ಪ್ರೀತಿಯನ್ನು ನಿರಾಕರಿಸಿದಕ್ಕೆ ಸ್ನೇಹಿತೆಯನ್ನೇ ಯುವಕನೊಬ್ಬ ಕೊಂದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಮೊಸಳೆಹೊಸಳ್ಳಿ ಗ್ರಾಮದ ಯುವತಿ ಸುಚಿತ್ರಾ (20) ಹತ್ಯೆಯಾದ ದುರ್ದೈವಿ. ಗುರುವಾರ ಬೆಳಗ್ಗೆ ಕಾಲೇಜಿಗೆ ತೆರಳಿದ್ದ ಸುಚಿತ್ರಾಳನ್ನು ಆಕೆಯ ಸ್ನೇಹಿತ ತೇಜಸ್ ಎಂಬಾತ ಮಾತನಾಡಬೇಕೆಂದು ಹಾಸನದ ಅಗಿಲೆ ಗ್ರಾಮದ ಬಳಿಯಿರುವ ಕುಂತಿ ಬೆಟ್ಟಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಪ್ರೀತಿಯ ಬಗ್ಗೆ ಮಾತನಾಡಿದ್ದಾನೆ. ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳೀಯರು ಮಾಹಿತಿ ನೀಡಿದ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಮಗಳನ್ನು ಕಳೆದುಕೊಂಡ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.