ಹಾಸನ | ಕುಡಿತ ಬಿಡಿಸಲು ಮದ್ಯವರ್ಜನ ಕೇಂದ್ರಕ್ಕೆ ಸೇರಿದ್ದ ಯುವಕ ಸಾವು; ಕೊಲೆ ಆರೋಪ

Date:

ಮದ್ಯದ ಚಟ ಬಿಡಿಸಲು ಮದ್ಯವರ್ಜನ ಕೇಂದ್ರವೊಂದಕ್ಕೆ ಸೇರಿಸಲಾದ ಯುವಕನೊಬ್ಬ ಶವವಾಗಿ ಮರಳಿರುವ ಘಟನೆ ಹಾಸನದಲ್ಲಿ ನಡೆದಿದ್ದು, ತಮ್ಮ ಮಗನ್ನು ಹತ್ಯೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಹಾಸನ ತಾಲೂಕಿನ ದೊಡ್ಡಮೇದೂರು ಗ್ರಾಮದ ಪದ್ಮೇಗೌಡ (38) ಮೃತ ವ್ಯಕ್ತಿ. ಪದ್ಮೇಗೌಡನನ್ನು ಹಾಸನದ ವಿಜಯನಗರದಲ್ಲಿರುವ ಪುನರ್ ಜೀವನ ವಸತಿ ಮದ್ಯದ ಚಟ ಬಿಡಿಸುವ ಕೇಂದ್ರಕ್ಕೆ ಸೇರಿಸಲಾಗಿತ್ತು.

“ಮದ್ಯವರ್ಜನ ಕೇಂದ್ರದಲ್ಲಿ ನಮ್ಮ ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಅದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಕಾರಣ ಆಸ್ಪತ್ರೆಗೆ ಸೇರಿಸಿದ್ದಾರೆ. ನಮ್ಮ ಮಗನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ” ಎಂದು ಪೋಷಕರು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇತ್ತೀಚೆಗಷ್ಟೇ ಮದುವೆಯಾಗಿದ್ದ ಪದ್ಮೇಗೌಡ ಬಳಿಕವೂ ಕುಡಿತದ ಚಟ ಬಿಟ್ಟಿರಲಿಲ್ಲ. ಹೀಗಾಗಿ ಹೇಗಾದರೂ ಮಾಡಿ ಮಗನನ್ನು ಹೊಸ ಮನುಷ್ಯನನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ಪೋಷಕರು ಆತನ ಕುಡಿತದ ಚಟ ಬಿಡಿಸಲು ನಾಲ್ಕು ದಿನದ ಹಿಂದಷ್ಟೇ ಪುನರ್ವಸತಿ ಕೇಂದ್ರಕ್ಕೆ ಸೇರಿಸಿದ್ದರು ಎಂದು ತಿಳಿದುಬಂದಿದೆ.

ಪುನರ್ವಸತಿ ಕೇಂದ್ರದಲ್ಲಿ ತೀವ್ರ ಸುಸ್ತಿನಿಂದ ಬಳಲುತ್ತಿರುವುದರಿಂದಾಗಿ ಆತನನ್ನು ಪುನರ್ವಸತಿ ಕೇಂದ್ರದ ಸಿಬ್ಬಂದಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಪದ್ಮೇಗೌಡ ನಿಧನರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಿರಿಯ ದಲಿತ ಹೋರಾಟಗಾರ ಜಿಗಣಿ ಶಂಕರ್‌ ಇನ್ನಿಲ್ಲ

ಶುಕ್ರವಾರ ಬೆಳಿಗ್ಗೆ ಊರಿನಲ್ಲಿ ಪದ್ಮೇಗೌಡರ ಅಂತ್ಯಸಂಸ್ಕಾರಕ್ಕೆ ಮುನ್ನ ಸ್ನಾನ ಮಾಡಿಸುವ ವೇಳೆ ಮೃತದೇಹದಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ. ಹೀಗಾಗಿ ಪದ್ಮೇಗೌಡನ ಮೇಲೆ‌ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆಂದು ಮೃತನ ಪೋಷಕರು ಆರೋಪ ಮಾಡಿದ್ದು, ಕೇಂದ್ರದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪುನರ್ವಸತಿ ಕೇಂದ್ರದಲ್ಲಿ ನಡೆಯುವ ಚಟುವಟಿಕೆಗಳ ಕೆಲವು ಫೂಟೇಜ್‌ಗಳು ಲಭ್ಯವಾಗಿವೆ. ಇವುಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ಹಲ್ಲೆ ನಡೆದಿರುವುದು ನಿಜವೇ ಎಂದು ಪರೀಕ್ಷಿಸಲಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನದಲ್ಲಿ ಸಂಚಲನ ಮೂಡಿಸಿದ ಪ್ರಭಾವಿ ರಾಜಕಾರಣಿಯ ಸೆಕ್ಸ್‌ ‘ಪೆನ್‌ಡ್ರೈವ್‌’

ಹಾಸನದ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರದ್ದು ಎನ್ನಲಾದ ಸೆಕ್ಸ್‌ ವಿಡಿಯೋಗಳು ವಾಟ್ಸ್‌ಆಪ್‌ಗಳಲ್ಲಿ ಹರಿದಾಡುತ್ತಿದ್ದು...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...