ಹಾಸನ | ನಿಲ್ಲದ ಕಾಡಾನೆ ಹಾವಳಿ; ಮಹಿಳೆ ಬಲಿ

Date:

ಶುಕ್ರವಾರ ಮುಂಜಾನೆ ಕಾಫಿ ತೋಟಕ್ಕೆ ತೆರಳಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ವಡೂರು ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಅದೇ ಗ್ರಾಮದ ಕೂಲಿ ಕಾರ್ಮಿಕ ಮಹಿಳೆ ಪೂರ್ಣಿಮಾ ಮೃತಪಟ್ಟಿದ್ದಾರೆ.

ಮಹಿಳೆಯ ಸೊಂಟದ ಭಾಗಕ್ಕೆ ಆನೆ ಬಲವಾಗಿ ತುಳಿದಿದೆ. ಪ್ರಜ್ಙಾಹೀನ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ದಾಖಲಾದ ಕೆಲವೇ ನಿಮಿಷಗಳಲ್ಲಿ ಆಕೆ ಮೃತಪಟ್ಟಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಕಲೇಶಪುರ ತಾಲೂಕಿನಲ್ಲಿ ಇದುವರೆಗೂ 78 ಮಂದಿ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಷ್ಟೊಂದು ಸಾವು-ನೋವುಗಳಾಗುತ್ತಿದ್ದರೂ ಅರಣ್ಯ ಇಲಾಖೆ, ಜಿಲ್ಲಾಡಳಿತ, ಜನಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರವೂ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...