ಹಾಸನ | ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಕೂಲಿಕಾರ್ಮಿಕ ಪಾರು

Date:

ಕೂಲಿ ಕಾರ್ಮಿಕರೊಬ್ಬರು ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ.

- Advertisement -

ಕೆಸಗುಲಿ ಗ್ರಾಮದ ಅಡಿಕೆ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ತಿಮ್ಮಯ್ಯ ಎಂಬ ಕೂಲಿಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿ‌ದ್ದು, ತಮ್ಮ ಜೊತೆಯಿದ್ದ ತಿರುಮಲ ಎಂಬ ಯುವಕನನ್ನೂ ಕೂಡ ಅಪಾಯದಿಂದ ಪಾರು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಭಾನುವಾರ ಸಂಜೆ ಎಂದಿನಂತೆ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾಡಾನೆ ದಾಳಿಯಿಂದ ಪಾರಾದ ಕಾರ್ಮಿಕ ತಿಮ್ಮಯ್ಯ, ಓಡಿಹೋಗಿ ಮಾಲೀಕನ ಮನೆಯ ಮುಂದೆ ನಿಂತಿದ್ದ ಕಾರಿನ ಕೆಳಗೆ ಕೆಲಕಾಲ ಅವಿತುಕೊಂಡು ಮಲಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಪಿಲಿಚಾಮುಂಡಿ ದೇವಸ್ಥಾನದ ಭಂಡಾರ ಮನೆ ಧ್ವಂಸ; ಮೂವರ ಬಂಧನ

ಕರಡಿ ಎಂಬ ಹೆಸರಿನ ಆನೆ ಈ ಹಿಂದೆ ಬಿಕ್ಕೋಡಿನಲ್ಲಿ ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಿದ್ದು, ಐವರನ್ನು ಗಾಯಗೊಳಿಸಿತ್ತು. ಒಂಟಿಯಾಗಿ ಸಂಚರಿಸುವ ಈ ಕಾಡಾನೆ ಮನುಷ್ಯರನ್ನು ಕಂಡರೆ ದಾಳಿ ಮಾಡಲು ಮುಂದಾಗುತ್ತದೆ. ಅರಣ್ಯ ಇಲಾಖೆ ಸಿಬ್ಬಂದಿ ಈ ಕಾಡಾನೆ ಮೇಲೆ ನಿಗಾ ವಹಿಸುತ್ತಿದ್ದು, ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...