ಹಾಸನ | ಮದುವೆಗೆ ನಿರಾಕರಿಸಿದ ಯುವತಿ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿದ ಯುವಕ

Date:

- Advertisement -

ತನ್ನನ್ನು ಮದುವೆಯಾಗಲು ನಿರಾಕರಿಸಿ ದೂರವಾಗಿದ್ದ ಯುವತಿಯ ಮೇಲೆ ಯುವಕನೊಬ್ಬ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಆಲೂರು ತಾಲೂಕಿನ ಕಾರುಗೋಡು ಗ್ರಾಮದ ಮೋಹಿತ್ ಎಂಬಾತ ತನ್ನ‌ ಮಾಜಿ ಪ್ರೇಯಸಿ ಗಾನವಿ ಮೇಲೆ ದಾಳಿ ಮಾಡಿದ್ದು, ಹತ್ಯೆಗೆ ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಯವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕ ಪರಾರಿಯಾಗಿದ್ದಾನೆ.

ಯುವಕ ಮತ್ತು ಯುವತಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ, ಇಬ್ಬರ ನಡುವೆ ಮನಸ್ಥಾಪ ಉಂಟಾಗಿತ್ತು. ಯುವಕನಿಂದ ಯುವತಿ ದೂರವಾಗಿದ್ದಳು. ಆದರೆ, ತನ್ನನ್ನು ಮದುವೆಯಾಗುವಂತೆ ಆಕೆಗೆ ಮೋಹಿತ್ ನಿರಂತರವಾಗಿ ಪೀಡಿಸುತ್ತಿದ್ದ ಎಂದು ತಿಳಿದುಬಂದಿದೆ.

ಆತನ ಕಾಟದಿಂದ ಬೇಸತ್ತಿದ್ದ ಯುವತಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಳು. ಬಳಿಕ, ಎರಡೂ ಕುಟುಂಬಗಳು ರಾಜಿ ಸಂಧಾನಕ್ಕೆ ಮಾಡಿದ್ದವು. ಇಬ್ಬರೂ ದೂರ ಉಳಿಯಬೇಕೆಂದು ಸೂಚನೆ ನೀಡಿದ್ದರು. ಯುವಕನಿಂದ ಮುಚ್ಚಳಿಕೆ ಪತ್ರವನ್ನೂ ಬರೆಸಿಕೊಂಡಿದ್ದರು ಎಂದು ವರದಿಯಾಗಿದೆ.

ಆದರೆ, ಮಂಗಳವಾರ ಯುವತಿ ಗಾನವಿ ಆಲೂರಿಗೆ ತೆರಳಿದ್ದಾಗ, ಆಕೆಯ ಮೇಲೆ ಮೋಹಿತ್ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ. ಆಕರಯ ತಲೆ ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿವೆ. ಯುವತಿಯನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಲೂರು‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಿ, ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...