ್ಣೀಯರು ದೌರ್ಜನ್ಯ ಎಸಗುತ್ತಿದ್ದಾರೆ. ಆ ಕುಟುಂಬಗಳಿಗೆ ರಕ್ಷಣೆ ನೀಡಿ, ಮೂಲ ಸೌಕರ್ಯಗಳನ್ನು ಒದಗಿಸಬೇಕು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ.

- Advertisement -

ಕಳೆದ 18 ವರ್ಷಗಳಿಂದ ಸುಡುಗಾಡುಸಿದ್ದ ಸಮುದಾಯದ ಕುಟುಂಬಗಳು ಬೆಟ್ಟದ ಸಾತೇನಹಳ್ಳಿಯಲ್ಲಿ ವಾಸಿಸುತ್ತಿದ್ದಾರೆ. ಅವರ ಮೇಲೆ ಕಳೆದ 10 ವರ್ಷಗಳಿಂದ ನಿರಂತರ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಳೆದ ತಿಂಗಳು (2024ರ ಜನವರಿ), ಸಮುದಾಯದ ಮೂವರ ಮೇಲೆ ಸವರ್ಣೀಯರು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಸಮುದಾಯದ ಮಂಜುಳ ಎಂಬವರು ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಐವರು ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜನವರಿ 28ರಂದು ಪ್ರಬಲ ಜಾತಿಯ ಡ್ರೈವರ್‍‌ ತುಂಗಾ ಎಂಬಾತ ತನ್ನ ಟ್ರ್ಯಾಕ್ಟರ್‌ನಿಂದ ಸುಡುಗಾಡುಸಿದ್ದ ಸಮುದಾಯದ ರಾಮಚಂದ್ರ ಎಂಬವರ ಬೈಕ್‌ಗೆ ಢಿಕ್ಕಿ ಹೊಡೆದಿದ್ದ. ಘಟನೆ ಸಂಬಂಧ ಪೊಲೀಸ್‌ ಠಾಣೆಗೆ ದೂರು ನೀಡದಂತೆ ತುಂಗಾ ಸೇರಿದಂತೆ ಐವರು ಪ್ರಬಲ ಜಾತಿಯವರು ರಾಮಚಂದ್ರ-ಮಂಜುಳ ಅವರ ಮನೆಯ ಬಳಿ ಹೋಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಘಟನೆ ಬಗ್ಗೆ ದೂರು ನೀಡಿರುವ ಮಂಜುಳ, “ನಮ್ಮ ಮನೆ ಬಳಿ ಬಂದಿದ್ದ ಪ್ರಬಲ ಜಾತಿ ಐವರು ನಮಗೆ ಬೆದರಿಕೆ ಹಾಕಿದ್ದಾರೆ. ಅಪಘಾತ ಸಂಬಂಧ ದೂರು ನೀಡಿದರೆ, ನಿಮ್ಮನ್ನು ಕೊಲೆ ಮಾಡುತ್ತೇವೆಂದು ಬೆದರಿಕೆ ಹಾಕಿದ್ದಾರೆ. ತನ್ನನ್ನು ಎಳೆದಾಡಿ, ನೆಲಕ್ಕೆ ಬೀಳಿಸಿ ಹಲ್ಲೆ ಮಾಡಿದ್ದಾರೆ. ತನ್ನ ಪತಿ ರಾಮಚಂದ್ರ ಮತ್ತು ಸಮುದಾಯದ ಮಂಜಣ್ಣ ಮೇಲೂ ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ್ದಾರೆ. ಗುಡಿಸಲುಗಳಿಗೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ಮಂಜುಳ ಅವರ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಡ್ರೈವರ್ ತುಂಗಾ, ಮಹೇಶ, ಅಶೋಕ, ನಾಗೇಶ ಮತ್ತು ಮತ್ತೊಬ್ಬ ಮಹೇಶ ಎಂಬವರ ವಿರುದ್ಧ ಐಪಿಸಿ ಸೆಕ್ಷನ್‌ 354, 324, 323, 504, 506, 149 ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಲೆಮಾರಿ ಬುಡಕಟ್ಟು ಮಹಾಸಭಾಕ್ಕೆ ಪತ್ರ

ಗ್ರಾಮದಲ್ಲಿ ಸುಡುಗಾಡುಸಿದ್ದ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಅಲೆಮಾರಿ ಬುಡಕಟ್ಟು ಮಹಾಸಭಾಕ್ಕೆ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಅಧ್ಯಕ್ಷ ಹನುಮಂತ ಬಿ.ಎಲ್‌ ಪತ್ರ ಬರೆದಿದ್ದಾರೆ. “ಬೆಟ್ಟದ ಸಾತೇನಹಳ್ಳಿ ಗ್ರಾಮದಲ್ಲಿ ಸುಮಾರು 18 ವರ್ಷಗಳಿಂದ ವಾಸ ಮಾಡುತ್ತಿರುವ 12 ಸುಡುಗಾಡುಸಿದ್ದ ಕುಟುಂಬಗಳ ಮೇಲೆ ಬೆಟ್ಟದ ಸಾತೇನಹಳ್ಳಿಯ ಕೆಲ ಜಾತಿವಾದಿ, ಸವರ್ಣಿಯರು ದೌರ್ಜನ್ಯ ಎಸಗುತ್ತಿದ್ದಾರೆ. ಈ ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ಸರ್ಕಾರ 2020ರಲ್ಲಿ ಅರ್ಧ ಎಕರೆ ಜಾಗ ಮಂಜೂರು ಮಾಡಿದೆ. ಆದರೆ, ಇದುವರೆಗೂ ಅವರಿಗೆ ಮೂಲ ಸೌಕರ್ಯಗಳನ್ನು ನೀಡದಂತೆ ಕೆಲ ರಾಜಕೀಯ ವ್ಯಕ್ತಿಗಳು ತಡೆದಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಜಾತಿ ದೌರ್ಜನ್ಯ | ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟ ಸವರ್ಣೀಯರು

“ಈ ಕುಟುಂಬಗಳನ್ನು ಗ್ರಾಮದಿಂದ ಖಾಲಿ ಮಾಡಿಸಲು ಗ್ರಾಮದ ಸವರ್ಣೀಯರು ಯತ್ನಿಸುತ್ತಿದ್ದಾರೆ. ಇದಕ್ಕೆ, ರಾಜಕೀಯ ಪ್ರಭಾವಿಗಳ ಬೆಂಬಲವೂ ಇದೆ. ಹೀಗಾಗಿ, ಪದೇ ಪದೇ ಮಹಿಳೆಯರು, ಮಕ್ಕಳು ಏನ್ನದೇ ಸಮುದಾಯದ ಎಲ್ಲರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಸಮುದಾಯದ ಜನರನ್ನು ಕಳ್ಳರಂತೆ ನೋಡಲಾಗುತ್ತಿದೆ. ದೌರ್ಜನ್ಯ ಎಸಗುತ್ತಿರುವ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಅಲೆಮಾರಿ ಸಮುದಾಯದ ಕುಟುಂಬಗಳಿಗೆ ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...