ಹಾಸನ l ಎತ್ತಿನಹೊಳೆ ಯೋಜನೆಯಿದ್ದರೂ ನೀರಿನ ಹಾಹಾಕಾರ ತಪ್ಪಿಲ್ಲ: ಜಾನೆಕೆರೆ ಗ್ರಾಮಸ್ಥರ ಅಳಲು

Date:

ಅರೆ ಮಲೆನಾಡು ಎಂದೆನಿಸಿಕೊಂಡಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಹಸಿರಿನಿಂದ ಕೂಡಿದ್ದು, ಅನೇಕ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ನಾಯಕರು ಒಗ್ಗೂಡಿ ಎತ್ತಿನಹೊಳೆ ಯೋಜನೆಯನ್ನು ಉದ್ಘಾಟನೆ ಮಾಡಿದ್ದರು.

- Advertisement -
Screenshot 2024 11 27 21 44 12 45 6012fa4d4ddec268fc5c7112cbb265e7

ಎತ್ತಿನಹೊಳೆ ಯೋಜನೆಯ ಮೂಲಕ ಅರ್ಧ ರಾಜ್ಯಕ್ಕೆ ಕುಡಿಯುವ ನೀರು ಕೊಟ್ಟ ಹೆಗ್ಗಳಿಕೆ ಸಕಲೇಶಪುರ ತಾಲೂಕಿಗೆ ಇದೆ. ಆದರೆ, ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾನೆಕೆರೆ ಗ್ರಾಮದಲ್ಲಿ ವಾಸಿಸುವ ನಿವಾಸಿಗಳು ಮಾತ್ರ ನೀರಿಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಕಲೇಶಪುರ ಪಟ್ಟಣದಿಂದ ಕೇವಲ ಐದಾರು ಕಿಲೋಮೀಟರ್ ದೂರದಲ್ಲಿ ಜಾನೆಕೆರೆ ಎಂಬ ಗ್ರಾಮವಿದೆ. ಈ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ವಾಸಿಸುತ್ತಿರುವ ಮೂಲ ನಿವಾಸಿಗಳು, ಒಕ್ಕಲಿಗ, ಶೆಟ್ಟಿ, ಲಿಂಗಾಯತ ಹಾಗೂ ದಲಿತ ಸಮುದಾಯದವರು ಸೇರಿದಂತೆ 25ರಿಂದ 30 ಕುಟುಂಬದವರು ವಾಸ ಮಾಡುತ್ತಿದ್ದಾರೆ. ಆದರೆ ಮೂಲಭೂತ ಸೌಕರ್ಯ ಮಾತ್ರ ಶೂನ್ಯವಾಗಿದೆ.

Screenshot 2024 11 27 21 46 42 34 6012fa4d4ddec268fc5c7112cbb265e7

“ಕುಡಿಯುವ ನೀರು ಸೇರಿದಂತೆ, ಆನೇಕ ಸೌಲಭ್ಯದಿಂದ ಗ್ರಾಮಸ್ಥರು ವಂಚಿತರಾಗಿದ್ದಾರೆ. ಪ್ರತಿದಿನ ಕುಡಿಯುವ ನೀರಿಗಾಗಿ ಒಂದೆರಡು ಕಿಲೋಮೀಟ‌ರ್ ಅಲೆದಾಡಿ ಬಿಂದಿಗೆಗಳಿಗೆ ನೀರು ತುಂಬಿಸಿ ತಲೆಯ ಮೇಲೆ ಬಿಂದಿಗೆ ಹೊತ್ತು ಅಥವಾ ಬೈಕ್‌ಗಳ ಮೂಲಕ ನೀರು ಹೊತ್ತೊಯ್ಯುವ ಪರಿಸ್ಥಿತಿ ಎದುರಾಗಿದೆ” ಎಂದು ಗ್ರಾಮಸ್ಥ ಸಾಗರ್ ಈ ದಿನ.ಕಾಮ್ ಜತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.

Screenshot 2024 11 27 21 44 26 91 6012fa4d4ddec268fc5c7112cbb265e7

ಸಕಲೇಶಪುರ ತಾಲೂಕಿನಿಂದ ಎತ್ತಿನಹೊಳೆ ಯೋಜನೆಯ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ನೂರಾರು ಕಿಲೋಮೀಟರ್‌ವರೆಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಇಲ್ಲಿನ ನಿವಾಸಿಗಳು ಕುಡಿಯುವ ನೀರಿಗೆ ಪರದಾಡುವಂತಹ ಪರಿಸ್ಥಿತಿ ಈ ಗ್ರಾಮದಲ್ಲಿ ನಿರ್ಮಾಣವಾಗಿರುವುದು ನಿಜಕ್ಕೂ ದುರದೃಷ್ಟವೇ ಎನ್ನಬಹುದು.

ಇದನ್ನೂ ಓದಿದ್ದೀರಾ?ಹಾಸನ l ಪ್ರೇಯಸಿ ಕೊಲೆಗೆ ಯತ್ನ; ಆರೋಪಿ ಮೋಹಿತ್ ಬಂಧನ

“ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಅಷ್ಟೇ ಅಲ್ಲದೆ, ವಿದ್ಯುತ್‌ ಕಂಬದಲ್ಲಿ ದೀಪ, ರಸ್ತೆ ಸಂಪರ್ಕವಿಲ್ಲದೆ ಸ್ಥಳೀಯರು ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆದರೆ, ಇಲ್ಲಿ ದಲಿತ ಸಮುದಾಯಕ್ಕೆ ಸೇರಿದ ನಾಲ್ಕು ಕುಟುಂಬಗಳು ಮಾತ್ರ ಹೆಚ್ಚಿನ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಲವಾರು ಸಮಸ್ಯೆಗಳಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಬೇಸರ ತಂದಿದೆ. ಈ ವಿಚಾರ ಕುರಿತು ಸಂಬಂಧಪಟ್ಟ ಕ್ಷೇತ್ರದ ಶಾಸಕರು ಹಾಗೂ ಅಧಿಕಾರಿಗಳು ಆದಷ್ಟು ಬೇಗ ಈ ಭಾಗದ ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಸ್ಥಳೀಯರು ಒತ್ತಾಯಿಸಿದರು.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...