ಹಾಸನ | ಬಿಜೆಪಿ-ಜೆಡಿಎಸ್‌ ಮೈತ್ರಿಯ ಸುಳಿವು ಕೊಟ್ಟ ಪ್ರೀತಂ ಗೌಡ

Date:

  • ʼಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ, ಜೆಡಿಎಸ್‌ನವರು ಬರೋದು ನಮ್ಮತ್ರನೆʼ
  • ಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ ಎಂದ ಅಶ್ವತ್ಥನಾರಾಯಣ

ಹಾಸನ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಪ್ರೀತಂ ಗೌಡ ಪ್ರಚಾರದ ವೇಳೆ ಹೊಸ ಬಾಂಬ್ ಸಿಡಿಸಿದ್ದು, ಜೆಡಿಎಸ್‌ಗೆ ಮತ ಹಾಕಿದ್ರೆ ನಮಗೇ ಮತ ಹಾಕಿದಂತೆ ಎಂದಿದ್ದಾರೆ.

“ಜನತಾದಳಕ್ಕೆ ಮತ ಹಾಕಿದರೂ ಬಿಜೆಪಿಗೆ ಮತ ಹಾಕಿದ ಲೆಕ್ಕಾನೆ. ದೇವೇಗೌಡರು, ಮೋದಿ ಸಾಹೇಬ್ರು ಮಾತನಾಡಿಕೊಂಡಿದ್ದಾರೆ. ಏಕೆಂದರೆ, ಜೆಡಿಎಸ್ 20 ಇಲ್ಲ 25 ಸೀಟು ಅಷ್ಟೇ ಪಡೆಯೋದು. ಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ. ಹಾಗೆಯೇ ಜೆಡಿಎಸ್ ಅವರು ಬರೋದು ನಮ್ಮತ್ರಕ್ಕೆ. ನೀವು ಜೆಡಿಎಸ್‌ಗೆ ವೋಟು ಹಾಕಿದರೂ ನನ್ನ ಹತ್ರಕ್ಕೇ ಬರಬೇಕು” ಎನ್ನುವ ಮೂಲಕ ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಒಪ್ಪಂದ ನಡೆಯುತ್ತಿರುವ ಬಗ್ಗೆ ಸುಳಿವು ನೀಡಿದ್ದಾರೆ. ಶಾಸಕರ ಮಾತಿನ ವಿಡೀಯೊ ಎಲ್ಲಡೆ ಹರಿದಾಡುತ್ತಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ದೇವರ ಮುಂದೆ ಮಂಗಳಾರತಿ ಮಾಡಿ ನನಗೆ ಮತ ನೀಡುವುದಾಗಿ ಮಾತು ಕೊಡಿ; ಪ್ರೀತಂ ಗೌಡ ಒತ್ತಾಯ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರೀತಂ ಗೌಡರ ಮಾತುಗಳಿಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಪ್ರತಿಕ್ರಿಯಿಸಿದ್ದು, “ಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ. ಇವೆಲ್ಲ ಸುಳ್ಳು ಹೇಳಿಕೆಗಳು, ಯಾರೂ ಕೂಡ ಯಾರೊಂದಿಗೂ ಮಾತನಾಡಿಲ್ಲ. ಜೆಡಿಎಸ್‌ ನಮ್ಮ ಪ್ರತಿಸ್ಪರ್ಧಿ, ಇದರಲ್ಲಿ ಯಾವುದೇ ಒಪ್ಪಂದ ಇಲ್ಲ” ಎಂದು ಹೇಳಿದ್ದಾರೆ.

“ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬಿಜೆಪಿಯ ಪ್ರತಿಸ್ಪರ್ಧಿಗಳು. ಅವುಗಳನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಯಾವುದೇ ಪಕ್ಷಗಳೊಂದಿಗೂ ಅಡ್ಜಸ್ಟ್‌ಮೆಂಟ್‌ ಇಲ್ಲ. ಯಾವುದೇ ಒಪ್ಪಂದ ಇಲ್ಲ. ಎಲ್ಲ ಕ್ಷೇತ್ರದಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ಈ ರೀತಿಯ ಬೇಜವಾಬ್ದಾರಿ ಹೇಳಿಕೆಗಳನ್ನು ಎಲ್ಲಿಯೂ ನೀಡಬಾರದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

ಚಿತ್ರದುರ್ಗ | ಅಸಮಾನತೆ ಹೋಗಲಾಡಿಸುವುದೇ ಶೋಷಿತ ಸಮುದಾಯಗಳ ಏಳಿಗೆಗೆ ಪರಿಹಾರ: ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರಿಂದ ಸೃಷ್ಟಿಯಾಗಿದ್ದಲ್ಲ. ಸ್ವಾರ್ಥ ಮನುಷ್ಯನ ಸೃಷ್ಟಿ, ಅಸಮಾನತೆ ಹೋಗಲಾಡಿಸದೆ...

ಉಡುಪಿ | ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳ: ಸುರೇಶ್ ಕಲ್ಲಾಗರ

ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳವಾಗುತ್ತಿದೆ. ಆಟೋರಿಕ್ಷಾ ಚಾಲಕರು ತಮ್ಮ...

ಬೀದರ್‌ | ಜೆಜೆಎಂ ಕಾಮಗಾರಿ ಅಪೂರ್ಣ: ಕೆಸರು ಗದ್ದೆಯಂತಾದ ರಸ್ತೆಗಳು

ಮಳೆಗೆ ಕೆಸರು ಗದ್ದೆಯಂತಾದ ರಸ್ತೆ, ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ...