ಹಾಸನ | ಕರಾಳ ಕಾರ್ಮಿಕ ಸಂಹಿತೆ ಜಾರಿಗೆ ವಿರೋಧ: ಕಾರ್ಮಿಕರ ಹೋರಾಟ ಯಶಸ್ವಿ

Date:

Advertisements

ದೇಶದಲ್ಲಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡದಂತೆ ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ಶ್ರಮಿಕ ವರ್ಗಗಳ ವಿರೋಧಿ ನೀತಿ ಖಂಡಿಸಿ ಹಾಸನ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಖಿಲ ಭಾರತ ಕಾರ್ಮಿಕರ ಸಾರ್ವತ್ರಿಕ ಮುಷ್ಕರ ಹಿನ್ನೆಲೆಯಲ್ಲಿ ಹಲವು ಕಾರ್ಮಿಕ ಸಂಘಟನೆಗಳು ನಡೆಸಿದ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು.

ಜಿಲ್ಲಾ ಕೇಂದ್ರದಂತೆಯೇ ಪ್ರತಿ ತಾಲೂಕು ಕೇಂದ್ರಗಳಲ್ಲೂ ಕರಾಳ ಕಾರ್ಮಿಕ ಸಂಹಿತೆ ವಿರೋಧಿಸಿ ಕಾರ್ಮಿಕರ ಮೆರವಣಿಗೆ, ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಮಾತನಾಡಿ, “ದೇಶದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಶ್ರಮಿಕ ಶಕ್ತಿಯನ್ನು ಕಾರ್ಪೊರೇಟ್ ಕಂಪನಿಗಳ ಸೇವಕರನ್ನಾಗಿ ಮಾಡಲು ವೇತನ ಸಂಹಿತೆಯಲ್ಲಿ 4 ಕಾನೂನು, ಕೈಗಾರಿಕಾ ಬಾಂಧವ್ಯ ಸಂಹಿತೆಯಲ್ಲಿ 3 ಕಾನೂನು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆಯಲ್ಲಿ 13 ಕಾನೂನು ಹಾಗೂ ಸಾಮಾಜಿಕ ಭದ್ರತಾ ಸಂಹಿತೆಯಲ್ಲಿ 9 ಕಾನೂನು ಸೇರಿದಂತೆ ಒಟ್ಟು 29 ಕಾನೂನುಗಳನ್ನು 4 ಸಂಹಿತೆಗಳಲ್ಲಿ ರೂಪಿಸಲಾಗಿದೆ. ಇದನ್ನು ಕೂಡಲೇ ಕೈ ಬಿಡಬೇಕು” ಎಂದು ಆಗ್ರಹಿಸಿದರು.

Advertisements
ಅರಸೀಕೆರೆಯಲ್ಲಿ ಪ್ರತಿಭಟನೆ

“ದೇಶದಲ್ಲಿ ಅತಿಹೆಚ್ಚು ಅಸಂಘಟಿತ, ಸ್ವೀಂ ಮತ್ತು ಅನೌಪಚಾರಿಕ ಕಾರ್ಮಿಕರನ್ನು ಕಾನೂನುಗಳಡಿ ತರಬೇಕು. ದಿನಕ್ಕೆ ₹600 ವೇತನ ನಿಗದಿ ಮಾಡಬೇಕೆಂಬ ಕೇಂದ್ರ ಕಾರ್ಮಿಕ ಸಂಘಟನೆಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಇದೀಗ ಕಾರ್ಮಿಕರ ದುಡಿಯುವ ಅವಧಿ ಹೆಚ್ಚಳ ಮಾಡುವ ಹುನ್ನಾರ ನಡೆಯುತ್ತಿದೆ. ಹೀಗಾಗಿ 8 ಗಂಟೆ ಕೆಲಸದ ಅವಧಿ ಕಾಯಂ, ಕೆಲಸಕ್ಕೆ ತಕ್ಕ ವೇತನ ನೀಡಬೇಕು. ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

“ಎಲ್ಲ ಸಂಘಟತ, ಅಸಂಘಟಿತ ಕಾರ್ಮಿಕರಿಗೆ ರಾಷ್ಟ್ರವ್ಯಾಪಿ ₹26,000 ಹಾಗೂ ರಾಜ್ಯವ್ಯಾಪಿ ₹36,000 ಕನಿಷ್ಠ ವೇತನ ನಿಗದಿಪಡಿಸಬೇಕು. ಕನಿಷ್ಠ ಮಾಸಿಕ ₹9,000 ಪಿಂಚಣಿ ನೀಡಿ ಸಾಮಾಜಿಕ ಭದ್ರತೆ ಖಾತ್ರಿ ಪಡಿಸಬೇಕು. ಎನ್‌ಪಿಎಸ್ ಮತ್ತು ಯುಪಿಎಸ್ ರದ್ದುಪಡಿಸಿ, ಹಳೆಯ ಪೆನ್ಷನ್‌ ನೀತಿ ಮರುಸ್ಥಾಪಿಸಬೇಕು” ಎಂದು ಒತ್ತಾಯಿಸಿದರು.

ಬೇಲೂರು ಪ್ರತಿಭಟನೆ

“ಎಲ್ಲಕ್ಕಿಂತ ಮುಖ್ಯವಾಗಿ ಬೆಲೆ ಏರಿಕೆ ನಿಯಂತ್ರಿಸಬೇಕು. ಆಹಾರ, ಔಷಧಿಗಳು, ಕೃಷಿ ಸಾಮಗ್ರಿ ಮುಂತಾದ ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ತೆಗೆಯಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಕೇಂದ್ರೀಯ ಅಬಕಾರಿ ಸುಂಕ ಇಳಿಸಬೇಕು. ಸಾರ್ವಜನಿಕ ವಿತರಣಾ ವ್ಯವಸ್ಥೆ ಸಾರ್ವತ್ರಿಕರಣಗೊಳಿಸಿ ಆಹಾರ ಭದ್ರತೆ ಖಾತ್ರಿ ಪಡಿಸಬೇಕು. ಎಲ್ಲರಿಗೂ ಉಚಿತ ಶಿಕ್ಷಣ, ಆರೋಗ್ಯ, ನೀರು ಮತ್ತು ನೈರ್ಮಲ್ಯದ ಹಕ್ಕು ಹಾಗೂ ವಸತಿಯನ್ನು ಖಾತ್ರಿಪಡಿಸಬೇಕು. ನೂತನ ಶಿಕ್ಷಣ ನೀತಿ-2020 ರದ್ದುಪಡಿಸಬೇಕು. ಸಂವಿಧಾನದ ಆಶಯಗಳ ಮೇಲಿನ ದಾಳಿ ನಿಲ್ಲಿಸಬೇಕು. ರೈತರ ಒಪ್ಪಿಗೆ ಇಲ್ಲದೆ ಬಲವಂತದ ಭೂ ಸ್ವಾಧೀನ ಹಾಗೂ 3 ಕರಾಳ ಕೃಷಿ ಕಾಯಿದೆ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು” ಎಂದು ಆಗ್ರಹಿಸಿದರು.

ಕಾರ್ಮಿಕರ ಪ್ರತಿಭಟನೆ

ಇದೇ ವೇಳೆ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟು ಎನ್ ಆರ್ ವೃತ್ತದಲ್ಲಿ ಮಾನವ ಸರಪಣಿ ರಚಿಸಿ, ರಸ್ತೆ ತಡೆದು ಅಲ್ಲಿಯೇ ಕುಳಿತು ಹೋರಾಟ ಮಾಡುತ್ತ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಸೇರಿದಂತೆ ಕೆಲವರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಖಿಲ ಭಾರತ ಮುಷ್ಕರ; ರೈತ‌ ಕಾರ್ಮಿಕ ಪ್ರಗತಿಪರ ಸಂಘಟನೆಗಳ ಪ್ರತಿಭಟನಾ ರ್ಯಾಲಿ

ಪ್ರತಿಭಟನೆಯಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಎಂ ಸಿ ಡೋಂಗ್ರೆ, ಮಧು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ ಬಿ ಪುಷ್ಪ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಎಸ್ ಎನ್ ಲಕ್ಷ್ಮಿ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಅರವಿಂದ್, ಎಐಟಿಯುಸಿ ಮುಖಂಡೆ ನಾಗರತ್ನ, ಪ್ಲಾಂಟೇಷನ್ ಕಾರ್ಮಿಕರ ಸಂಘದ ಕಾರ್ಯದರ್ಶಿ ಸೌಮ್ಯ, ವಿದ್ಯಾರ್ಥಿ ಸಂಘಟನೆಯ ರಮೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X